ಕಾರ್ಕಳ (ಫೆ.06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) 2022 ರ ಡಿಸೆಂಬರ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ […]
Day: February 6, 2023
ಡಾ| ಬಿ.ಬಿ. ಹೆಗ್ಡೆ ಕಾಲೇಜು – ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ
ಕುಂದಾಪುರ (ಫೆ.06): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಯುವ ರೆಡ್ ಕ್ರಾಸ್ ಕಾರ್ಯವೈಕರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]
ದಯಾನಿಧಿ ಬಂಟರ ಬಳಗ ಅಶಕ್ತರ ಪಾಲಿನ ಬೆಳಕು -ಶ್ರೀ ಬಿ ಅಪ್ಪಣ್ಣ ಹೆಗ್ಡೆ
ಕೋಟೇಶ್ವರ (ಫೆ.06): ಬಡತನದಲ್ಲಿ ಹುಟ್ಟಿ, ಬಡತನದ ನೋವುಂಡು, ಅದನ್ನು ಮೆಟ್ಟಿ ನಿಲ್ಲಬೇಕೆಂಬ ಏಕೈಕ ಆಶಯದೊಂದಿಗೆ ಸಿಕ್ಕ ಪ್ರತಿ ಅವಕಾಶಗಳನ್ನು ಬಳಸಿಕೊಂಡು, ಅವಕಾಶ ಇಲ್ಲದಾಗ ಅದನ್ನು ಸೃಷ್ಟಿಸಿಕೊಂಡು ಅವಿರತ ಪ್ರಯತ್ನ ಮಾಡುತ್ತಿರುವಾಗ, ವ್ಯಕ್ತಿ ಓರ್ವ ಮಾರಕ ಕಾಯಿಲೆಗೆ ತುತ್ತಾದಾಗ ಅವನ ಇಡೀ ಸಂಸಾರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಜೀವನವೇ ಕಷ್ಟ ಸಾಧ್ಯವಾಗುತ್ತದೆ. ಅಂತಹ ಸಂಸಾರಕ್ಕೆ ಆಸರೆಯಾಗಿ ನಿಂತು ಅವರ ಅನಾರೋಗ್ಯದ ಬಗ್ಗೆ ಒಂದು ನಿಧಿಯನ್ನು ನೀಡಿ, ಅವರ ಬಾಳನ್ನು ಹಸನಾಗಿಸಲು ಕಂಕಣಬದ್ಧವಾಗಿ […]
ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಅಮುಕ್ತ್ ವತಿಯಿಂದ ಸನ್ಮಾನ
ಕುಂದಾಪುರ (ಫೆ 06): ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘ (ರಿ.) (ಅಮುಕ್ತ್) ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಫೆಬ್ರವರಿ 05 ರ ಆದಿತ್ಯವಾರ ನಡೆಸಿದ 36 ನೆಯ ವಾರ್ಷಿಕ ಸಮ್ಮೇಳನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪುರಸ್ಕೃತರಾದ ಶ್ರೀ ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಅಮುಕ್ತ್ ನ ಪರವಾಗಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ನ ನಿರ್ದೇಶಕರಾದ ಡಾ. ಅಪ್ಪಾಜಿಗೌಡ ಸನ್ಮಾನಿಸಿ ಗೌರವಿಸಿದರು. ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನ ಕೇಂದ್ರದ […]