ಕುಂದಾಪುರ (ಜು,29): ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಖರಗ್ಪುರ ಪಶ್ಚಿಮ ಬಂಗಾಳದ ವಿದ್ಯಾಸಂಸ್ಥೆಗೆ 2023-24 ನೇ ಸಾಲಿನ ಬಾಹ್ಯಾಕಾಶ ಸಂಶೋಧನಾ ಶಿಕ್ಷಣದ ವಿಭಾಗದ ಎಂಜಿನಿಯರಿಂಗ್ ಪದವಿ ಶಿಕ್ಷಣ ಪಡೆಯಲು ಉಡುಪಿ ಜಿಲ್ಲೆಯಿಂದ ಪ್ರಣಮ್ಯ ಜಿ.ಎಚ್. ಆಯ್ಕೆಯಾಗಿದ್ದಾರೆ. ಇವರು ತಮ್ಮ ಪದವಿ ಪೂರ್ವ ಶಿಕ್ಷಣವನ್ನು ಕುಂದಾಪುರ ವೆಂಕಟರಮಣ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ 7 ನೆ ರ್ಯಾಂಕ್ ಪಡೆದಿದ್ದಾರೆ.
Day: July 29, 2023
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ
ಹೆಮ್ಮಾಡಿ(ಜು,29): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕುಂದಾಪುರದ ಮೊಗವೀರ ಭವನದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ ಡಾ|ಆದರ್ಶ ಹೆಬ್ಬಾರ್ ರವರು […]
ರಸಾಯನಶಾಸ್ತ್ರವು ಶಿಕ್ಷಕರಿಗೆ ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ – ಶ್ರೀ ಮಾರುತಿ
ಉಡುಪಿ(ಜು,29): ರಸಾಯನಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಮಾರುತಿ ಹೇಳಿದರು. ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ನಡೆದ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋರವರು ಮಾತುಗಳನಾಡುತ್ತಾ ಉತ್ತಮ ಬೋಧನೆಯಲ್ಲಿ […]