ಕುಂದಾಪುರ(ಮಾ .03): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಸಿ.ವಿ.ರಾಮನ್ ಕ್ಲಬ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆ ಹಾಗೂ ಪ್ರದರ್ಶನ ವನ್ನು ಆಯೋಜಿಸಲಾಗಿದ್ದು 40ಕ್ಕೂ ಅಧಿಕ ತಂಡಗಳು ಪ್ರಥಮ ಸುತ್ತಿನಲ್ಲಿ ಭಾಗವಹಿಸಿ ವಿಭಿನ್ನ ರೀತಿಯ ಮಾದರಿಯನ್ನು ತಯಾರಿಸಿ ಪ್ರದರ್ಶಿಸಿದರು. ಆಯ್ದ ಹದಿನೈದು ಮಾದರಿಗಳ ಪ್ರದರ್ಶನ ಹಾಗೂ ಕೊನೆಯ ಹಂತದ ತೀರ್ಪನ್ನು ರಾಷ್ಟ್ರೀಯ ವಿಜ್ಞಾನ ದಿನದಂದು ನಡೆಸಲಾಯಿತು. ಅತಿಥಿ ಹಾಗೂ ತೀರ್ಪು ಗಾರರಾಗಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಪ್ರಶಸ್ತಿ ವಿಜೇತ ಗಣಿತ ಪ್ರಾಧ್ಯಾಪಕರಾದ ಶ್ರೀ ಉದಯಕುಮಾರ್ ಹಾಗೂ ಭಟ್ಕಳದ ಸಿದ್ದಾರ್ಥ […]
Day: March 3, 2023
ರಾಜ್ಯಮಟ್ಟದ ಕವನ ಸ್ಪರ್ಧೆ: ನರೇಂದ್ರ ಎಸ್. ಗಂಗೊಳ್ಳಿ ಪ್ರಥಮ
Views: 96
ಗಂಗೊಳ್ಳಿ(ಮಾ.03): ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ […]