ಕುಂದಾಪುರ(ಜೂ,10) : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ವಲಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ .04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕುಂದಾಪುರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಾಗಿರುವ ಕಾಂತರಾಜ್ರವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಉಪವಲಯ ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಕಾರ್ಯವೇನು? ಗಿಡಗಳನ್ನು ಏಕೆ ನಾವು ಬೆಳೆಸಬೇಕು? […]
Month: June 2022
ಕುಂದಾಪುರ: “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ
ಕುಂದಾಪುರ(ಜೂ,14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರವನ್ನು ಜೂ,06 ರಂದು ಆಯೋಜಿಸಲಾಯಿತು. ಸಂಸ್ಥೆಯ ಹಳೆವಿದ್ಯಾರ್ಥಿನಿ ರ್ಯಾಂಕ್ ವಿಜೇತೆ ಡಾ| ಸ್ವಾತಿ ಶೇಟ್ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರ ಹದಿಹರೆಯದ ಸಮಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆಮದ್ದುಗಳನ್ನು ಹೇಗೆ ತಯಾರಿಸಿಕೊಳ್ಳಬಹುದೆಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಕಾರ್ಯಾಗಾರದ […]
ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ
ಕುಂದಾಪುರ( ಜೂ,11): ಎಸ್. ಎಸ್. ಎಲ್. ಸಿ. ೨೦೨೨ರ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನಿರುದ್ಧ ಎಸ್. ಹತ್ವಾರ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ, ಆದಿತ್ಯ ಎಮ್. 623 ಅಂಕದೊoದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಶಾನ್ವಿನ್ ರೋಯ್ಸ್ ಪಿರೇರಾ 620 ಅಂಕ ಗಳಿಸುವುದರೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಶ್ರೀ ಬಿ. […]
ಎಚ್.ಎಮ್.ಎಮ್. ವಿ.ಕೆ.ಆರ್ :ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ
ಕುಂದಾಪುರ(ಜೂ,11): ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ. ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಜೊತೆಜೊತೆಯಾಗಿ ಕೈಜೋಡಿಸಿದಲ್ಲಿ ಶಾಲಾ ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಕುಂದಾಪುರದ ಪುರಸಭೆಯ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ರಕ್ತದಾನ ಶಿಬಿರ
ಹೆಮ್ಮಾಡಿ (ಜೂ,12): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ,ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇದರ “ಮತ್ಸ ಜ್ಯೋತಿ” ಸಭಾಂಗಣದಲ್ಲಿ ಜೂನ್,12 ರಂದು ನಡೆಯಿತು. ಮೊಗವೀರ ಮಹಾಜನ ಸೇವಾ ಸಂಘ (ರಿ.) ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]
ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಗೆಅಗತ್ಯ ವಸ್ತುಗಳ ವಿತರಣೆ
ಗೋಪಾಡಿ(ಜೂ,11): ಗೋಪಾಡಿ ಪಡು ಶಾಲೆಗೆಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಚನ್ ಅವರ ಮನವಿಯ ಮೇರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡುಗೋಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಅಗತ್ಯ ವಸ್ತುವಾದ ಬಟ್ಟಲು ಮತ್ತು ಲೋಟವನ್ನು ಹೋಟೆಲ್ ಉಡುಪಿ ರೆಸ್ಟೋರೆಂಟ್ ಕೊಲ್ಲಾಪುರ ಶಿರೋಲಿ ಉದ್ಯಮಿಯಾದ ಶ್ರೀಮತಿ ಸುನಿತಾ ಪ್ರಕಾಶ್ ಕೋಟೇಶ್ವರ ಮೇಪು ಇವರು ವಿತರಿಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಶೆಟ್ಟಿ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ, […]
ಗಂಗೊಳ್ಳಿ: ಬಿಲ್ಲವ ಹಿತರಕ್ಷಣಾ ವೇದಿಕೆಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ (ಜೂ,11):ಶೈಕ್ಷಣಿಕ ಬೆಳವಣಿಗೆಯಿಂದ ಒಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಪೂರಕವಾಗಿ ಸಂಘಟನೆಗಳು ಶ್ರಮಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ನಿವೃತ್ತ ಬಿಎಸ್ಎನ್ಎಲ್ ಇಂಜಿನಿಯರ್ ಅಣ್ಣಪ್ಪ ಬಿಲ್ಲವ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪಾತ್ರಿ ಗಳಾದ ರಘು ಪೂಜಾರಿ, […]
ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ (ಜೂ,11) : ಜ್ಞಾನಾರ್ಜನೆ ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು. ಆ ನಿಟ್ಟಿನಲ್ಲಿ ಶ್ರದ್ಧೆ ಪ್ರಮಾಣಿಕತೆ ಛಲದೊಂದಿಗೆ ಸಾಗಿದಾಗ ಜೀವನದಲ್ಲಿ ಅದ್ಭುತ ಯಶಸ್ಸನ್ನು ಕಾಣಲು ಸಾಧ್ಯ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಕಾರ್ಯದರ್ಶಿ ಹೆಚ್.ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್.ಸಿ. ಕಾಲೇಜಿನ ಶಿಸ್ತು ನೀತಿ ನಿಯಮಗಳ […]
ಶಿರ್ವ: ರೋವರ್ಸ & ರೇಂಜರ್ಸ್ ಪುನಶ್ಚೇತನಾ ಶಿಬಿರ
ಶಿರ್ವ(ಜೂ, 11): ಸಂತ ಮೇರಿ ಕಾಲೇಜು ಶಿರ್ವ ಇದರ ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಕಾಲೇಜಿನ ರೋವರ್ಸ & ರೇಂಜರ್ಸ್ ಗಳಿಗೆ ಒಂದು ದಿನದ ಪುನಶ್ಚೇತನಾ ಶಿಬಿರವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಶಿಬಿರಕ್ಕೆ ಮುಖ್ಯ ಅತಿಥಿಯಾಗಿ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಶ್ರೀಮತಿ ಸುಮನ ಶೇಖರ್ ಆಗಮಿಸಿ, ಕಾಲೇಜಿನಲ್ಲಿ ರೋವರ್ಸ & ರೇಂಜರ್ಸ್ ಮಹತ್ವ ಹಾಗೂ ರೋವರ್ಸ & ರೇಂಜರ್ಸ್ ಗಳಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಬೇಕಾದ ಮಾರ್ಗದರ್ಶನ […]
ಹೆಸಕುತ್ತೂರು : ಯಕ್ಷಗಾನ ಹೆಜ್ಜೆ ತರಗತಿ ಉದ್ಘಾಟನೆ
ತೆಕ್ಕಟ್ಟೆ (ಜೂ ,11): ಯಕ್ಷಗಾನ ಕಲೆಯನ್ನು ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ ಕಲಿಯುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದೆ ಯಕ್ಷಗಾನದ ದೊಡ್ಡ ಕಲಾವಿದರಾಗದಿದ್ದರೂ, ಯಕ್ಷಗಾನದ ಅಭಿಮಾನಿಗಳಾಗಿ ಈ ಕಲೆಯನ್ನು ಉಳಿಸಿ ಬೆಳೆಸಿ” ಎಂದು ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಹಾಸ್ಯ ಕಲಾವಿದ ಶ್ರೀ ಹಳ್ಳಾಡಿ ಜಯರಾಮ ಶೆಟ್ಟಿ ಹೇಳಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಕ್ಷಗಾನದ ಹೆಜ್ಜೆ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕರಾದ ಶೇಖರ ಕುಮಾರ ಅಧ್ಯಕ್ಷತೆ ವಹಿಸಿದ್ದರು. […]










