ಬೈಂದೂರು(ಸೆ.27): ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.),ಉಪ್ಪುಂದ ವತಿಯಿಂದ ನಿರ್ಮಿಸಲಾಗಿರುವ 9ನೇ ಗೃಹ ಶ್ರೀ ವರಲಕ್ಷ್ಮೀ ನಿಲಯ ಬೈಂದೂರಿನ ಗಂಗಾನಾಡು-ನೀರೋಡಿಯಲ್ಲಿಸೆ.26 ರಂದು ಉದ್ಘಾಟನೆಗೊಂಡಿತು. ನಿಪ್ಪಾಣಿ ಸಧರ್ಮ ಓಂಶಕ್ತಿ ಮಠದ ಪೀಠಾಧಿಪತಿ ಶ್ರೀ ಅರುಣಾನಂದ ಸ್ವಾಮೀಜಿ ನೂತನ ಗೃಹವನ್ನು ಉದ್ಘಾಟಿಸಿ ಆಶೀರ್ವದಿಸಿದರು. ಬಡವರ ಬಾಳಿನ ಆಶಾಕಿರಣದಂತಿರುವ ಡಾ.ಗೋವಿಂದ ಬಾಬು ಪೂಜಾರಿಯವರು ತನ್ನ ಸಂಪಾದನೆ ಒಂದು ಭಾಗವನ್ನು ಈ ಭಾಗದ ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸುತ್ತಿರುವುದು ದೇವರು ಮೆಚ್ಚುವಂತದ್ದು, ಡಾ.ಗೋವಿಂದ ಬಾಬು ಪೂಜಾರಿಯವರು ತಮ್ಮ ಸತ್ಕಾರ್ಯಗಳ […]
Month: September 2022
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟಗಳ ಉದ್ಘಾಟನೆ
ಗಂಗೊಳ್ಳಿ(ಸೆ,25): ಹದಿ ಹರೆಯದಲ್ಲಿ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ವಿಕಾಸಗೊಳ್ಳಲು ಸಹಾಯವಾಗುತ್ತದೆ. ಇಲ್ಲಿನ ಶಿಸ್ತು ಬದ್ಧತೆ ಎನ್ನುವಂತಾದ್ದು ಉತ್ತಮ ಜೀವನವನ್ನು ರೂಪಿಸಿಕೊಳ್ಳಿವಲ್ಲಿ ಕೂಡ ನೆರವು ನೀಡುತ್ತದೆ ಎಂದು ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ ಕಾಮತ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ […]
ಹೊಸಂಗಡಿ ಪಿ.ಯು ಕಾಲೇಜು: ಉಚಿತ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಿಇಟಿ ತರಬೇತಿಗಳ ಉದ್ಘಾಟನಾ ಸಮಾರಂಭ
ಹೊಸಂಗಡಿ(ಸೆ.25): ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಹಾಗೂ ಸಿಇಟಿ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭ ಸೆ.24ರಂದು ಜರುಗಿತು. ಬದಲಾಗುತ್ತಿರುವ ಕಾಲಮಾನ ಹಾಗೂ ಪೋಷಕರ ಬೇಡಿಕೆಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಸದಾ ಮುನ್ನುಡಿಯನ್ನು ಬರೆಯುತ್ತಿದೆ ಎಂದು ಪ್ರಾಂಶುಪಾಲರಾದ ಶ್ರೀ ಗೋಪಾಲ್ ಭಟ್ ಪ್ರಸ್ತಾವಿಸಿದರು. ಸಿಇಟಿ ತರಬೇತಿ, ಅದರ ಅಗತ್ಯ , ಸಿಇಟಿ ಆಧಾರಿತ ಕೋರ್ಸ್ ಗಳು, ಅದರ ಪಠ್ಯಕ್ರಮ […]
ಶಟಲ್ ಬ್ಯಾಡ್ಮಿಂಟನ್ ನಲ್ಲಿ ಕ್ರಿಯೇಟಿವ್ ಕಾಲೇಜಿನ ಲೇಖನಾ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ (ಸೆ,24): ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಕುಮಾರಿ ಲೇಖನಾ ಬಾಲಕಿಯರ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 18 ರ ವಯೋಮಿತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಮುಂದಿನ ರಾಜ್ಯಮಟ್ಟದ ತಂಡದಲ್ಲಿ ಆಡುವ ಅವಕಾಶ ಗಳಿಸಿದ್ದಾರೆ. […]
ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಬಗ್ವಾಡಿ ಶರನ್ನವರಾತ್ರಿ ಮಹೋತ್ಸವ
ಹೆಮ್ಮಾಡಿ(ಸೆ,23): ಕುಂದಾಪುರ ತಾಲ್ಲೂಕಿನ ಪ್ರಮುಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿಯಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸೆ.26 ರಿಂದ ಆ .05 ರ ತನಕ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ಪ್ರತಿ ದಿನ ಚಂಡಿಕಾ ಪಾರಾಯಣ, ಕಲ್ಪೋಕ್ತ ಪೂಜೆ, ಚಂಡಿಕಾ ಹೋಮ ನಡೆಯಲಿದೆ. ಅ.04 ರ ಸಂಜೆ 6 ಗಂಟೆಗೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಚಕ್ರ ಚಂಡಿಕಾ ಯಕ್ಷಗಾನ ಬಯಲಾಟ ನಡೆಯಲಿದ್ದು, ಅ. 05 ರ ವಿಜಯ ದಶಮಿಯ ದಿನದಂದು ನವ ಚಂಡಿಕಾಯಾಗ […]
ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ಸೇವನೆ ನಿಯಂತ್ರಣಾ ಮಾಹಿತಿ ಕಾರ್ಯಕ್ರಮ
ಕುಂದಾಪುರ(ಸೆ,23): ಹದಿಹರೆಯವೆನ್ನುವುದು ತಂಬಾಕು ಸೇವಿಸಬೇಕೆನ್ನುವ ಆಮಿಷಗಳಿಗೆ ಒಳಗಾಗುವ ಆರಂಭಿಕ ಹಂತ. ವೈಯುಕ್ತಿಕ ಆರೋಗ್ಯದ ಮೇಲೆ ತಂಬಾಕು ಸೇವನೆ ಬೀರುವ ಅಪಾಯಕಾರಿ ಪರಿಣಾಮಗಳ ಬಗ್ಗೆ ಯುವಜನರು ಗಂಭೀರವಾಗಿ ಯೋಚಿಸಿ, ಆರೋಗ್ಯ ಇಲಾಖೆ ಹೊರಡಿಸುವ ಮುನ್ನೆಚ್ಚರಿಕಾ ಮಾಹಿತಿಗಳು ಸಂದೇಶಗಳನ್ನು ಚೆನ್ನಾಗಿ ಮನಗಂಡು ತಂಬಾಕು- ಮುಕ್ತ ಸಮಾಜ ಸೃಷ್ಟಿಯಾಗಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಸೆಲ್ […]
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಹೆಮ್ಮಾಡಿ(ಸೆ.23): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಾ ರವಿಶಂಕರ್ ಪ್ರಥಮ ಪಿ.ಯು.ಸಿ.ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಲಕಾ ಹೆಬ್ಬಾರ್ ಪ್ರಥಮ ಪಿ.ಯು.ಸಿ. ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ, ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ. ಜಾನಪದಗೀತೆಯಲ್ಲಿ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ,23): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಬಾಲಕರ ವಿಭಾಗದಲ್ಲಿ ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ.ಮತ್ತು ಸಾತ್ವಿಕ್ ಪೂಜಾರಿ ದ್ವಿತೀಯ ಪಿ.ಯು.ಸಿ ಹಾಗೂ ಬಾಲಕಿಯರ ವಿಭಾಗದಲ್ಲಿ ಅಮಿಷಾ ಚೌದ್ರಿ ಪ್ರಥಮ ಪಿ.ಯು.ಸಿ ಮತ್ತು ಉನ್ನತಿ ಶೆಟ್ಟಿ ದ್ವಿತೀಯ ಪಿ.ಯು.ಸಿ.ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಕ್ರೀಡಾ […]
ತಾಲ್ಲೂಕು ಮಟ್ಟದ ಕ್ರೀಡಾ ಕೂಟ -2022 : ಕುಂದಾಪುರ ಟ್ರ್ಯಾಕ್ & ಫಿಲ್ಡ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಪ್ರಥಮ್ .ಪಿ ಸಾಧನೆ
ಕುಂದಾಪುರ (ಸೆ,18): ಇಲ್ಲಿನ ಗಾಂಧಿ ಮೈದಾನದಲ್ಲಿ ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದಕ್ರೀಡಾ ಕೂಟ-2022 ರಲ್ಲಿ ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಪ್ರಥಮ್.ಪಿ ಯವರು ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಬೆಳ್ಳಿ ಪದಕಗಳನ್ನು ಪಡೆದಿರುತ್ತಾರೆ. ಇವರು ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ಉಚ್ಚಿಲ: ವೈಭವದ ದಸರಾ ಉತ್ಸವಕ್ಕೆ ಭರದ ಸಿದ್ದತೆ
ಉಚ್ಚಿಲ(ಸೆ,21): ಕನ್ನಡ ಕರಾವಳಿಯ ಪ್ರಸಿದ್ಧ ಮಹಾಲಕ್ಷ್ಮೀ ದೇವಿಯ ಕ್ಷೇತ್ರವಾದ ಉಚ್ಚಿಲ ಮಹಾ ಲಕ್ಷ್ಮೀ ದೇವಸ್ಥಾನವು ಇತ್ತೀಚೆಗೆ ಪುನರ್ ಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ಪುಣ್ಯೋತ್ಸವ ವನ್ನು ಕೈಗೊಂಡು ಕರಾವಳಿಯ ಧಾರ್ಮಿಕ ಇತಿಹಾಸದಲ್ಲಿ ತನ್ನದೇ ಛಾಪನ್ನು ಮೂಡಿಸಿ ಸಹಸ್ರಾರು ಭಕ್ತರನ್ನು ತನ್ನಡೆಗೆ ಆಕರ್ಷಿಸಿಕೊಂಡು ಕರ್ನಾಟಕದ ಪ್ರಸಿದ್ಧ ಹಾಗೂ ಪುಣ್ಯಕ್ಷೇತ್ರವಾಗಿ ಗುರುತಿಸಿಕೊಂಡಿದೆ.ದೇವಿಯ ಸನ್ನಿದಿಯಲ್ಲಿ ದಿನಂಪ್ರತಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದ್ದು ನಂಬಿ ಬಂದ ಭಕ್ತರಿಗೆ ತಾಯಿ ಆಭಯ ನೀಡುತ್ತಿದ್ದಾಳೆ. ಭಕ್ತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ […]