ಕುಂದಾಪುರ( ಅ,4): ತಾಲೂಕಿನ ವಿಶೇಷ ಚೇತನರ ಸಂಪನ್ಮೂಲ ಕೇಂದ್ರಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಾನ್ಯ ರಾಜ್ಯ ಆಯುಕ್ತರು ಹಾಗೂ ನಿರ್ದೇಶಕರಾದ ಕೆ.ಎಸ್.ಲತಾ ಕುಮಾರಿ ಇತ್ತೀಚೆಗೆ ಭೇಟಿ ನೀಡಿದರು . ಈ ಸಂದರ್ಭದಲ್ಲಿ ಅವರನ್ನು ತಾಲೂಕು MRW VRW,URW ನೌಕರರ ಸಂಘದಿಂದ ಸ್ವಾಗತಿಸಿ ,ಅಭಿನಂದಿಸಿದರು. ಈ ಸಂದರ್ಭದಲ್ಲಿ ತಾಲೂಕು ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಹಾಗೂ ಯೂನಿಯನ್ ಗೌರವಾಧ್ಯಕ್ಷರಾದ ಶ್ರೀ ಮಂಜುನಾಥ ಹೆಬ್ಬಾರ್, ತಾಲೂಕು ನೌಕರರ ಸಂಘದ […]
Year: 2022
ಶಿವಮೊಗ್ಗ ಮಕ್ಕಳ ದಸರಾ 2022: ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು
ಶಿವಮೊಗ್ಗ (ಸೆ,2022): ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ), ಶಿವಮೊಗ್ಗ ಇವರ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ರ ಅಂಗವಾಗಿ ಸೆಪ್ಪಂಬರ್ 27 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2 ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಗಾoಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಅ,02) ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಕೆ.ಉಮೇಶ್ ಶೆಟ್ಟಿಯವರು ಮಾತನಾಡಿ ಗಾಂಧಿ ಹಾಗೂ ಶಾಸ್ತ್ರಿ ಇಬ್ಬರೂ ನುಡಿದಂತೆ ನಡೆದವರು ಅವರ ತತ್ವ ಬೋಧನೆಗಳು ಇಂದಿಗೂ ಪ್ರಸ್ತುತ. ಸಮಕಾಲೀನವಾಗಿ ಅವರು ಸಾದರ ಪಡಿಸಿದ ಮೌಲ್ಯಗಳು ಇನ್ನಷ್ಟು ಅಧ್ಯಯನ ಶೀಲತೆಗೆ ಒಳಗಾಗಲಿ ಎಂದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ […]
ಎಸ್ ವಿ ಪಿ ಯು ಕಾಲೇಜು ಗಂಗೊಳ್ಳಿ : ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ […]
ಕಾಂತಾರ…..ಇದು ದೈವಲೀಲೆಯ ಅವತಾರ…..
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಕೆರಾಡಿ ಎನ್ನುವ ಹಳ್ಳಿಯೊಂದರಲ್ಲಿ ಚಿತ್ರೀಕರಣಗೊಂಡು, ಅದೇ ಹಳ್ಳಿಗರ ಮನೆಮಗ ಸ್ಯಾಂಡಲ್ ವುಡ್ ನ ಖ್ಯಾತ ನಟ -ನಿರ್ದೇಶಕ ರಿಷಬ್ ಶೆಟ್ಟಿಯವರು ನಾಯಕನಾಗಿ ನಟಿಸಿರುವ ಹಾಗೂ ಕೆ.ಜಿ.ಫ್ ಖ್ಯಾತಿಯ ಹೊಂಬಾಳೆ ಫಿಲ್ಸಂ ರವರ ನಿರ್ಮಾಣದಲ್ಲಿ ಮೂಡಿ ಬಂದ ಕಾಂತಾರ ಚಿತ್ರ ಕನ್ನಡದ ಸಿನಿಮಾರಂಗದಲ್ಲಿ ಹೊಸ ಅಲೆಯನ್ನು ಸ್ರಷ್ಠಿಸಿದೆ. ದೈವಾರಾಧನೆಯ ಜೊತೆಗೆ ಭೂ ಮಾಲೀಕತ್ವದ ಸಂಘರ್ಷದೊದಿಗೆ ಹೆಣೆದು ಕೊಂಡಿರುವ ಸಿನೆಮಾದ ಕಥೆ ತುಳುನಾಡು […]
ಎಕ್ಸೆಲೆಂಟ್ ಪ್ರೌಢ ಶಾಲೆ ಸುಣ್ಣಾರಿ : ಹಾಲಾಡಿ ವೃತ್ತಮಟ್ಟದ ಅಥ್ಲೇಟಿಕ್ಸ್ ನಲ್ಲಿ ಎರಡು ಚಿನ್ನದ ಪದಕ
ಕುಂದಾಪುರ(ಸೆ,30): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆಯ ವಿದ್ಯಾರ್ಥಿಗಳಾದ ಅಕ್ಷರ್ ಎನ್ ಶೆಟ್ಟಿ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಸರ್ವಜಿಷ್ಣು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ
ಕಾರ್ಕಳ(ಸೆ.30): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ, ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸೈನ್ಸ್ ಕ್ಲಬ್ನ ಮುಖ್ಯಸ್ಥ ಲೋಹಿತ್ ಎಸ್ .ಕೆ ಸುಂದರ್ ಮಾತನಾಡಿ ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ […]
ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.29):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮ ಸೆ.28 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯತೆಗಳ ಕುರಿತು ತಿಳಿಸಿದರು. […]
ನರೇಂದ್ರ ಎಸ್ ಗಂಗೊಳ್ಳಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಗಂಗೊಳ್ಳಿ (ಸೆ,29): ಪ್ರತಿಷ್ಠಿತ ರೋಟರಿ ಕ್ಲಬ್ ನ ರೋಟರಿ ಇಂಡಿಯಾ ಲಿಟರಸಿ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡ ಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರಿಗೆ ಲಭಿಸಿದೆ. ರೋಟರಿ ಕ್ಲಬ್ ಗಂಗೊಳ್ಳಿ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಉಪನ್ಯಾಸಕ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ,29): ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ […]