ಉಡುಪಿ(ನ,8): ಆಗಸ್ಟ್ 15ರಂದು ದೇಶಾಭಿಮಾನ, ನವೆಂಬರ್ 1ರಂದು ಭಾಷಾಭಿಮಾನಗಳು ಜಾಗೃತವಾಗುತ್ತವೆ. ದಿನನಿತ್ಯ ಕನ್ನಡವನ್ನು ಆಡಿದ ಅಥವಾ ಓದಿದ ಮಾತ್ರಕ್ಕೆ ಕನ್ನಡ ಬೆಳೆಯುವುದಿಲ್ಲ. ಭಾಷೆಯನ್ನು ಪ್ರೀತಿಸದೆ, ಗೌರವಿಸದೆ, ಮಮಕಾರವಿಲ್ಲದೆ ಭಾಷೆಯನ್ನು ಬೆಳೆಸುವುದಕ್ಕೆ ಅಥವಾ ಉಳಿಸುವುದಕ್ಕೆ ಸಾಧ್ಯವಿಲ್ಲ. ತಮಿಳರಿಗೆ, ಮಲಯಾಳಿಗಳಿಗೆ ಹೋಲಿಸಿದರೆ ನಮ್ಮಲ್ಲಿ ಭಾಷಾಭಿಮಾನದ ಕೊರತೆ ಎದ್ದುಕಾಣುತ್ತದೆ. ನಾವು ಅವರಿಂದ ಭಾಷಾಭಿಮಾನ, ಭಾಷಿಕ ಪ್ರೀತಿ, ಗೌರವಗಳನ್ನು ಕಲಿಯಬೇಕಾಗಿದೆ. ಭಾಷೆ ಎಂಬುದು ಕೇವಲ ಸಂವಹನ ಸಾಧನ ಮಾತ್ರವಲ್ಲ, ಅದೊಂದು ಸಂಸ್ಕೃತಿಯೂ ಹೌದು, ಅದೊಂದು ಪರಂಪರೆಯೂ […]
Day: November 8, 2022
ಡಾ| ಬಿ. ಬಿ. ಹೆಗ್ಡೆ ಕಾಲೇಜು: ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮ
ಕುಂದಾಪುರ( ನ,8) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಐಎಎಸ್ & ಕೆಎ ಎಸ್ ಮತ್ತು ಇತರೆ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಯುನಿವರ್ಸಲ್ ಕೋಚಿಂಗ್ ಸೆಂಟರ್ನ ತರಬೇತುದಾರರಾದ ಶ್ರೀ ಅಖಿಲೇಶ್ ಶೆಟ್ಟಿ ಮಾತನಾಡಿ, ಸರ್ಕಾರಿ […]
ಕುಂದಾಪುರದ ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕುಂದಾಪುರ( ನ,8): ಎಕ್ಸಲೆಂಟ್ ಪಿ. ಯು ಕಾಲೇಜು, ಸುಣ್ಣಾರಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ , ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಎಕ್ಸಲೆಂಟ್ ಪಿ ಯು ಕಾಲೇಜಿನಲ್ಲಿ ನವೆಂಬರ್ 7 ರಂದು “ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರೀಕರ ಸಬಲೀಕರಣ” ಎನ್ನುವ ವಿಷಯದ ಕುರಿತು ಕಾರ್ಯಕ್ರಮ ಜರುಗಿತು. ಕಾನೂನು ಅರಿವು ಕಾರ್ಯಕ್ರಮವನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ […]
ಕುಂದಾ ಸರ್ಕ್ಯುಲೇಟಿಂಗ್ ಲೈಬ್ರರಿ ಮಾಲೀಕ ಶ್ರೀ ರಾಮ ದೇವಾಡಿಗ ನಿಧನ
ಕುಂದಾಪುರ( ನ,7): ಇಲ್ಲಿನ ಭಗವಾನ್ ಬಿಲ್ಡಿಂಗ್ ರಸ್ತೆಯಲ್ಲಿ 1987 ರಿಂದ ಕುಂದಾ ಸರ್ಕ್ಯುಲೇಟಿಂಗ್ ಲೈಬ್ರರಿ ಎನ್ನುವ ಲೈಬ್ರರಿ ನಡೆಸುತ್ತಾ , ನೂರಾರು ಜನರಿಗೆ ಪುಸ್ತಕದ ರುಚಿ ಹತ್ತಿಸಿದ, ಅದರ ಮಾಲೀಕರಾದ ಶ್ರೀ ರಾಮ ದೇವಾಡಿಗರು (58) ನ.07 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮಾಸ್ತಿಕಟ್ಟೆ ಹತ್ತಿರ “ರಾಧಿಕಾ ಡ್ರೆಸ್ ಸೆಂಟರ್” ಅನ್ನುವ ಬಟ್ಟೆ ಅಂಗಡಿ ನಡೆಸಿ ಪ್ರಸಿದ್ಧರಾಗಿದ್ದ ಇವರು ಇತ್ತೀಚೆಗೆ ಹೊಸ ಅಂಗಡಿಗೆ ಸ್ಥಳಾಂತರಗೊಂಡಿದ್ದರು. ಕ್ರೀಡಾಪಟುವೂ ಆಗಿದ್ದ ರಾಮ ದೇವಾಡಿಗರು […]
ವ್ಯಕ್ತಿಯ ಸಂಸ್ಕಾರದಿಂದ ವ್ಯವಹಾರದ ಉನ್ನತೀಕರಣ – ನರೇಂದ್ರ ಎಸ್ .ಗಂಗೊಳ್ಳಿ
ಗಂಗೊಳ್ಳಿ(ನ,8): ಸಮಾಜದ ಸಂತೋಷದಲ್ಲಿ ತನ್ನ ಸಂತೋಷವನ್ನು ಕಂಡುಕೊಳ್ಳುವುದು ನಿಜವಾದ ಬದುಕಿನ ಸಾರ್ಥಕತೆ. ವ್ಯಕ್ತಿಯ ಸಂಸ್ಕಾರ ಎನ್ನುವುದು ಅವನ ವ್ಯವಹಾರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಯುವ ಬರಹಗಾರ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ವೆಂಕಟೇಶ ಕೃಪಾ ಟ್ರೇಡರ್ಸ್ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೀಪಾವಳಿ ಧಮಾಕ ವಿಶೇಷ ಕೊಡುಗೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. […]