ಉಚ್ಚಿಲ(ಸೆ,21): ಕನ್ನಡ ಕರಾವಳಿಯ ಪ್ರಸಿದ್ಧ ಮಹಾಲಕ್ಷ್ಮೀ ದೇವಿಯ ಕ್ಷೇತ್ರವಾದ ಉಚ್ಚಿಲ ಮಹಾ ಲಕ್ಷ್ಮೀ ದೇವಸ್ಥಾನವು ಇತ್ತೀಚೆಗೆ ಪುನರ್ ಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ಪುಣ್ಯೋತ್ಸವ ವನ್ನು ಕೈಗೊಂಡು ಕರಾವಳಿಯ ಧಾರ್ಮಿಕ ಇತಿಹಾಸದಲ್ಲಿ ತನ್ನದೇ ಛಾಪನ್ನು ಮೂಡಿಸಿ ಸಹಸ್ರಾರು ಭಕ್ತರನ್ನು ತನ್ನಡೆಗೆ ಆಕರ್ಷಿಸಿಕೊಂಡು ಕರ್ನಾಟಕದ ಪ್ರಸಿದ್ಧ ಹಾಗೂ ಪುಣ್ಯಕ್ಷೇತ್ರವಾಗಿ ಗುರುತಿಸಿಕೊಂಡಿದೆ.ದೇವಿಯ ಸನ್ನಿದಿಯಲ್ಲಿ ದಿನಂಪ್ರತಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದ್ದು ನಂಬಿ ಬಂದ ಭಕ್ತರಿಗೆ ತಾಯಿ ಆಭಯ ನೀಡುತ್ತಿದ್ದಾಳೆ. ಭಕ್ತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ […]
Day: September 21, 2022
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಹೆಮ್ಮಾಡಿ: ಪದವಿಪೂರ್ವ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಉದ್ಘಾಟನೆ
ಹೆಮ್ಮಾಡಿ(ಸೆ,21): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಬಾಲಕ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೆ.21 ರಂದು ನೆರವೇರಿತು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ವಹಿಸಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ ಕಾರ್ಯಕ್ರಮ
ಕುಂದಾಪುರ(ಸೆ,21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂಎಸಿ ಆಶ್ರಯದಲ್ಲಿ ಸೆ .21 ರಂದು ನಡೆದ ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ (Faculty Development Programme) ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎಸ್.ಎಮ್.ಎಸ್. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಕುಮಾರ್, ಶಿಕ್ಷಕರಿಗೆ ಬೇಕಾದ ಗುಣಗಳು ಮತ್ತು ತರಗತಿಯ ಒಳಗೆ ಮತ್ತು ಹೊರಗೆ ಶಿಕ್ಷಕರು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಬೇರೆ-ಬೇರೆ ಚಟುವಟಿಕೆಗಳ ಮೂಲಕ […]










