ವಂಡ್ಸೆ (ಜು, 30) : ಸುಧಿರ್ಘ 25 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜು,30 ರಂದು ಸೇವೆಯಿಂದ ನಿವ್ರತ್ತರಾದ ನೆಂಪು ಅಂಗನವಾಡಿ ಶಿಕ್ಷಕಿ ಭಾರತಿ ಶೆಟ್ಟಿಯವರನ್ನು ಶ್ರೀ ವಿನಾಯಕ ಯುವಕ ಸಂಘ (ರಿ) ನೆಂಪು ಹಾಗೂ ನೆಂಪು ಗ್ರಾಮಸ್ಥರ ವತಿಯಿಂದ ಅವರ ಸೇವೆಯನ್ನು ಗುರುತಿಸಿ ಬೀಳ್ಕೊಡುಗೆಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪು ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ನೆಂಪುವಹಿಸಿದ್ದರು. […]
Day: July 30, 2022
ಕಾಮನವೆಲ್ತ್ ಕ್ರೀಡಾಕೂಟ : ಕುಂದಾಪುರದ ಗುರುರಾಜ್ ಪೂಜಾರಿಗೆ ಕಂಚಿನ ಪದಕ
Views: 298
ಕುಂದಾಪುರ (ಜು, 30) : ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನವೆಲ್ತ್ ಕ್ರೀಡಾಕೂಟದ 61 ಕೆ.ಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ವಂಡ್ಸೆ ಮೂಲದ ಗುರುರಾಜ್ ಪೂಜಾರಿ ಜೆಡ್ಡು ಕಂಚಿನ ಪದಕ ಪಡೆದು ಸಾಧನೆಗೈದಿದ್ದಾರೆ.ಒಟ್ಟು 269 ಕೆಜಿ ಎತ್ತಿರುವ ಗುರುರಾಜ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಸಾಧನೆಗೈದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಸಿ.ಇ.ಟಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ
Views: 438
ಕಾರ್ಕಳ (ಜು, 30) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ್ಯಾಂಕ್ ಹಾಗೂ ಪಶುವೈದ್ಯಕೀಯ […]










