ಉಡುಪಿ(ಜೂ,5): ಬೊಡೋಕಾನ್ ಕರಾಟೆ& ಸ್ಪೋರ್ಟ್ಸ್ ಅಸೋಸಿಯೇಷನ್ ಉಡುಪಿ ಇವರು ಅಂಬಲಪಾಡಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕಿರಣ್ಸ್ ಡ್ರಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ವಿದ್ಯಾರ್ಥಿ ಹಾಗೂ ತರಬೇತುದಾರರಾದ ಟಿ. ಶಶಾಂಕ್ ಶೆಣೈ ಸೀನಿಯರ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಕಿಯೋಶಿ ಕಿರಣ್ ಕುಂದಾಪುರ ಇವರ ಶಿಷ್ಯ ಹಾಗೂ ಗಂಗೊಳ್ಳಿ ನಿವಾಸಿ ಟಿ.ದಿನಕರ ಶ್ಯಾನುಭಾಗ್ ಮತ್ತು ಉಷಾ ದಿನಕರ್ ರವರ ಪುತ್ರ .
Day: June 5, 2022
ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಜೂ,5): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ಪ್ರತಿಭಾ ಪ್ರದರ್ಶನ ದಿನ ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 14 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಮಯ ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಹಾಗೂ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು : ಪ್ರತಿಭಾ ಪ್ರದರ್ಶನ – ನೆಲದ ಕಲೆ & ಸಂಸ್ಕೃತಿಯನ್ನುಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮಮೇಲಿದೆ -ಶ್ರೀ ಭಾಸ್ಕರ ಕೊಗ್ಗ ಕಾಮತ್
ಕುಂದಾಪುರ (ಜೂ,5): ನಮ್ಮ ನೆಲೆದ ಕಲೆ ,ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ .ಆ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಯೋಜಿಸುವ ಮಹತ್ವಪೂರ್ಣ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹೇಳಿದರು. ಅವರು ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಡಾ. ಬಿ.ಬಿ. […]










