ಬೈಂದೂರು(ಅ,25): ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ 33/11 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆಯನ್ನು ಇಂಧನ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಅ .25 ರಂದು ನೆರವೇರಿಸಿದರು. ಇದರಿಂದಾಗಿ ಕೊಲ್ಲೂರು, ಜಡ್ಕಲ್, ಮುದೂರು, ಗೋಳಿಹೊಳೆ, ಇಡೂರು ಕುಂಜ್ಞಾಡಿ ಗ್ರಾಮಗಳ ಸುತ್ತ ಮುತ್ತಲಿನ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿ ಪ್ರತ್ಯೇಕ 11 ಕೆ.ವಿ. ಫೀಡರುಗಳ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತದೆ. ಇದರಿಂದಾಗಿ ಕೃಷಿಯನ್ನು ಬದುಕಾಗಿಸಿಕೊಂಡಿರುವ ಈ ಭಾಗದ ಸುಮಾರು 1,745ಕ್ಕೂ ಮಿಕ್ಕಿ […]
Day: October 25, 2022
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿ. ಕೆ. ಆರ್. ಶಾಲೆಗೆ ದ್ವಿತೀಯ ಸ್ಥಾನ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ ವಿ. ಶೆಟ್ಟಿ ಮತ್ತು ಪ್ರಥಮ್ ವಿ. ಅಡಿಗ ಇತ್ತೀಚೆಗೆ ಸರಕಾರಿ ಪ್ರೌಢ ಶಾಲೆ ವಡೇರಹೋಬಳಿ ಇಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಹೆಮ್ಮೆಯನ್ನು ತಂದಿರುತ್ತಾರೆ. […]
ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ: ಶ್ರೀ ಗಣೇಶ್ ಶೆಣೈ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರಿಂದ ನೆರವೇರಿತು. ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ ಎನ್ನುವ ವಿಚಾರದ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಪ್ರೇರಣೆ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು ತಮ್ಮ ಕಲಾ ಕುಂಚ ವೇದಿಕೆಯ ಮೂಲಕ ಹತ್ತನೇ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಅಂಬಿಗರ ಚೌಡಯ್ಯನ ವಚನಗಳ ವಿಚಾರ ಧಾರೆಗಳ ಕುರಿತು ಉಪನ್ಯಾಸ
ಕುಂದಾಪುರ (ಅ,22) : ಅಸ್ಪ್ರಶ್ಯತೆ, ಆಹಾರ ಪದ್ಧತಿ ಇವುಗಳಿಗೆ ಮಹತ್ವ ಕೊಡದೆ ಗುಣಕ್ಕೆ ಮಹತ್ವಕೊಡಬೇಕೆಂಬ ನಿಲುವುಗಳು ಮತ್ತು ಧಾರ್ಮಿಕ ಚಿಂತನೆಯನ್ನು ತನ್ನದೇ ಆದ ನೆಲೆಯಲ್ಲಿ ಪ್ರಶ್ನಿಸಿ ಹಲವು ಸಮಾಜ ಸುಧಾರಣೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಅಂಬಿಗರ ಚೌಡಯ್ಯನವರ ವಚನಗಳ ವಿಚಾರ ಧಾರೆಗಳು ಇಂದಿಗೂ ಪ್ರಸ್ತುತ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ| ಎಚ್.ಕೆ. ವೆಂಕಟೇಶ್ ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾನಿಲಯ ಅಂಬಿಗರ […]