ಕುಂದಾಪುರ(ಜು,12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕರನ್ನು ಗುರುತಿಸಿ, ಅಭಿನಂದಿಸುವ ಯೋಜನೆಯನ್ನು ರೂಪಿಸಲಾಗಿದೆ. ಕೆಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳು, ಐಎಎಸ್/ಕೆಎಎಸ್ ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆಗೈದ ಅಭ್ಯರ್ಥಿಗಳು, ಸಾಹಿತ್ಯ, ಲಲಿತಕಲೆ, ಕ್ರೀಡೆ, ಪರಿಸರ ಮೊದಲಾದ ರಂಗಗಳಲ್ಲಿ ರಾಜ್ಯ, ರಾಷ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಅಥವಾ ಬಹುಮಾನ ಪಡೆದ ಯುವ ಸಾಧಕರು-ಮೊದಲಾದವರ ನ್ನು […]
Day: July 12, 2023
ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ
ಕುಂದಾಪುರ (ಜುಲೈ 12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅಗಸ್ಟ್ 20ರ ಭಾನುವಾರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆಯ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ ಆಗಿದ್ದಾರೆಂದು ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇವರು ಕುಂದಾಪುರದ […]
ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿ: ವಾರ್ಷಿಕ ಮಹಾಸಭೆ
ಗಂಗೊಳ್ಳಿ(ಜು12) : ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿಯವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಎರಡನೇ ವರ್ಷದ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಕುಂದಾಪುರ (ಜು,10): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2023-24ನೇ ಶೈಕ್ಷಣಿಕ ವರ್ಷದವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಯು 2023ರಲ್ಲಿ ನಡೆದ ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಾಸರಿ 80% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ ಪ್ರಸ್ತುತ ಪ್ರಥಮ ವರ್ಷದ ಪದವಿಪೂರ್ವ, ಪದವಿ ತರಗತಿಯಲ್ಲಿ ಅಥವಾ ಯಾವುದೇ ವೃತ್ತಿಪರ ಶಿಕ್ಷಣ/ತರಬೇತಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ […]