Views: 207
ಗಂಗೊಳ್ಳಿ(ಎ,24): 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಶೇ. 98.3 ಫಲಿತಾಂಶ ದಾಖಲಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 117 ವಿದ್ಯಾರ್ಥಿಗಳಲ್ಲಿ 115 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 45 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 57 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ […]










