ಉಡುಪಿ( ಡಿ,06): ಸುಹಾಸಂ ವತಿಯಿಂದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಓ.ಆರ್.ಪ್ರಕಾಶ್ ಬರೆದ ‘ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ ಸಮಾರಂಭವು ಇತ್ತೀಚೆಗೆ ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿದ ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಮಾತನಾಡಿ, ಗಾಂಧೀಜಿ ವೈಯಕ್ತಿಕ, ಸಾರ್ವಜನಿಕ ಬದುಕು ಒಂದೇ ಆಗಿದ್ದರಿಂದಲೇ ಮಹಾತ್ಮನ ಪಟ್ಟವೇರಿದ್ದಾರೆ. ಜನರ ಹೃದಯದಲ್ಲಿ ಇಂದಿಗೂ ನೆಲೆಸಿದ್ದಾರೆ. ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ. ಗಾಂಧಿ […]
Year: 2022
ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ಕಲಾಸಂಘದ ಉದ್ಘಾಟನೆ
ಮೂಡುಬಿದಿರೆ(ಡಿ,06): ಇಲ್ಲಿನ ಶ್ರೀ ಧವಲಾ ಕಾಲೇಜಿನ ಕಲಾಸಂಘದ ಉದ್ಘಾಟನಾ ಕಾರ್ಯಕ್ರಮವು ನವೆಂಬರ್ 30 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಶ್ರೀ ಸುನಿಲ್ ಪಲ್ಲಮಜಲು , ಕನ್ನಡ ಪ್ರಾಧ್ಯಾಪಕರು, ವೈಬ್ರೆಂಟ್ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡುಬಿದಿರೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನವಿಕ ಶಾಸ್ತ್ರಗಳ ಅಧ್ಯಯನಗಳು ಕಟ್ಟುವ ಸ್ವಾವಲಂಬಿ ಬದುಕು ಎಂಬ ವಿಷಯದ ಕುರಿತು ಹಲವಾರು ಉದಾಹರಣೆಗಳ ಸಹಿತ ವಿಸ್ತೃತವಾಗಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಹಾವೀರ ಅಜ್ರಿಯವರು ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಭವಿಷ್ಯ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಂಪನ್ನ
ಕುಂದಾಪುರ (ಡಿ,6): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಡಿ.05 ರಂದು ನಡೆದ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿಗೆ ಪ್ರಥಮ ಸ್ಥಾನ, ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ದ್ವಿತೀಯ ಸ್ಥಾನ ,ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೃತೀಯ ಸ್ಥಾನ […]
ಎಳವೆಯಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಿ- ಎಸ್ ಎಲ್ ಬೋಜೇಗೌಡ
ಮೂಡಬಿದ್ರೆ(ಡಿ,05): ಶ್ರೀ ಧವಲ ಕಾಲೇಜು ಮೂಡಬಿದ್ರೆಯ 2022 -23 ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಡಿ .02ರಂದು ನಡೆಯಿತು. ವಿಧಾನ ಪರಿಷತ್ ನ ಸದಸ್ಯರಾದ ಎಸ್ ಎಲ್ ಭೋಜೆ ಗೌಡ ಸಂಘವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಎಳವೆಯಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದ. ಕ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾದ ಶ್ರೀ ಸುದರ್ಶನ್ ಎಂ ಭಾಗವಹಿಸಿದರು. ಶ್ರೀ ಮೂಡಬಿದ್ರೆ ದಿಗಂಬರ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆರ್ಯ ಮೊಗವೀರ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಡಿ,06): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋದಕೇತರ ವೃಂದದವರು ಅಭಿನಂದಿಸಿದ್ದಾರೆ.
ನಾವುಂದ: ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ದ್ವಿತೀಯ ಸ್ಥಾನ
ನಾವುಂದ( ಡಿ,6): ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು ಶ್ರೀ ಸೋಂಧಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ವತಿಯಿಂದ ನಡೆದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವಿಭಾಗದಲ್ಲಿ ನಾವುಂದದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಪಾಲಕ-ಶಿಕ್ಷಕರ ಸಭೆ
ಕಾರ್ಕಳ(ಡಿ,6): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಪಾಲಕರ-ಶಿಕ್ಷಕರ ಸಭೆ ಡಿಸೆಂಬರ್ 04 ರಂದು ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವಿವಿಧ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಿ ತರಬೇತಿ ನೀಡಲಾಗುತ್ತಿದೆ. ಆಯಾ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯನ್ನು ಅತ್ಯಂತ ಪಾರದರ್ಶಕವಾಗಿ ಪರಿಶೀಲಿಸಿ, ಲೋಪದೋಷಗಳನ್ನು ಪರಿಹರಿಸಲಾಗುತ್ತಿದೆ. ಮುಂಬರುವ NEET,CET, KVPY, NATA, NDA, IIT ಪರೀಕ್ಷೆಗಳಿಗೆ ನುರಿತ ಅನುಭವಿ ಪ್ರಾಧ್ಯಾಪಕರು […]
ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆಯ ಉದ್ಘಾಟನೆ
ಕುಂದಾಪುರ(ಡಿ,04): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಡಿ.01 ರoದು ಜೂನಿಯರ್ ರೆಡ್ ಕ್ರಾಸ್ ಘಟಕಉದ್ಘಾಟನೆಗೊಂಡಿತು. ಕುಂದಾಪುರದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ, ಮಾತನಾಡಿ,ರೆಡ್ ಕ್ರಾಸ್ ಸಂಸ್ಥೆಯ ಮಹತ್ವ ಮತ್ತು ಕಾರ್ಯವೈಖರಿಯನ್ನು ವಿವರಿಸಿದರು. ಶಾಲೆಯ ಶಿಕ್ಷಕಿ ರೇಖಾ ಕೆ.ಯು ರವರಿಗೆ […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ:ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಕ್ರೀಡಾಂಗಣದ ಭೂಮಿ ಪೂಜೆ
ಕುಂದಾಪುರ( ಡಿ,4): ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ ಬೆಂಗಳೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 8,9 ಮತ್ತು10 ರಂದು ಆಯೋಜನೆಗೊಂಡಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಕ್ರೀಡಾಂಗಣ ಭೂಮಿ ಪೂಜೆಯನ್ನು ಡಿಸೆಂಬರ್ 01 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೆರಿತು. ಪುರೋಹಿತರಾದ ಶಂಕರನಾರಾಯಣ ಉಡುಪ ಅವರ ನೇತೃತ್ವದಲ್ಲಿ […]
ಆರ್.ಎನ್.ಶೆಟ್ಟಿ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರು ಫೀಲ್ಡ್ ಇವೆಂಟ್ ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಡಿ,4): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರ ಕ್ರೀಡೆ( ಫೀಲ್ಡ್ ಇವೆಂಟ್) ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶೆರಿಲ್ ಡಿಸೋಜಾ ಇವರು ಶಾಟ್ ಪುಟ್ ತ್ರೋ ನಲ್ಲಿ, ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶ್ರಾವ್ಯ ಜ್ಯಾವೆಲಿನ್ ತ್ರೋನಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಹಿತಾ. ಕೆ. ಶೆಟ್ಟಿ ಹ್ಯಾಮರ್ ತ್ರೋ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ […]