ಉಡುಪಿ(ಅ,28): ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕಾಲೇಜಿನ ನೂತನ ರವೀಂದ್ರ ಮಂಟಪದ ಬಳಿ ಬೆಳಿಗ್ಗೆ 11 ಗಂಟೆಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿ ಕೋಟಿ ಕಂಠ ಗಾಯನಕ್ಕೆ ಚಾಲನೆ ನೀಡಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ ಎ. ಶುಭಹಾರೈಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ವಸುಮತಿ ಭಟ್ ನೇತೃತ್ವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಕನ್ನಡದ ಆರು […]
Month: October 2022
ಕುಂದಾಪುರ: ಡಾ | ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ಅ,27): ನೆಲದ ಸೊಗಡಿನ ಹಬ್ಬ ದೀಪಾವಳಿ. ಇದೊಂದು ಜನಪದ ಆಚರಣೆ, ಕೃಷಿ ಸಂಸ್ಕೃತಿಯನ್ನು ಬಿಂಬಿಸುದರ ಜೊತೆಗೆ ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಎಂದು ಹಿರಿಯ ಜಾನಪದ ಕಲಾವಿದರಾದ ಶ್ರೀ ನಾಗರಾಜ ಪಾಣ ಮೂಡುವಾಲ್ತೂರು ಅವರು ಹೇಳಿದರು. ಅವರು ಅಕ್ಟೊಬರ್25 ರಂದು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ “ದೀಪಾವಳಿ ಆಚರಣೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]
ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ
ಕುಂದಾಪುರ (ಅ,27): ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬಹುದು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ sahithyathangudana@gmail.com ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 06 ರಂದು ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ
ಹೆಮ್ಮಾಡಿ(ಅ,27): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 […]
ಮೊಗವೀರ ಯುವ ಸಂಘಟನೆ (ರಿ.), ) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ರಕ್ತದಾನ ಶಿಬಿರ ಸಂಪನ್ನ
ಬೈಂದೂರು (ಅ,28): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ,ಅಂಬಲಪಾಡಿ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ರಕ್ತನಿಧಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಇವರ ಸಹಯೋಗದಲ್ಲಿ “ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ”ವು 58 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಅ.22 ರಂದು ಸಂಪನ್ನಗೊಂಡಿತು. ಮೊಗವೀರ […]
ಬೈಂದೂರು: ವಿದ್ಯುತ್ ಉಪಕೇಂದ್ರ ಉದ್ಘಾಟನೆ-ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದನೆ
ಬೈಂದೂರು(ಅ,25): ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ 33/11 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆಯನ್ನು ಇಂಧನ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಅ .25 ರಂದು ನೆರವೇರಿಸಿದರು. ಇದರಿಂದಾಗಿ ಕೊಲ್ಲೂರು, ಜಡ್ಕಲ್, ಮುದೂರು, ಗೋಳಿಹೊಳೆ, ಇಡೂರು ಕುಂಜ್ಞಾಡಿ ಗ್ರಾಮಗಳ ಸುತ್ತ ಮುತ್ತಲಿನ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿ ಪ್ರತ್ಯೇಕ 11 ಕೆ.ವಿ. ಫೀಡರುಗಳ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತದೆ. ಇದರಿಂದಾಗಿ ಕೃಷಿಯನ್ನು ಬದುಕಾಗಿಸಿಕೊಂಡಿರುವ ಈ ಭಾಗದ ಸುಮಾರು 1,745ಕ್ಕೂ ಮಿಕ್ಕಿ […]
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವಿ. ಕೆ. ಆರ್. ಶಾಲೆಗೆ ದ್ವಿತೀಯ ಸ್ಥಾನ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ ವಿ. ಶೆಟ್ಟಿ ಮತ್ತು ಪ್ರಥಮ್ ವಿ. ಅಡಿಗ ಇತ್ತೀಚೆಗೆ ಸರಕಾರಿ ಪ್ರೌಢ ಶಾಲೆ ವಡೇರಹೋಬಳಿ ಇಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಹೆಮ್ಮೆಯನ್ನು ತಂದಿರುತ್ತಾರೆ. […]
ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ: ಶ್ರೀ ಗಣೇಶ್ ಶೆಣೈ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರಿಂದ ನೆರವೇರಿತು. ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ ಎನ್ನುವ ವಿಚಾರದ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಪ್ರೇರಣೆ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು ತಮ್ಮ ಕಲಾ ಕುಂಚ ವೇದಿಕೆಯ ಮೂಲಕ ಹತ್ತನೇ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಅಂಬಿಗರ ಚೌಡಯ್ಯನ ವಚನಗಳ ವಿಚಾರ ಧಾರೆಗಳ ಕುರಿತು ಉಪನ್ಯಾಸ
ಕುಂದಾಪುರ (ಅ,22) : ಅಸ್ಪ್ರಶ್ಯತೆ, ಆಹಾರ ಪದ್ಧತಿ ಇವುಗಳಿಗೆ ಮಹತ್ವ ಕೊಡದೆ ಗುಣಕ್ಕೆ ಮಹತ್ವಕೊಡಬೇಕೆಂಬ ನಿಲುವುಗಳು ಮತ್ತು ಧಾರ್ಮಿಕ ಚಿಂತನೆಯನ್ನು ತನ್ನದೇ ಆದ ನೆಲೆಯಲ್ಲಿ ಪ್ರಶ್ನಿಸಿ ಹಲವು ಸಮಾಜ ಸುಧಾರಣೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಅಂಬಿಗರ ಚೌಡಯ್ಯನವರ ವಚನಗಳ ವಿಚಾರ ಧಾರೆಗಳು ಇಂದಿಗೂ ಪ್ರಸ್ತುತ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ| ಎಚ್.ಕೆ. ವೆಂಕಟೇಶ್ ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾನಿಲಯ ಅಂಬಿಗರ […]
ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ತವರೂರಿಗೆ ತಲುಪಿಸಿದ ಈಶ್ವರ್ ಮಲ್ಪೆ
ಕುಂದಾಪುರ(ಅ,20): ಅನಾರೋಗ್ಯಕ್ಕೆ ಪೀಡಿತರಾದ ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ ಮನೆಯ ವಿಜಯ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ. ಈ ಹಿಂದೆ ಶಿರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಕರ್ತವ್ಯ ನಿರ್ವಹಿಸುತ್ತಿದ್ದು ಇವರು 6 ತಿಂಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ವೃತ್ತಿಯಿಂದ ದೂರವಿದ್ದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ವಿಷಯ ತಿಳಿದ ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮೃತಪಟ್ಟಿರುವ ವಿಜಯ್ ಅವರ ಮೃತದೇಹವನ್ನು ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ […]