ಕುಂದಾಪುರ(ಅ,10): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಯೋಜನೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಮಟ್ಟದ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಶಾಲೆ ಹಾಗೂ ಕುಂದಾಪುರ ಟ್ರಾಕ್ & ಫೀಲ್ಡ್ ಅಥ್ಲೆಟಿಕ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಸರ್ವ ಜಿಷ್ಟು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
Year: 2022
ಅವನಿ ಪ್ರಕಾಶನ ಮಂಗಳೂರು : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಮಂಗಳೂರು (ಅ.10): ಅವನಿ ಪ್ರಕಾಶನ, ಮಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕುಂದಗನ್ನಡದ ನನ್ನ ಊರು – ಜನ – ಸಂಸ್ಕೃತಿ – ಪರಂಪರೆ” ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಹೈಸ್ಕೂಲ್ ವಿಭಾಗ,ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು ,ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ , ತೃತೀಯ ಮತ್ತು ಮೂರು ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ಆರೋಗ್ಯ ಶಿಬಿರ ಸಂಪನ್ನ
ಬೈಂದೂರು(ಅ,10): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕದ ನೇತೃತ್ವದಲ್ಲಿ ನಾಡೋಜ ಡಾ. ಜಿ. ಶಂಕರ್ ಜನ್ಮದಿನದ ಪ್ರಯುಕ್ತ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಮತ್ತು ಕೆ ಎಮ್ ಸಿ ಮಣಿಪಾಲ ಇವರ ಸಹಯೋಗದಲ್ಲಿ ಚರ್ಮ, ಕಿವಿ, ಮೂಗು ಹಾಗೂ ಗಂಟಲಿನ ಉಚಿತ ತಪಾಸಣಾ ಶಿಬಿರ ಅ .09 ರಂದು ಸಂಪನ್ನಗೊಂಡಿತು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುನ್ನೂರಕ್ಕೂ […]
ಅಕ್ಷಯ್ ಬಡಾಮನೆಯವರಿಗೆ ರಿಹಾ ರೈಸಿಂಗ್ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ
ಕುಂದಾಪುರ (ಅ,09): ಹಲವಾರು ಅಲ್ಬಂ ಹಾಡುಗಳು, ಸಿನಿಮಾ ಹಾಡನ್ನು ಹಾಡಿರುವ ಬಹುಮುಖ ಪ್ರತಿಭೆ ಗಾಯಕ ಅಕ್ಷಯ್ ಬಡಾಮನೆ ಈ ವರ್ಷದ RIHA Raising Star of India ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ RIHA India Organisation ಏರ್ಪಡಿಸಿದ್ದ RIHA Stars of India ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅತ್ತ್ಯುತ್ತಮ ಗಾಯಕ ಪ್ರಶಸ್ತಿಯನ್ನು ಗಾಯಕ ಅಕ್ಷಯ್ ಬಡಾಮನೆಯವರಿಗೆ ಪ್ರದಾನ ಮಾಡಲಾಯಿತು. ಮೂಲತಃ ಕುಂದಾಪುರದ ಬೈಂದೂರಿನ ಕೆರ್ಗಾಲು ನಂದನವನ ಗ್ರಾಮದ ಅಕ್ಷಯ್ ಸುಮಾರು […]
ಹೆಮ್ಮಾಡಿ ಶ್ರೀ ವಿ.ವಿ.ವಿ ಮಂಡಳಿ(ರಿ)ಗೆ ಪದನಿಮಿತ್ತ ನಾಮ ನಿರ್ದೇಶಕರಾಗಿ ಶ್ರೀ ಗಣೇಶ ಮೊಗವೀರ ಆಯ್ಕೆ
ಹೆಮ್ಮಾಡಿ(ಅ,8): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರನ್ನು ಶ್ರೀ ವಿ.ವಿ.ವಿ ಮಂಡಳಿ(ರಿ.),ಗೆ ಪದನಿಮಿತ್ತ ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಶ್ರೀ ವಿ.ವಿ.ವಿ.ಮಂಡಳಿ(ರಿ) ಗೆ ಹೆಮ್ಮಾಡಿ ಇದರ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಶ್ರೀ ಗಣೇಶ ಮೊಗವೀರರವರು ಸಮರ್ಪಣಾ ಎಜುಕೇಶನ್ ಟ್ರಸ್ಟ್(ರಿ) ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೈಸೂರು ದಸರಾ ಪ್ರಯುಕ್ತ ಬಾಡಿ ಬಿಲ್ಡಿಂಗ್ : ಸೋಮಶೇಖರ್ ಖಾರ್ವಿ ದ್ವೀತಿಯ
ಕುಂದಾಪುರ(ಅ,8): ಹಲವಾರು ರಾಜ್ಯ ಮತ್ತು ಅಂತರ್ ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿಯನ್ನು ಪಡೆದಿರುವ ಕುಂದಾಪುರ ತಾಲೂಕಿನ ಕಂಚುಗೋಡು ನಿವಾಸಿ ಸೋಮಶೇಖರ್ ಖಾರ್ವಿಯವರು ಇತ್ತೀಚೆಗೆ ಮೈಸೂರಿನಲ್ಲಿ ದಸರಾ ಪ್ರಯುಕ್ತ ನಡೆದ ಬಾಡಿ ಬಿಲ್ಡಿಂಗ್ 65 ಕೆ.ಜಿ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದಿರುತ್ತಾರೆ. ಸೋಮ ಶೇಖರ್ ಖಾರ್ವಿಯವರ ಈ ಸಾಧನೆಗೆ ಗ್ರಾಮಸ್ಥರು ಮತ್ತು ಅಭಿಮಾನಿಗಳು ಅಭಿನಂದನೆಕೋರಿದ್ದಾರೆ.
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ
ಗಂಗೊಳ್ಳಿ(ಅ,8): ಎನ್ಎಸ್ಎಸ್ ಶಿಬಿರದಲ್ಲಿ ಕಲಿತ ಮೌಲಿಕವಾದ ಅಂಶಗಳನ್ನು ತಮ್ಮ ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿತ್ವವನ್ನು ಸದೃಢಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು ,ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ […]
ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಸನ್ಮಾನ
ಹೆಬ್ರಿ (ಅ,8): ಇತ್ತೀಚೆಗೆ ಹೆಬ್ರಿ ಸಮೀಪದ ಹೊರ್ಲಾಳಿಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರೂಪಕ,ಮಲ್ಟಿಪಲ್ ಯಂಗ್ ಲಯನ್ ಆ್ಯಂಡ್ ಸ್ಟಾರ್ ಲಯನ್ ಆವಾರ್ಡ್ ,ಇಂಟರ್ನ್ಯಾಷನಲ್ ಲಯನ್ಸ್ ಲೀಡರ್ ಶಿಪ್ ಅವಾರ್ಡ್ , ರಾಷ್ಟ್ರೀಯ ರತ್ನ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಯುವ ವಾಗ್ಮಿ ,ಸಂಘಟಕ,ಹತ್ತು ಹಲವು ಸಂಘಟನೆಗಳ ಅಧ್ಯಕ್ಷರಾಗಿ, ತಾಲೂಕು ,ಜಿಲ್ಲಾಧ್ಯಕ್ಷರಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿರುವ, ಕಲೆ, ಕ್ರೀಡೆ, ಸಾಮಾಜಿಕ ,ಧಾರ್ಮಿಕ ಮತ್ತು […]
ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ (ಅ,8): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ನನ್ನ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಭಾವ ಈ ವಿಷಯದ ಕುರಿತಂತೆ ವಿದ್ಯಾರ್ಥಿಗಳು A4 ಅಳತೆಯ ಕಾಗದದಲ್ಲಿ ಮೂರು ಪುಟಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಳುಹಿಸಬೇಕು. ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ […]
ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಅ.9): ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 61 ಕೆ.ಜಿ ವಿಭಾಗದಲ್ಲಿ ನಿಶ್ಚಲ್ ಫಿಲಿಪ್ ಬೆಳ್ಳಿ ಪದಕ, 65 ಕೆ.ಜಿ ವಿಭಾಗದಲ್ಲಿ ಕ್ರಮವಾಗಿ ಅನುಲ್ ಚಿನ್ನದ ಪದಕ ಹಾಗೂ ಡೆನ್ಜಿಲ್ ಡಯಸ್ ಬೆಳ್ಳಿಯ ಪದಕ, 70ಕೆ.ಜಿ ಮೇಲ್ಪಟ್ಟ ವಿಭಾಗದಲ್ಲಿ ಸೂರಜ್ ಡಯಾಸ್ ಕಂಚಿನ ಪದಕ, 79 […]