ಕುoದಾಪುರ : (ಸೆ,16) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ಓಣಂ ಹಬ್ಬವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಡಾ| ದೀಪಾ, ಶ್ರೀಮತಿ ರೇವತಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
Month: September 2022
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ:ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ
ಹೆಮ್ಮಾಡಿ(ಸೆ,16): ಇಲ್ಲಿನ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಸರಾ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಲವು ವಿಭಾಗಗಳಲ್ಲಿ ಭಾಗವಹಿಸಿ ಬಹುಮಾನಗಳನ್ನುಪಡೆದಿರುತ್ತಾರೆ. ಕ್ರಮವಾಗಿ ಹುಡುಗಿಯರ ಜಾವೆಲಿನ್ ತ್ರೋ ವಿಭಾಗದಲ್ಲಿ ಕುಮಾರಿ ಸಿಂಚನ ಪ್ರಥಮ ಪಿ.ಯು.ಸಿ. ದ್ವಿತೀಯ ಸ್ಥಾನ, ಹುಡುಗಿಯರ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಕುಮಾರಿ ಉನ್ನತಿ ಶೆಟ್ಟಿ ದ್ವಿತೀಯ ಪಿ.ಯು.ಸಿ ದ್ವಿತೀಯ ಸ್ಥಾನ, ಹುಡುಗಿಯರ ಡಿಸ್ಕಸ್ ತ್ರೋ ವಿಭಾಗದಲ್ಲಿ ಕುಮಾರಿ ಅಭಿಜ್ಞಾ ಪ್ರಥಮ ಪಿ.ಯು.ಸಿ. ತ್ರತೀಯ ಸ್ಥಾನ,ಹುಡುಗಿಯರ ಜಾವೆಲಿನ್ ತ್ರೋ […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ,16): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ I.T(ಐ.ಟಿ ಕ್ವಿಜ್) ರಸಪ್ರಶ್ನೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ದ್ವಿತೀಯ ಪಿ.ಯು.ಸಿ ಹಾಗೂ ಪ್ರಜ್ವಲ್ ದೇವಾಡಿಗ ಪ್ರಥಮ ಪಿ.ಯು.ಸಿ.ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ,ಬೋಧಕೇತರವೃಂದದವರು ಅಭಿನಂದಿಸಿದ್ದಾರೆ.
ನೀಟ್ ಪರೀಕ್ಷೆ: ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಾಧನೆ
ಕುಂದಾಪುರ(ಸೆ,16): ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್ / ಸಿಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720 ರಲ್ಲಿ 568 ಅಂಕಗಳಿಸುವುದರೊoದಿಗೆ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿಇಟಿ / ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ […]
ಜಿ.ಎಸ್.ವಿ.ಎಸ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ
ಗಂಗೊಳ್ಳಿ(ಸೆ,16) : ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಇತ್ತೀಚೆಗೆ ೨೦೨೧-೨೨ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ ೮೫ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇತ್ತೀಚೆಗೆ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ನಡೆಯಿತು. ಕುಂದಾಪುರದ […]
ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ಬಹುಮಾನ
ಗಂಗೊಳ್ಳಿ(ಸೆ,16): ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಪರಿವರ್ತನ ರಾಣಿಬೆನ್ನೂರು ಇವರ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯಲ್ಲಿ 1709 ಕವನಗಳ ನಡುವೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಇವರ ನನ್ನ ಯುದ್ಧ ಎನ್ನುವ ಕವನವು ನಾಲ್ಕನೇ ಸ್ಥಾನವನ್ನು ಗಳಿಸಿ ನಗದು ಬಹುಮಾನ ಗಳಿಸಿದೆ.
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
ಕುಂದಾಪುರ( ಸೆ,16): ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಬಡ್ಡಿ ಪಂದ್ಯವು ಎಲ್ಲ ಜಿಲ್ಲೆಗಳ ಮೂಲೆ ಮೂಲೆಗಳಲ್ಲೂ ಪಸರಿಸುವಲ್ಲಿ ಇಂಥ ರೋಚಕ ಪಂದ್ಯಾಟಗಳು ಸಹಕಾರಿಯಾಗಿವೆ. ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದಶ್ರೀ ಸೀತಾರಾಮ್ ನಕ್ಕತ್ತಾಯ ಹೇಳಿದರು. ಅವರು ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ -ಇದರ ಸಹಯೋಗದಲ್ಲಿ ಆಯೋಜಿಸಲಾದಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ತಾಲೂಕು […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಕಿಂಡರ್ ಪ್ಲೇ ಗಾರ್ಡನ್ ಉದ್ಘಾಸಿದ ಶ್ರೀ ಆನಂದ ಸಿ ಕುಂದರ್
ಗಂಗೊಳ್ಳಿ (ಸೆ.16):ಇಲ್ಲಿನ ಸರಸ್ವತಿ ವಿದ್ಯಾಲಯದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕಿಂಡರ್ ಪ್ಲೇ ಗಾರ್ಡನ್ ನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಉದ್ಯಮಿ ಆನಂದ ಸಿ ಕುಂದರ್ ಇತ್ತೀಚಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾ ಸಂಸ್ಥೆ ಒದಗಿಸುವ ಇಂತಹ ಸೌಲಭ್ಯಗಳು ಮಕ್ಕಳಲ್ಲಿ ಉತ್ಸಾಹ ವನ್ನು ಹೆಚ್ಚಿಸುತ್ತದೆ. ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡುತ್ತವೆ ಎಂದು ಹೇಳಿದರು. ಜಿ ಎಸ್ ವಿ ಎಸ್ […]
ದಕ್ಷಿಣ ಭಾರತ ವಲಯ ಕಿರಿಯರ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾ ಕೂಟ : ಜ್ಯೋತಿಕಾ ಪೂಜಾರಿ ಅಮೋಘ ಸಾಧನೆ
ಬೈಂದೂರು (ಸೆ. 13): ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಜ್ಯೋತಿಕಾ ಪೂಜಾರಿಯವರು ೩೩ ನೇ ಸಾಲಿನ ದಕ್ಷಿಣ ಭಾರತ ವಲಯದ ಕಿರಿಯರ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 200ಮೀ ಓಟದಲ್ಲಿ ಚಿನ್ನದ ಪದಕ, ಮಿಶ್ರ ರೀಲೆಯಲ್ಲಿ ಬೆಳ್ಳಿ ಪದಕ ಹಾಗೂ400 ಮೀ ಓಟದಲ್ಲಿ ಕಂಚಿನ ಪದಕ ಪಡೆದು ಅಮೋಘ ಸಾಧನೆಗೈದಿದ್ದಾರೆ.
ಕ್ರಿಯೇಟಿವ್ ಪಿ .ಯು. ಕಾಲೇಜು ಕಾರ್ಕಳ : ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರ
ಕಾರ್ಕಳ (ಸೆ. 15) : ಇಲ್ಲಿನ ಪ್ರತಿಷ್ಠಿತ ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರವನ್ನು ಸೆ.09 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭುರವರು ವಿದ್ಯಾರ್ಥಿಗಳಿಗೆ ಸಿ.ಎಸ್ ನ ಮಹತ್ವದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ C.S ಎಂಬುದು ಒಂದು ಅತ್ಯುನ್ನತ ಹುದ್ದೆ ಇಂದು ಭಾರತದಲ್ಲಿ C.S (ಕಂಪೆನಿ ಸೆಕ್ರೆಟರಿ) ನ ಕೊರತೆ ಇದ್ದು […]