ಗಂಗೊಳ್ಳಿ(ಜೂ,17): ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ಮೇಲ್ ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಕಲಿಕಾ ಪರಿಕರಗಳನ್ನು ಹಾಗು ಇಂಗ್ಲೀಷ್ ಭಾಷಾ ಕಲಿಕೆಯ ಪುಸ್ತಕಗಳನ್ನು ಹಂಚುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾದ ಶ್ರೀ ಭಾಸ್ಕರ್. ಹೆಚ್. ಜಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘವೇಂದ್ರ ಮತ್ತು ಎಲ್ಲಾ ಸದಸ್ಯರು, […]
Day: June 17, 2023
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಉಪನ್ಯಾಸಕ -ಪೋಷಕರ ಸಮ್ಮಿಲನ ಕಾರ್ಯಕ್ರಮ
ಗಂಗೊಳ್ಳಿ(ಜೂ,17) : ಮಕ್ಕಳ ತಪ್ಪುಗಳನ್ನು ಪ್ರೀತಿಯಿಂದಲೇ ತಿದ್ದುವ ಅಭ್ಯಾಸವನ್ನು ಪೋಷಕರು ಬೆಳೆಸಿಕೊಳ್ಳಬೇಕು. ಮಕ್ಕಳ ಜೊತೆ ನಿರಂತರವಾದ ಉತ್ತಮ ಸಂವಹನ ಮತ್ತು ಸಂಬಂಧವನ್ನು ಕಾಪಿಟ್ಟುಕೊಳ್ಳಬೇಕು ಎಂದು ಬಸ್ರೂರು ಶಾರದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು,ವಿದ್ಯಾರ್ಥಿಗಳು ಮತ್ತು ಹೆತ್ತವರ ಸಮ್ಮಿಲನ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು: ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್
ಕುಂದಾಪುರ,(ಜೂನ್ 17): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿ ಗಳಿಗೆ ಶಿಕ್ಷಣದ ಜೊತೆಗೆ ಹೂಡಿಕೆಯ ಅರಿವು ಮತ್ತು ಅದರ ಮಹತ್ವ ಅತ್ಯವಶ್ಯಕ ಎಂದು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರ: ಸಿ. ಇ. ಟಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಕುಂದಾಪುರ(ಜೂ,17): ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ 2023 ) ಫಲಿತಾಂಶವು ಗುರುವಾರ ಬಿಡುಗಡೆಯಾಗಿದ್ದು , ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇದರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳು ಸಿ.ಇ.ಟಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಸಿ.ಇ.ಟಿ 2023 ರ ಪರೀಕ್ಷೆಗೆ ಕುಳಿತ 123 ವಿದ್ಯಾರ್ಥಿಗಳ ಪೈಕಿ, ಲತೀಫಾ ರಫಾ 897 ರ್ಯಾಂಕ್ಗಳೊoದಿಗೆ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ. […]