ಕುಂದಾಪುರ(ನ,29): ಇಲ್ಲಿನ ಕೊಗಿ೯ ಹೊಸಮಠ ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿ ಮನೆಗೆ “ಸ್ವರಾಜ್ಯ 75 ” ಸಂಘಟನೆಯ ಆಯೋಜನೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ನ,27 ರಂದು ನಡೆಯಿತು. ಕುಂದಾಪುರ ತಾಲೂಕು ಕೊಗಿ೯ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಠ ಕಂಬಳ ಗದ್ದೆ ಮನೆ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಸಿ.ರಾಜಗೊಪಾಲ ಶೆಟ್ಟಿ ಇವರ ಮನೆಗೆ ಸಾಮಾಜಿಕ ಕಾಯ೯ಕತೆ೯ಯಾಗಿ ಗುರುತಿಸಿಕೊಂಡಿರುವ ಶಾರದಾ ಡೈಮಂಡ್ ಇವರು ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. […]
Day: November 29, 2022
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಡಿ.05 ರಂದು ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ
Views: 156
ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.