ಬೆಂಗಳೂರು (ಆ,15): ಇಲ್ಲಿನ ದೇವರಾಜ ಅರಸು ಭವನದಲ್ಲಿ ಇಂದು ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಶ್ರೀ ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ,ಅರುಣ್ ಕುಮಾರ್ ಕಲ್ಗದ್ದೆ,ಕಲ್ಯಣ್ ಕುಮಾರ್, HSBS ರಾಜ್ ಶೇಖರ ಹಾಗೂ ಶಾರದಾ ನಾಯಕ್ ಉಪಸ್ಥಿತರಿದ್ದರು. ವರದಿ : ರಾಘವೇಂದ್ರ ಹಾರ್ಮಣ್
Month: August 2022
ಯುವಶಕ್ತಿ : ನೂತನ ಕಚೇರಿ ಉದ್ಘಾಟನೆ ಯುವಶಕ್ತಿಯಂತಹ ಸಂಸ್ಥೆ ಊರಿನ ಶಕ್ತಿ ಮಾತ್ರವಲ್ಲ, ದೇಶದ ಶಕ್ತಿ : ಆಶಾಲತಾ ಶೆಟ್ಟಿ
ಕುಂದಾಪುರ (ಆ,15) : ಯುವಶಕ್ತಿ ಮಿತ್ರ ಮಂಡಲ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಈ ಊರಿನ ಸಾಕ್ಷಿ ಪ್ರಜ್ಞೆ. ಊರಿನ ಸಮಗ್ರ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಸಂಸ್ಥೆ ಸೂರ್ಯ ಚಂದ್ರರಿರುವ ಕಾಲದವರೆಗೂ ಉಳಿಯಲಿ, ಬೆಳೆಯಲಿ ಎಂದು ಕಾಳಾವರ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಆಶಾಲತಾ ಶೆಟ್ಟಿ ಹೇಳಿದರು. ಯುವಶಕ್ತಿಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಶಕ್ತಿಯಂತಹ ಸಂಸ್ಥೆ ಪ್ರತಿ ಊರಿಗೂ ಅಗತ್ಯ. ವಕ್ವಾಡಿ ಈ ಮಟ್ಟಿಗೆ ಅಭಿವೃದ್ಧಿ […]
ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ರಾಷ್ಟ್ರ ಧ್ವಜ ವಿತರಣೆ
ಕುಂದಾಪುರದ (ಆ.12)ಇಲ್ಲಿನಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ಆಝಾದಿ ಕಾ ಅಮೃತ್ ಮಹೋತ್ಸವ್ ‘ ಆಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಕುಂದಾಪುರ ಇದರ ವತಿಯಿಂದ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳಿಗೆ ರಾಷ್ಟ್ರ ಧ್ವಜ ವಿತರಣೆ ಮಾಡಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರೂ, ಕಾಲೇಜಿನ ಪ್ರಾಂಶುಪಾಲರೂ ಆದ ಶ್ರೀ ನವೀನ್ ಕುಮಾರ ಶೆಟ್ಟಿಯವರು ರಾಷ್ಟ್ರ ಧ್ವಜಕ್ಕೆ ನೀಡಬೇಕಾದ ಗೌರವಸೂಚಕ ನಡಾವಳಿಗಳನ್ನು ವಿವರಿಸಿ ಕಾಲೇಜಿನ ಎಲ್ಲ ಪ್ರಾಧ್ಯಾಪಕರಿಗೆ ಮತ್ತು ಕಛೇರಿ ಸಿಬ್ಬಂಧಿಯವರಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು.
ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ
ಉಡುಪಿ(ಆ,12): ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ (C.A) ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಪ್ರಥಮ ವರ್ಷದ ಸಿ. ಎ ಫೌಂಡೇಶನ್ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಯಲ್ಲಿ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದಿಂದ ಸಮುದ್ರ ಪೂಜೆ
ಕೋಟೇಶ್ವರ( ಆ,12): ಬೀಜಾಡಿ ಕಡಲತೀರದಲ್ಲಿ ಮೊಗವೀರ ಯುವ ಸಂಘಟನೆ(ರಿ),ಉಡುಪಿ ಇದರ ಕೋಟೇಶ್ವರ ಘಟಕ ನೇತ್ರತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಸಮುದ್ರ ಪೂಜೆ ನಡೆಯಿತು. ಗೋಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಶ್ರೀ ಚಿಕ್ಕುಅಮ್ಮ ದೇವರಿಗೆ ಪೂಜೆ ಸಲ್ಲಿಸಿ ಸುಮಾರು 250 ಜನ ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಸಮುದ್ರ ತೀರಕ್ಕೆ ತೆರಳಿ ಸಮುದ್ರ ದೇವನಿಗೆ ಪೂಜೆಸಲ್ಲಿಸಿ ಬಾಗೀನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಗುರಿಕಾರರುಗಳು, ಭಾಗದ ಮೀನುಗಾರರು ಉಪಸ್ತಿತರಿದ್ದರು. […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಫೌಂಡೇಶನ್ ಪರೀಕ್ಷೆ ಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಅ,11): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್(ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ರಡ್ ಅಕೌಂಟೆoಟ್ಸ್ ಆಫ್ ಇಂಡಿಯ ಜೂನ್ 2022 ರಲ್ಲಿ ನೆಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. ಸಂಸ್ಥೆಯ ೬ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ […]
ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕಾರ
ಉಡುಪಿ(ಆ,10): ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ, ಸಾಲಿಗ್ರಾಮದ ಚಿತ್ರಪಾಡಿಯ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕರಿಸಿದರು. 1992ರಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ, 1998ರಲ್ಲಿ ಎಂಜಿಎಂಗೆ ವರ್ಗಾವಣೆಗೊಂಡು ಕಳೆದ 24 ವರ್ಷದಿಂದ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಕಾಲೇಜಿನ ಎನ್ನೆಸ್ಸೆಸ್, ರೆಡ್ ಕ್ರಾಸ್ ಅಧಿಕಾರಿಯಾಗಿ, ಕಾಲೇಜಿನ ಸ್ಟಾಫ್ ಕ್ಲಬ್ಬಿನ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಯಲ್ಲಿ ಕ್ರಿಯೇಟಿವ್ ಕಾಲೇಜ್ ಗೆ ಪ್ರಥಮ ಸ್ಥಾನ
ಉಡುಪಿ (ಆ,07): 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವ್ʼ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ದಿನಾಂಕ : ಆಗಸ್ಟ್ 3 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ವಿಜಯರತ್ನ-2022 ಪ್ರಶಸ್ತಿ ಪ್ರದಾನ
ಕುಂದಾಪುರ(ಅ,7): ವಿಆರ್ಎಲ್ ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ 24X7 ನ್ಯೂಸ್ ಚಾನಲ್ ವತಿಯಿಂದ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಡಿನ 42 ಸಾಧಕರಿಗೆ ಕೊಡಮಾಡುವ ‘ವಿಜಯರತ್ನ-2022’ ಪ್ರಶಸ್ತಿಗೆ ಯಶಸ್ವಿ ಉದ್ಯಮಿ, ಸಮಾಜಸೇವಕ ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಡಾ.ಗೋವಿಂದ ಬಾಬು ಪೂಜಾರಿಯವರು ಭಾಜನರಾದರು. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮವನ್ನು […]