ಕಲ್ಯಾಣಪುರ( ಅ,16): ಇಲ್ಲಿನ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಮತ್ತು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಮತ್ತು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ದಿ. ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನವಾದ ಅಕ್ಟೋಬರ್ 15ನ್ನು ವಿಶ್ವ ವಿದ್ಯಾರ್ಥಿಗಳ ದಿನಾಚರಣೆಯಾಗಿ ಆರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಅವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಕಲಾಂ […]
Month: October 2022
ಬೈಂದೂರು:ಅ.16 ರಂದು ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರ
ಬೈಂದೂರು(ಅ,15): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ನಾಡೋಜ ಡಾ. ಜಿ . ಶಂಕರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಟೋಬರ್ .16 ರ […]
ಶಿಕ್ಷಣದಿಂದ ಜಗತ್ತನ್ನೇ ಬದಲಾಯಿಸಲು ಸಾಧ್ಯ: ಸುಪ್ರೀಯಾ ಕಾಮತ್ ಬ್ಯಾನರ್ಜಿ
ಕುಂದಾಪುರ (ಅ.15):ಶಿಕ್ಷಣ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಶಿಕ್ಷಣ ನಮ್ಮ ಬದುಕನ್ನು ಬದಲಾಯಿಸುವುದರ ಜೊತೆಗೆ ಇಡೀ ಜಗತ್ತನ್ನೇ ಬದಲಿಸುವ ಶಕ್ತಿಯನ್ನು ಹೊಂದಿದೆ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಇದರ ಮಾನವ ಸಂಪನ್ಮೂಲ ವಿಭಾಗದ ನಿವೃತ್ತ ಅಧಿಕಾರಿ ಕುಂದಾಪುರ ಮೂಲದ ಶ್ರೀಮತಿ ಸುಪ್ರೀಯಾ ಕಾಮತ್ ಬ್ಯಾನರ್ಜಿ ಹೇಳಿದರು. ಅವರು ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ವಲಯದ ವತಿಯಿಂದ ಹಮ್ಮಿಕೊಂಡ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ […]
ಯಕ್ಷಗಾನದ ನವ ಸಂಚಲನಕ್ಕೆ ಕಾಲಮಿತಿ ಅಗತ್ಯ
ಕರಾವಳಿಗರ ಆರಾಧನಾ ಕಲೆ ಯಕ್ಷಗಾನ. ಕರ್ನಾಟಕದ ಗಂಡು ಕಲೆ ಕೂಡ ಹೌದು. ಸುಮಾರು ಒಂದು ಸಾವಿರ ವರ್ಷದಿಂದ ಕಾಲದಿಂದ ಕಾಲಕ್ಕೆ ಹಲವಷ್ಟು ಬದಲಾವಣೆ ಆಗುತ್ತಲೇ ಸಾಗಿ ಬಂದಿದೆ. ಆರಂಭದಲ್ಲಿ ಪೌರಾಣಿಕ ಕಥೆಗಳ ಯಕ್ಷಗಾನ, ದಶಕಗಳು ಉರುಳಿದಂತೆ ಸಾಮಾಜಿಕ ಕಥೆಗಳು, ಆ ನಂತರ ಕಾಲ್ಪನಿಕ ಕಥೆಗಳು ಕೂಡ ರಂಗಸ್ಥಳದಲ್ಲಿ ಪ್ರದರ್ಶನ ಕಂಡವು. ಇವೆಲ್ಲವನ್ನೂ ಕಾಲಘಟ್ಟದ ಬದಲಾವಣೆಗಳಂತೆ ವಿಭಾಗಿಸಬಹುದು. ಆದರೆ ಇತ್ತೀಚಿನ ಯಕ್ಷಗಾನವನ್ನು ಬಹು ಮುಖ್ಯವಾಗಿ ಎರಡು ವಿಭಾಗ ಮಾಡಬಹುದು. ಕರೋನ ಪೂರ್ವ […]
ಆಲೂರು: ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
ಕುಂದಾಪುರ(ಅ,10): ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರಿನ ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ. ಚಿರತೆಯು ಮಾಸ್ತಿಯವರ ಮನೆಯ ಆವರಣವಿಲ್ಲದ ಬಾವಿಗೆ ಬಿದ್ದಿದ್ದು ಸೋಮವಾರ ಬೆಳಿಗ್ಗೆ ಮನೆಯವರು ನೋಡಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯವರು ಬೋನನ್ನು ಬಾವಿಗೆ ಇಳಿಬಿಟ್ಟು ನಾಜೂಕಾಗಿ ಕಾರ್ಯಾಚರಣೆ ನಡೆಸಿ ಅಂದಾಜು 4-5 ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ […]
ಎಕ್ಸಲೆಂಟ್ ಪಿ ಯು ಕಾಲೇಜು ಕುಂದಾಪುರ: ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ
ಕುಂದಾಪುರ( ಅ,10): 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯು ಅಕ್ಟೋಬರ್ 7 ಮತ್ತು 8 ರಂದು ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಾನಸ ದೇವಾಡಿಗ ಮತ್ತು ನಿಹಾಲ್ ಎನ್ ಶೆಟ್ಟಿ ಉಡುಪಿ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ […]
ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಸರ್ವ ಜಿಷ್ಟು
ಕುಂದಾಪುರ(ಅ,10): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಯೋಜನೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಮಟ್ಟದ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಶಾಲೆ ಹಾಗೂ ಕುಂದಾಪುರ ಟ್ರಾಕ್ & ಫೀಲ್ಡ್ ಅಥ್ಲೆಟಿಕ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಸರ್ವ ಜಿಷ್ಟು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಅವನಿ ಪ್ರಕಾಶನ ಮಂಗಳೂರು : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಮಂಗಳೂರು (ಅ.10): ಅವನಿ ಪ್ರಕಾಶನ, ಮಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕುಂದಗನ್ನಡದ ನನ್ನ ಊರು – ಜನ – ಸಂಸ್ಕೃತಿ – ಪರಂಪರೆ” ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಹೈಸ್ಕೂಲ್ ವಿಭಾಗ,ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು ,ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ , ತೃತೀಯ ಮತ್ತು ಮೂರು ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ಆರೋಗ್ಯ ಶಿಬಿರ ಸಂಪನ್ನ
ಬೈಂದೂರು(ಅ,10): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕದ ನೇತೃತ್ವದಲ್ಲಿ ನಾಡೋಜ ಡಾ. ಜಿ. ಶಂಕರ್ ಜನ್ಮದಿನದ ಪ್ರಯುಕ್ತ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಮತ್ತು ಕೆ ಎಮ್ ಸಿ ಮಣಿಪಾಲ ಇವರ ಸಹಯೋಗದಲ್ಲಿ ಚರ್ಮ, ಕಿವಿ, ಮೂಗು ಹಾಗೂ ಗಂಟಲಿನ ಉಚಿತ ತಪಾಸಣಾ ಶಿಬಿರ ಅ .09 ರಂದು ಸಂಪನ್ನಗೊಂಡಿತು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುನ್ನೂರಕ್ಕೂ […]
ಅಕ್ಷಯ್ ಬಡಾಮನೆಯವರಿಗೆ ರಿಹಾ ರೈಸಿಂಗ್ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ
ಕುಂದಾಪುರ (ಅ,09): ಹಲವಾರು ಅಲ್ಬಂ ಹಾಡುಗಳು, ಸಿನಿಮಾ ಹಾಡನ್ನು ಹಾಡಿರುವ ಬಹುಮುಖ ಪ್ರತಿಭೆ ಗಾಯಕ ಅಕ್ಷಯ್ ಬಡಾಮನೆ ಈ ವರ್ಷದ RIHA Raising Star of India ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ RIHA India Organisation ಏರ್ಪಡಿಸಿದ್ದ RIHA Stars of India ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅತ್ತ್ಯುತ್ತಮ ಗಾಯಕ ಪ್ರಶಸ್ತಿಯನ್ನು ಗಾಯಕ ಅಕ್ಷಯ್ ಬಡಾಮನೆಯವರಿಗೆ ಪ್ರದಾನ ಮಾಡಲಾಯಿತು. ಮೂಲತಃ ಕುಂದಾಪುರದ ಬೈಂದೂರಿನ ಕೆರ್ಗಾಲು ನಂದನವನ ಗ್ರಾಮದ ಅಕ್ಷಯ್ ಸುಮಾರು […]