ಕಾರ್ಕಳ(ಸೆ,20): ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಶ್ರೀ ಹರಿಶ್ಚಂದ್ರ ಕುಲಾಲ್ ಇಂದು ನಾವು ವಿದ್ಯಾಭ್ಯಾಸದಲ್ಲಿ ಶೈಕ್ಷಣಿಕ ಪ್ರಗತಿಯನ್ನು ಮಾತ್ರ ಗಮನಿಸುತ್ತಿದ್ದೇವೆ ಆದರೆ ನಮಗೆ ಅನ್ನ ನೀಡುವ ಕೃಷಿ ಭೂಮಿ ಮತ್ತು ಕೃಷಿಕರ ಕುರಿತು ತಿಳುವಳಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು ಭಾವಿಸದೇ […]
Year: 2022
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಲಿಮಿಟ್ ಲೆಸ್ ಸೈನ್ಸ್
ಕುಂದಾಪುರ (ಸೆ,19): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಲ್ಪಟ್ಟ ಪ್ರೇರಣಾ – 2022 ಸರಣಿ ಕಾರ್ಯಾಗಾರದ ಮುಂದಿನ ಭಾಗದಲ್ಲಿ ” ಲಿಮಿಟ್ ಲೆಸ್ ಸೈನ್ಸ್ ” ಎನ್ನುವ ವಿಷಯವಾಗಿ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲ್ ನ ನಿವೃತ್ತ ವಿಜ್ಞಾನ ಶಿಕ್ಷಕರಾಗಿರುವ ಶ್ರೀ […]
ಕರಾಟೆಯಲ್ಲಿ ಅನ್ಸಿಟಾಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಸೆ,19): ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪಂದ್ಯಾಟ 2022-23ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನ್ಸಿಟಾ ಮರಿಯಾ ರೆಬೆಲ್ಲೊ ಕರಾಟೆಯ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಟ್ರೆವರ್ ರೋಮನ್ ರೆಬೆಲ್ಲೊ ಮತ್ತು ಅನಿತಾ ಸ್ಟೆಫಾನಿಯ ರೆಬೆಲ್ಲೊ ದಂಪತಿಯ ಪುತ್ರಿ ಹಾಗೂ ಕಿರಣ್ ಕುಂದಾಪುರ ಇವರಿಂದ ತರಬೇತಿ ಪಡೆದಿದ್ದಾಳೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಹುಡುಗರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ
ಕುಂದಾಪುರ (ಸೆ,19): ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಶ್ರೀ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಹುಡುಗಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಸೆ,19): ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಶ್ರೀ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ತಿಲಕ್ ಖಾರ್ವಿ ಈಜುವಿನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ (ಸೆ,19): ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇಲ್ಲಿನ ತಿಲಕ್ ಖಾರ್ವಿ 100 ಮೀಟರ್ ರ್ಬ್ರೆಸ್ಟ್ರೋ ಕ್ ನಲ್ಲಿ ಪ್ರಥಮ, 50 ಮೀಟರ್ ಮೀಟರ್ ಬ್ರೆಸ್ಟ್ರೋಕ್ನಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋದಕೇತರ ವ್ರಂದ ತಿಲಕ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇಂಜಿನಿಯರ್ಸ್ ಡೇ: ಸನ್ಮಾನ ಕಾರ್ಯಕ್ರಮ
ಗಂಗೊಳ್ಳಿ( ಸೆ.18): ಇಂಜಿನಿಯರ್ಸ್ ಡೇ ಪ್ರಯುಕ್ತ ಹಕ್ಲಾಡಿಯ ಚೆನ್ನಕೇಶವ ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಜಂಟಿ ಸಭೆಯನ್ನು ಇತ್ತೀಚೆಗೆ ಆಯೋಜಿಸಲಾಯಿತು . ಕಾರ್ಯಕ್ರಮದಲ್ಲಿ ಇಂಜಿನಿಯರ್ ಲಯನ್ಸ್ ಸತೀಶ್ ಶೆಟ್ಟಿ ಇವರಿಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ನಾಗೇಶ್ ಪೂಜಾರಿ ಹಾಗೂ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸುಗುಣ ಆರ್ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಲಯನ್ ಕಿಶೋರ್ ಕುಮಾರ್ ಶೆಟ್ಟಿ ಹಾಗೂ […]
ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 : ಪ್ರಥಮೇಶ್ ಡಿ. ಪೂಜಾರಿಗೆ ಬೆಳ್ಳಿ ಪದಕ
ಕುಂದಾಪುರ (ಸೆ,18): ಸಿದ್ದಾಪುರದ ಸರಸ್ವತಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 ರಲ್ಲಿ ಶ್ರೀರಾಮ ವಿದ್ಯಾ ಕೇಂದ್ರ ಕೋಡಿ ಇಲ್ಲಿನ ವಿದ್ಯಾರ್ಥಿ ಪ್ರಥಮೇಶ್ ಡಿ.ಪೂಜಾರಿ 400 ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆ ಯ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಜಿ.ಎಸ್.ಟಿ ಕುರಿತು ಮಾಹಿತಿ ಕಾರ್ಯಗಾರ
ಕಾರ್ಕಳ (ಸೆ,17): ಇಲ್ಲಿನ ಕ್ರಿಯೇಟಿವ್ ಪಿ ಯು ಕಾಲೇಜು ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಜಿ.ಎಸ್ .ಟಿ (ಸರಕು ಮತ್ತು ಸೇವಾ ತೆರಿಗೆ) ಕುರಿತಾಗಿ ಮಾಹಿತಿ ಕಾರ್ಯಗಾರವನ್ನು ಸೆ.17ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತೆರಿಗೆ ಸಲಹೆಗಾರರಾದ ಶ್ರೀ ವಿನಯ್ ಹೆಗಡೆಯವರು ಜಿ.ಎಸ್.ಟಿ ಕುರಿತು ಮಾಹಿತಿಯನ್ನು ನೀಡಿದರು. ಜಿ.ಎಸ್.ಟಿ ಎನ್ನುವುದು ʼಒಂದು ದೇಶ-ಒಂದು ತೆರಿಗೆʼ ಪರಿಕಲ್ಪನೆಯಲ್ಲಿರುವ ಪರೋಕ್ಷ ತೆರಿಗೆಯಾಗಿದ್ದು, ಈ ತೆರಿಗೆಯು ಪ್ರತಿ ಮೌಲ್ಯದ ಸೇರ್ಪಡೆಗೆ ವಿಧಿಸುವ ತೆರಿಗೆಯಾಗಿರುತ್ತದೆ. ಇಂದು […]
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ: 75ನೇ ತಿಂಗಳ ಕಾರ್ಯಕ್ರಮ- ಕಲಾವಿದ ನಾರಾಯಣ ಬಿಲ್ಲವರಿಗೆ ನುಡಿ ನಮನ
ತಲ್ಲೂರು(ಸೆ,17); ಅಂತರಾಷ್ಟ್ರೀಯ ಖ್ಯಾತಿಯಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 75ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಉಪ್ಪಿನ ಕುದ್ರುವಿನ ಗೊಂಬೆಮನೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಗೊಂಬೆಯಾಟದ ಆರ್ಥಧಾರಿ ನಾರಾಯಣ ಬಿಲ್ಲವರಿಗೆ ನುಡಿ ನಮನ ಸಲ್ಲಿಸಲಾಯಿತು. ಬಡಗು ತಿಟ್ಟಿನ ಖ್ಯಾತ ಭಾಗವತರಾದ ಶ್ರೀ ಉಮೇಶ್ ಸುವರ್ಣ ರವರು ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥನೆಗೈದರು. ಶ್ರೀಮತಿ ರಶ್ಮಿ ರಾಜ್ ಮತ್ತು ತಂಡದವರು ವಿಷ್ಣು ಸಹಸ್ರನಾಮ ಪಠಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೆಯೇ ಕಾರ್ಯಕ್ರಮದಲ್ಲಿ ಜನಾರ್ದನ ಹಂದೆಯವರನ್ನು ಅಕಾಡೆಮಿಯ ವತಿಯಿಂದ […]