ಕುಂದಾಪುರ(ನ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ನ.26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಮಕ್ಕಳಿಗೆ ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಅರ್ಥ, ಸಾರಾಂಶ ಮತ್ತು ಅದರ ಧ್ಯೇಯೋದ್ದೇಶವನ್ನು ಸವಿವರವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
Month: November 2022
ಕೌಶಲ್ಯಗಳೊಂದಿಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ : ಚೇತನ್ ಶೆಟ್ಟಿ ಕೋವಾಡಿ
ಕುಂದಾಪುರ (ನ,30): ವಿದ್ಯಾರ್ಥಿ ದೆಸೆಯಲ್ಲಿಯೇ ಮಾನವೀಯ ಮೌಲ್ಯ, ಆತ್ಮವಿಮರ್ಶೆ, ಆತ್ಮವಿಶ್ವಾಸ, ಸಮಯಪ್ರಜ್ಞೆ ,ಪುಸ್ತಕ ಪ್ರೀತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿಗತ ಬದುಕಿನೊಂದಿಗೆ ಸಾಮಾಜಿಕ ಜವಾಬ್ದಾರಿ ಬಹಳ ಮುಖ್ಯ. ವರ್ತಮಾನದ ತಲ್ಲಣಗಳಿಗೆ ಸ್ಪಂದಿಸುತ್ತಾ, ಸಮಾಜದ ಕಡೆ ಗಮನಕೊಡಬೇಕು. ವಿದ್ಯಾರ್ಥಿಗಳು ಕೌಶಲ್ಯಗಳನ್ನು ವರ್ದಿಸಿಕೊಳ್ಳುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ ಎಂದು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹೇಳಿದರು. ಅವರು […]
ಡಾ.ಗಣೇಶ್ ಗಂಗೊಳ್ಳಿಯವರಿಗೆ ರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ನ,30): ಗೋವಾ ರಾಜ್ಯದ ಪಣಜಿ ಕನ್ನಡ ಸಂಘ ಮತ್ತು ರೇಣುಕಾ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಹಾಗೂ ಸಮಾಜ ಮುಖಿ ಸಂಸ್ಥೆ (ರಿ) ಇವರು ನ,27 ರಂದು ಪಣಜಿಯ ಮಾರ ಮಾರ್ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಮತ್ತು ಸಂಘಟನಾ ಕ್ಷೇತ್ರದಲ್ಲಿನ 32 ವರ್ಷದ ವಿಶೇಷ ಸೇವೆಯನ್ನು ಗುರುತಿಸಿ ಡಾ.ಗಣೇಶ್ ಗಂಗೊಳ್ಳಿ ಯವರಿಗೆ […]
ಹಿರಿಯರ ಕನ್ನಡ ಸೇವೆಯು ನಮಗೆ ಮಾದರಿಯಾಗಲಿ – ಡಾ. ಹಿರೇಮಗಳೂರು ಕಣ್ಣನ್
ಕಾರ್ಕಳ ( ನ,30): ಕನ್ನಡದ ಕಂಪು ವಿಶ್ವದೆಲ್ಲೆಡೆ ಪಸರಿಸಲು ನಾವು ಕಟಿಬದ್ಧರಾಗಬೇಕು. ಕನ್ನಡದ ನೆಲ, ಜಲ, ಭಾಷೆಗಳು ಉತ್ತುಂಗಕ್ಕೇರಲು ಇಂದಿನ ಯುವ ಪೀಳಿಗೆ ಪ್ರಯತ್ನಿಸಬೇಕು. ನಮ್ಮ ಪೂರ್ವಿಕರು ನಮಗೆ ದೊರಕಿಸಿಕೊಟ್ಟಿರುವ ಈ ಭವ್ಯ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ತಂದೆ-ತಾಯಿಗಳನ್ನು ಪ್ರೀತಿಯಿಂದ ಸಲಹಬೇಕು. ಹಾಗೆಯೇ ನಮ್ಮ ಮಾತೃಭೂಮಿ ತಾಯಿ ಭಾಷೆಯನ್ನು ಬೆಳೆಸಬೇಕು ಎಂದು ಕನ್ನಡದ ಪೂಜಾರಿ ಡಾ. ಹಿರೇಮಗಳೂರು ಕಣ್ಣನ್ ಕರೆ ನೀಡಿದರು. ಅವರು ನವೆಂಬರ್ 29 ರಂದು ಕಾರ್ಕಳದ […]
ಸಂವಿಧಾನದ ಆಶಯವನ್ನು ಅರಿತು ಬಾಳೋಣ: ಪ್ರವೀಣ್ ಗಂಗೊಳ್ಳಿ
ಗಂಗೊಳ್ಳಿ(ನ,29): ಜಗತ್ತಿನಲ್ಲಿಯೇ ಅತಿ ಶ್ರೇಷ್ಠವಾದ ಮತ್ತು ಬ್ರಹತ್ ಗಾತ್ರದ ಸಂವಿಧಾನವನ್ನು ಹೊಂದಿರುವ ದೇಶ ನಮ್ಮದು.ಸಂವಿಧಾನ ರಚನಾ ಸಮಿತಿಯವರು ಬಲಿಷ್ಠ ಭಾರತದ ನಿರ್ಮಾಣದ ಕನಸ್ಸನ್ನು ಹೊತ್ತು 1949 ರ ನವೆಂಬರ್,26 ರಂದು ಸಂವಿಧಾನವನ್ನು ಶಾಸನಬದ್ದವಾಗಿ ದೇಶದ ಜನರ ಹೆಸರಿನಲ್ಲಿ ಅರ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ಸಂವಿಧಾನದ ಆಶಯಗಳನ್ನು ಅರಿತು ಬಾಳುವುದರೊಂದಿಗೆ ಬಲಿಷ್ಠ ಭಾರತದ ನಿರ್ಮಾಣ ನಮ್ಮ ಜವಾಬ್ದಾರಿಯಾಗಿದೆ ಎಂದು ಕುಂದಾಪುರದ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.ಅವರು ನ.29 […]
ಯಕ್ಷಲೋಕದ ಅನನ್ಯ ಕಲಾವಿದ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ
ಸಂಸ್ಕಾರ ಭಾರತೀಯ ಮುಖ್ಯಸ್ಥರು, ಸ್ನೇಹಜೀವಿ,ಅದ್ಭುತ ಕಲಾವಿದ, ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರೂ ಸದಾ ಎಲ್ಲರೊಂದಿಗೆ ಬೆರೆಯುವ ಸಹಜ ಪ್ರೀತಿಯ ನಡೆನುಡಿಯ ಧೀಮಂತ ವ್ಯಕ್ತಿ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ . ಎಂಬತ್ತು -ತೊಂಬತ್ತರ ದಶಕದ ಸ್ಟಾರ್ ಕಲಾವಿದ. ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ತನ್ನ ವಿಶಿಷ್ಟ ಪ್ರಾಸಬದ್ಧ ಮಾತಿನ ಶೈಲಿಯ ಮೂಲಕ ಯಕ್ಷಗಾನ ಮತ್ತು ತಾಳಮದ್ದಳೆ ಕೂಟಗಳಲ್ಲಿ ರಂಗೇರಿಸುತ್ತಿದ್ದ ಮೇರು ಕಲಾವಿದ. ಮೂರ್ನಾಲ್ಕು ವರ್ಷಗಳ […]
ಕೊಗಿ೯: ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿಯವರ ಮನೆಗೆ ನಾಮಫಲಕ ಅಳವಡಿಕೆ
ಕುಂದಾಪುರ(ನ,29): ಇಲ್ಲಿನ ಕೊಗಿ೯ ಹೊಸಮಠ ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿ ಮನೆಗೆ “ಸ್ವರಾಜ್ಯ 75 ” ಸಂಘಟನೆಯ ಆಯೋಜನೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ನ,27 ರಂದು ನಡೆಯಿತು. ಕುಂದಾಪುರ ತಾಲೂಕು ಕೊಗಿ೯ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಠ ಕಂಬಳ ಗದ್ದೆ ಮನೆ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಸಿ.ರಾಜಗೊಪಾಲ ಶೆಟ್ಟಿ ಇವರ ಮನೆಗೆ ಸಾಮಾಜಿಕ ಕಾಯ೯ಕತೆ೯ಯಾಗಿ ಗುರುತಿಸಿಕೊಂಡಿರುವ ಶಾರದಾ ಡೈಮಂಡ್ ಇವರು ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಡಿ.05 ರಂದು ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ನೆತ್ತರ ನೆರವು ಅಭಿಯಾನದ ಉದ್ಘಾಟನಾ ಸಮಾರಂಭ
ಕುಂದಾಪುರ(ನ,26) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 23 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ […]
ಶ್ರೀ ದವಲ ಕಾಲೇಜ್ ಮೂಡಬಿದ್ರೆ: ಸಂವಿಧಾನ ದಿನಾಚಾರಣೆ
ಮೂಡಬಿದ್ರೆ ( ನ,26): ಇಲ್ಲಿನ ಶ್ರೀ ದವಲ ಕಾಲೇಜಿನ ಮಾನವ ಹಕ್ಕುಗಳು ಘಟಕದ ವತಿಯಿಂದ ಕಾಲೇಜಿನ ಎ. ವಿ. ಕೊಠಡಿಯಲ್ಲಿ ಸಂವಿಧಾನ ದಿನ ವನ್ನು ನ.26 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಪ್ರೊಫೆಸರ್ ಮಹಾವೀರ ಆಜ್ರಿ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಓದಿ ಹೇಳುವುದರೊಂದಿಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿದರು. ಅಲ್ಲದೆ ಸಂವಿಧಾನದ ಬಗೆಗಿನ ಜ್ಞಾನವನ್ನು ಪ್ರತಿ ಒಬ್ಬ ಭಾರತೀಯನು ಹೊಂದಿಸಿಕೊಳ್ಳುವುದರೊಂದಿಗೆ ಸಪ್ರಜೆಯಾಗಿ ಭಾರತದಲ್ಲಿ ಬದುಕುವ ಮನಸ್ಸು ಮಾಡಬೇಕು ಎನ್ನುವುದನ್ನು […]