ಕೋಟೇಶ್ವರ (ನ,15): ಇಲ್ಲಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕ್ರೀಡಾಕೂಟದ ಜೊತೆಗೆ ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೋಟೇಶ್ವರದ ಹೆಸರಾಂತ ವೈದ್ಯರಾದ ಡಾ. ಶ್ರೀಪಾದ್ ಹೆಗ್ಡೆ ಯವರು ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿದರು. ನಿವೃತ್ತ ಮೆಸ್ಕಾಂ ಅಧಿಕಾರಿ ಬಾಬಣ್ಣ ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಮಾತಾನಾಡಿ ಮಕ್ಕಳು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ ಪಡೆಯುವುದರ ಮೂಲಕ ನಮ್ಮೂರಿಗೆ ಕೀರ್ತಿ ತರುವುದರ ಜೊತೆಗೆ ಇಡೀ ದೇಶದ ಆಸ್ತಿಯಾಗಬೇಕು, […]
Year: 2022
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಮಕ್ಕಳ ದಿನಾಚರಣೆ
ಕುಂದಾಪುರ( ನ,15) : ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್, ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಅoತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮ
ಕುಂದಾಪುರ (ನ,15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಿಸರ್ಚ್ ಎಂಡ್ ಟ್ರೈನಿಂಗ್ , ಎಮ್.ಡಿ.ಎನ್. ಲ್ಯಾಬ್ಸ್, ಮಣಿಪಾಲ್ನ ಡೈರೆಕ್ಟರ್ರಾದ ಡಾ| ನಿರಂಜನ್ ಯು.ಸಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಮತಿ ಎಮ್.ಎಸ್. ಸುಪರ್ಣಾ ಶೆಟ್ಟಿ ಉದ್ಯೋಗಾಧಾರಿತ ಕೌಶಲ್ಯಗಳ ಬಗ್ಗೆ […]
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ: ವಾರ್ಷಿಕ ಕ್ರೀಡಾಕೂಟ
ಕುಂದಾಪುರ (ನ,15): ಇವತ್ತಿನ ನಮ್ಮ ದೈನಂದಿನ ಜೀವನದಲ್ಲಿ ದೇಹದಂಡನೆ ಕಡಿಮೆಯಾಗಿರುವುದರಿಂದ ವ್ಯವಸ್ಥಿತವಾದ ತರಬೇತಿ ಆಧರಿತ ಕ್ರೀಡೆಯ ಅಗತ್ಯವಿದೆ. ದಿನ ನಿತ್ಯವೂ ಅಲ್ಪ ಸಮಯವನ್ನಾದರೂ ನಾವು ದೇಹಬಲವನ್ನು ಹೆಚ್ಚಿಸುವಂಥ ಕಾರ್ಯಗಳಿಗೆ ನೀಡಬೇಕು” ಎಂದು ಕುಂದಾಪುರ ತಾಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯವರಾದ ಶ್ರೀ ಕುಸುಮಾಕರ ಶೆಟ್ಟಿಯವರು ಹೇಳಿದರು . ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ […]
ಸೇವಾ ಚೇತನ ಟ್ರಸ್ಟ್ ಮೂಡುಬಗೆ: ಮನೆ ಹಸ್ತಾಂತರ ಕಾರ್ಯಕ್ರಮ
ಅoಪಾರು( ನ,15): ಬಡ ಕುಟುಂಬದ ವನಜ ಪೂಜಾರಿ ಇವರು ಮನೆಯನ್ನು ಕಟ್ಟಬೇಕು ಎಂದು ನಿರ್ಧರಿಸಿದ ಆ ಸಮಯದಲ್ಲಿ ತನ್ನ ಗಂಡನನ್ನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಕಳೆದುಕೊಂಡಾಗ ಅವರೊಂದಿಗೆ ಇದ್ದಿದ್ದು ಎಂಡೋಸಲ್ಫನ್ ಪೀಡಿತ ಬುದ್ಧಿಮಾಂದ್ಯ ಮಗ. ಮಗನನ್ನು ಬಿಟ್ಟು ಕೂಲಿಗೂ ಹೋಗಲಾಗದ ಪರಿಸ್ಥಿತಿ. ಇವರ ಮನೆ ನಿರ್ಮಾಣ ಕಾರ್ಯ ಪೂರ್ಣ ಗೊಳಿಸಬೇಕೆಂದು ಅನೇಕರು ಪ್ರಯತ್ನ ಪಟ್ಟರೂ ಕೂಡ ಸಾಧ್ಯವಾಗದಿದ್ದಾಗ ಇವರು ಸಂಪರ್ಕಿಸಿದ್ದು ಸೇವಾ ಚೇತನ ಟ್ರಸ್ಟ್ . ಅವರ ಕಷ್ಟವನ್ನು […]
ಬದುಕು ಬದಲಿಸಬಹುದು ಖ್ಯಾತಿಯ ನೇಮಿಚಂದ್ರ – ಕುಂದಾಪುರದ ಎಚ್.ಎಮ್.ಎಮ್.ವಿ.ಕೆ.ಆರ್. ಶಾಲೆಗೆ ಭೇಟಿ
ಕುಂದಾಪುರ ( ನ.14): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ನ.12 ರಂದು ಸಿದ್ಧ ವಿಜ್ಞಾನಿ, ಕಥೆಗಾರ್ತಿ, ಮಾನವತಾವಾದಿ, ಲೇಖಕಿ “ಬದುಕು ಬದಲಿಸಬಹುದು” ಖ್ಯಾತಿಯ ನೇಮಿಚಂದ್ರ ರವರು ಆಗಮಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಸಾಧಕಿಯರನ್ನು ಶಾಲೆಯ ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸುವ ಸದುದ್ದೇಶದೊಂದಿಗೆ ”ವಿಜ್ಞಾನಿಯೊಂದಿಗೆ ಸಂವಾದ “ ಎನ್ನುವ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ಕನಕದಾಸ ಜಯಂತಿ
ಕುಂದಾಪುರ(ನ,14): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಅವರ ಕೀರ್ತನೆಗಳನ್ನು ಭಜಿಸಿ ಕನಕದಾಸ ಜಯಂತಿಯನ್ನು ನ.11 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾದ ವಿ. ಕೆ. ಆರ್. ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಪ್ರಕಾಶ ಬಿಲ್ಲವರವರು ಕನಕದಾಸರು ತಮ್ಮ ಕೀರ್ತನೆಗಳ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ ಕಾರ್ಯಕ್ರಮ
ಕುಂದಾಪುರ (ನ.14): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ.ಬಿ. ಹೆಗ್ಡೆ ಅವರು ಅಗ್ರಪಂಕ್ತಿ ಯಲ್ಲಿ ಗುರುತಿಸಿ ಕೊಂಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ.ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಎನ್.ಎಸ್.ಎಸ್ ಘಟಕದ ವತಿಯಿಂದ ಕ್ಯಾಂಪಸ್ ಕ್ಲೀನ್
ಕುಂದಾಪುರ (ನ.14): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕ್ಯಾಂಪಸ್ ಸ್ವಚ್ಛತೆ ಅಭಿಯಾನ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮಂಡ್ ನಜರತ್ ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಉಪಸ್ಥಿತರಿದ್ದರು.
ಕರಾಟೆ – ವಿ. ಕೆ. ಆರ್. ಪ್ರೌಢ ಶಾಲಾ ವಿದ್ಯಾರ್ಥಿನಿ ನವಮಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ನ.14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ “ರಾಜ್ಯ ಮಟ್ಟದ ಶಾಲಾ […]