ಹೆಮ್ಮಾಡಿ(ಸೆ,16): ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ಸಂಸ್ಥೆಯ ವಿದ್ಯಾರ್ಥಿಗಳಾದ ಆಯುಷ್ ಜಿ,ಸಾತ್ವಿಕ್,ಪ್ರಜ್ವಲ್, ಅನುಲ್ , ಉನ್ನತಿ ಶೆಟ್ಟಿ ಹಾಗೂ ಅಮಿಷಾ ಚೌದ್ರಿ ಯವರು ಸೆ.21ರಂದು ಜನತಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಉಡುಪಿ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಗೆ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಹಾಗೆಯೇ ಪದವಿಪೂರ್ವ ಬಾಲಕರ ಜಿಲ್ಲಾ ಮಟ್ಟದ ವಾಲಿಬಾಲ್ […]
Day: September 16, 2022
ಸುಣ್ಣಾರಿ: ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಕುಂದಾಪುರ(ಸೆ,16): ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಉಡುಪಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾರ್ಥಿಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವoತೆ ಆಟವಾಡಬೇಕೆಂದು ಹೇಳುತ್ತಾ, ಸಂಸ್ಥೆಯ ಅಚ್ಚುಕಟ್ಟಾದ ಕ್ರೀಡಾ […]
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಶಿಕ್ಷಕರ ದಿನಾಚರಣೆ
ಕುಂದಾಪುರ( ಸೆ,16) : ಪಠ್ಯದ ಜೊತೆಯಲ್ಲಿ ಶಿಕ್ಷಕರು ಕೊಡುವ ಮೌಲ್ಯವೇ ವಿದ್ಯಾರ್ಥಿಯ ಬದುಕು ರೂಪಿಸುವಲ್ಲಿ ಅತಿಮುಖ್ಯ. ಶಿಕ್ಷಕ ವೃತ್ತಿಯಲ್ಲಿ ದೊರೆಯುವಷ್ಟು ಕರ್ತವ್ಯಪರತೆಯ ಖುಷಿ ಬೇರಾವುದೇ ಉದ್ಯೋಗದಲ್ಲಿಲ್ಲ, ಏಕೆಂದರೆ ಈ ವೃತ್ತಿಯಲ್ಲಷ್ಟೇ ಲಂಚ ಭೃಷ್ಟಾಚಾರಗಳಿಲ್ಲ ಎಂದು ಶಂಕರನಾರಾಯಣ ಸರಕಾರಿ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಉದಯ್ ಕುಮಾರ್ ಶೆಟ್ಟಿ ಹೇಳಿದರು. ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ಸನ್ಮಾನ ಸ್ವೀಕರಿಸಿ ಅವರು […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಓಣo ಸಂಭ್ರಮಾಚರಣೆ
ಕುoದಾಪುರ : (ಸೆ,16) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ಓಣಂ ಹಬ್ಬವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಡಾ| ದೀಪಾ, ಶ್ರೀಮತಿ ರೇವತಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ:ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ
ಹೆಮ್ಮಾಡಿ(ಸೆ,16): ಇಲ್ಲಿನ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಸರಾ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಲವು ವಿಭಾಗಗಳಲ್ಲಿ ಭಾಗವಹಿಸಿ ಬಹುಮಾನಗಳನ್ನುಪಡೆದಿರುತ್ತಾರೆ. ಕ್ರಮವಾಗಿ ಹುಡುಗಿಯರ ಜಾವೆಲಿನ್ ತ್ರೋ ವಿಭಾಗದಲ್ಲಿ ಕುಮಾರಿ ಸಿಂಚನ ಪ್ರಥಮ ಪಿ.ಯು.ಸಿ. ದ್ವಿತೀಯ ಸ್ಥಾನ, ಹುಡುಗಿಯರ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಕುಮಾರಿ ಉನ್ನತಿ ಶೆಟ್ಟಿ ದ್ವಿತೀಯ ಪಿ.ಯು.ಸಿ ದ್ವಿತೀಯ ಸ್ಥಾನ, ಹುಡುಗಿಯರ ಡಿಸ್ಕಸ್ ತ್ರೋ ವಿಭಾಗದಲ್ಲಿ ಕುಮಾರಿ ಅಭಿಜ್ಞಾ ಪ್ರಥಮ ಪಿ.ಯು.ಸಿ. ತ್ರತೀಯ ಸ್ಥಾನ,ಹುಡುಗಿಯರ ಜಾವೆಲಿನ್ ತ್ರೋ […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ,16): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ I.T(ಐ.ಟಿ ಕ್ವಿಜ್) ರಸಪ್ರಶ್ನೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ದ್ವಿತೀಯ ಪಿ.ಯು.ಸಿ ಹಾಗೂ ಪ್ರಜ್ವಲ್ ದೇವಾಡಿಗ ಪ್ರಥಮ ಪಿ.ಯು.ಸಿ.ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ,ಬೋಧಕೇತರವೃಂದದವರು ಅಭಿನಂದಿಸಿದ್ದಾರೆ.
ನೀಟ್ ಪರೀಕ್ಷೆ: ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಾಧನೆ
ಕುಂದಾಪುರ(ಸೆ,16): ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್ / ಸಿಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720 ರಲ್ಲಿ 568 ಅಂಕಗಳಿಸುವುದರೊoದಿಗೆ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿಇಟಿ / ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ […]
ಜಿ.ಎಸ್.ವಿ.ಎಸ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ
ಗಂಗೊಳ್ಳಿ(ಸೆ,16) : ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಇತ್ತೀಚೆಗೆ ೨೦೨೧-೨೨ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ ೮೫ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇತ್ತೀಚೆಗೆ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ನಡೆಯಿತು. ಕುಂದಾಪುರದ […]
ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ಬಹುಮಾನ
ಗಂಗೊಳ್ಳಿ(ಸೆ,16): ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಪರಿವರ್ತನ ರಾಣಿಬೆನ್ನೂರು ಇವರ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯಲ್ಲಿ 1709 ಕವನಗಳ ನಡುವೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಇವರ ನನ್ನ ಯುದ್ಧ ಎನ್ನುವ ಕವನವು ನಾಲ್ಕನೇ ಸ್ಥಾನವನ್ನು ಗಳಿಸಿ ನಗದು ಬಹುಮಾನ ಗಳಿಸಿದೆ.
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
ಕುಂದಾಪುರ( ಸೆ,16): ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಬಡ್ಡಿ ಪಂದ್ಯವು ಎಲ್ಲ ಜಿಲ್ಲೆಗಳ ಮೂಲೆ ಮೂಲೆಗಳಲ್ಲೂ ಪಸರಿಸುವಲ್ಲಿ ಇಂಥ ರೋಚಕ ಪಂದ್ಯಾಟಗಳು ಸಹಕಾರಿಯಾಗಿವೆ. ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದಶ್ರೀ ಸೀತಾರಾಮ್ ನಕ್ಕತ್ತಾಯ ಹೇಳಿದರು. ಅವರು ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ -ಇದರ ಸಹಯೋಗದಲ್ಲಿ ಆಯೋಜಿಸಲಾದಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ತಾಲೂಕು […]