ಗಂಗೊಳ್ಳಿ (ಸೆ,29): ಪ್ರತಿಷ್ಠಿತ ರೋಟರಿ ಕ್ಲಬ್ ನ ರೋಟರಿ ಇಂಡಿಯಾ ಲಿಟರಸಿ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡ ಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರಿಗೆ ಲಭಿಸಿದೆ. ರೋಟರಿ ಕ್ಲಬ್ ಗಂಗೊಳ್ಳಿ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಉಪನ್ಯಾಸಕ […]
Day: September 29, 2022
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ,29): ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಕುಂದಾಪುರ (ಸೆ.29): ಶೈಕ್ಷಣಿಕ ,ಸಾಹಿತಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿರುವ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪಪ್ರಾಂಶುಪಾಲರು,ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರು ರೋಟರಿ ಕ್ಲಬ್ ಗಂಗೊಳ್ಳಿ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಮೂಕಾಂಬಿಕಾ ಸಭಾ ಭವನದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ […]
ಶಿಕ್ಷಕರು ಭಾಗ್ಯವಂತರು-ಪ್ರೊ.ಕೆ.ಉಮೇಶ್ ಶೆಟ್ಟಿ
ಕುಂದಾಪುರ (ಸೆ.29): ಶಿಕ್ಷಕ ವೃತ್ತಿ ಶ್ರೇಷ್ಠ ವಾದುದು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಜೊತೆಗೆ ಶಿಕ್ಷಕ ವ್ರತ್ತಿಯಲ್ಲಿ ಇರುವ ನಾವು ಭಾಗ್ಯವಂತರು ಎಂದು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಕಾಲೇಜಿನ ಮೂಕಾಂಬಿಕಾ ಸಭಾoಗಣದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ […]