ಗಂಗೊಳ್ಳಿ(ನ,2): ಕನ್ನಡ ಮಾಧ್ಯಮದ ಓದಿನ ಬಗ್ಗೆ ಯಾವತ್ತೂ ಕೀಳರಿಮೆಯನ್ನು ಬೆಳೆಸಿಕೊಳ್ಳದಿರಿ. ಸಾಧನೆ ಮಾಡುವ ಛಲ ಮತ್ತು ಪರಿಶ್ರಮ ಇದ್ದಾಗ ಯಶಸ್ಸು ಗಳಿಸಲು ಭಾಷಾ ಮಾಧ್ಯಮ ಯಾವತ್ತೂ ಅಡ್ಡಿಯಾಗಲಾರದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ […]
Day: November 2, 2022
ಡಾI ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಫಿಟ್ ಇಂಡಿಯಾ ಫ್ರೀಡಮ್ ರನ್ 3.0
ಕುಂದಾಪುರ (ಅ,31 ): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಫಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು. ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್ನಿoದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಗೂಡುದೀಪ ಸ್ಪರ್ಧೆ ಬಹುಮಾನ ವಿತರಣೆ
ಗಂಗೊಳ್ಳಿ(ನ,2): ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಗೂಡು ದೀಪ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ನಟರಾಜ, ದ್ವಿತೀಯ ಸ್ಥಾನವನ್ನು ನಾಗಲಕ್ಷ್ಮಿ ಜಿ.ಎನ್ ಮತ್ತು ತೃತೀಯ ಸ್ಥಾನವನ್ನು ನಿಮಿಷ ಪಡೆದರು. ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ ಬಹುಮಾನವನ್ನು ವಿತರಿಸಿದರು.
ಗಂಗೊಳ್ಳಿ: ರೋಟರಿ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಗಂಗೊಳ್ಳಿ (ನ,2): ರೋಟರಿ ಕ್ಲಬ್ ಗಂಗೊಳ್ಳಿ ,ರೋಟರಾಕ್ಟ್ ಕ್ಲಬ್ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇದರ ಸಂಯುಕ್ತ ಆಶ್ರಯದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಲೈಬ್ರರಿ ಹಾಲ್ ನಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಸುಗುಣ ಆರ್ ಕೆ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಡಾ. ಬಿ ಬಿ ಪ್ರಥಮ ದರ್ಜೆ ಕಾಲೇಜಿನ ಉಪ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಟ್ಯಾಲಿ ಕಾರ್ಯಗಾರ
ಶಿರ್ವ(ನ,2): ಆಧುನಿಕ ತಂತ್ರಜ್ಞಾನದಲ್ಲಿ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿ ಅಕೌಂಟ್ಸ್ ಬಗ್ಗೆ ಅಪಾರ ಜ್ಞಾನ ಹೊಂದಿದರಲ್ಲಿ ಟ್ಯಾಲಿ ಮತ್ತು ಎಸ್ಎಪಿ ಅಂತ ಸಾಫ್ಟ್ವೇರ್ ಕಲಿಕೆ ಸರಳವಾಗುವುದು, ತನ್ಮೂಲಕ ಚಾರ್ಟರ್ಡ್ ಅಕೌಂಟೆನ್ಸಿ ವಿಷಯದ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಈ ಕಾರ್ಯಗಾರ ಸಹಾಯಕಾರಿ ಎಂದು ಇಲ್ಲಿನ […]
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ಹೆಮ್ಮಾಡಿ(ನ,1): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವವ ನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಕನ್ನಡ ಅಭಿಮಾನದ ಬಗ್ಗೆ ಮಹತ್ವ ಸಾರುವ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ನಂದಿ ಇವರು ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ […]