ಹೆಮ್ಮಾಡಿ (ಜೂ,12): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ,ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇದರ “ಮತ್ಸ ಜ್ಯೋತಿ” ಸಭಾಂಗಣದಲ್ಲಿ ಜೂನ್,12 ರಂದು ನಡೆಯಿತು. ಮೊಗವೀರ ಮಹಾಜನ ಸೇವಾ ಸಂಘ (ರಿ.) ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]
Day: June 12, 2022
ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಗೆಅಗತ್ಯ ವಸ್ತುಗಳ ವಿತರಣೆ
ಗೋಪಾಡಿ(ಜೂ,11): ಗೋಪಾಡಿ ಪಡು ಶಾಲೆಗೆಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಚನ್ ಅವರ ಮನವಿಯ ಮೇರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡುಗೋಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಅಗತ್ಯ ವಸ್ತುವಾದ ಬಟ್ಟಲು ಮತ್ತು ಲೋಟವನ್ನು ಹೋಟೆಲ್ ಉಡುಪಿ ರೆಸ್ಟೋರೆಂಟ್ ಕೊಲ್ಲಾಪುರ ಶಿರೋಲಿ ಉದ್ಯಮಿಯಾದ ಶ್ರೀಮತಿ ಸುನಿತಾ ಪ್ರಕಾಶ್ ಕೋಟೇಶ್ವರ ಮೇಪು ಇವರು ವಿತರಿಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಶೆಟ್ಟಿ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ, […]
ಗಂಗೊಳ್ಳಿ: ಬಿಲ್ಲವ ಹಿತರಕ್ಷಣಾ ವೇದಿಕೆಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ (ಜೂ,11):ಶೈಕ್ಷಣಿಕ ಬೆಳವಣಿಗೆಯಿಂದ ಒಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಪೂರಕವಾಗಿ ಸಂಘಟನೆಗಳು ಶ್ರಮಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ನಿವೃತ್ತ ಬಿಎಸ್ಎನ್ಎಲ್ ಇಂಜಿನಿಯರ್ ಅಣ್ಣಪ್ಪ ಬಿಲ್ಲವ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪಾತ್ರಿ ಗಳಾದ ರಘು ಪೂಜಾರಿ, […]










