ಕುಂದಾಪುರ(ಜು,7): ಕುಂದಾಪುರ ಎಜುಕೇಶನ್ ಸೊಸೈಟಿ ಯ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಜು .06 ರ ಗುರುವಾರದಂದು ಶಿಕ್ಷಕ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ. ಭಟ್ ಪೋಷಕರಿಗೆ ವಾರ್ಷಿಕ ಕ್ರಿಯಾ ಯೋಜನೆಯನ್ನು ಮಂಡಿಸಿದರು. ಸಹಾಯಕ ಮುಖ್ಯ ಶಿಕ್ಷಕಿ ಆರತಿ ಶೆಟ್ಟಿ ಶೈಕ್ಷಣಿಕ ವರ್ಷದ ಸಂಪೂರ್ಣ ಮಾಹಿತಿಯನ್ನು ಪೋಷಕರಿಗೆ ನೀಡಿದರು. ಶೈಕ್ಷಣಿಕ ಸಂಯೋಜಕರಾದ ವಿಲ್ಮಾ ಡಿ ಸಿಲ್ವಾರವರು ಪೂರ್ವ […]
Month: July 2023
ಐ ಎಂ ಜೆ ಐ ಎಸ್ ಸಿ ಕಾಲೇಜು ಮೂಡ್ಲಕಟ್ಟೆ :ಶಿಕ್ಷಕ-ರಕ್ಷಕ ಸಭೆ
ಕುಂದಾಪುರ ( ಜು:4): ಐ ಎಂ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆಯ “ಸಂವಾದ” ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ರವರು ಶೈಕ್ಷಣಿಕ ವರ್ಷದ ಎಲ್ಲಾ ಕಾರ್ಯಚಟುವಟಿಕೆಗಳನ್ನು ತಿಳಿಸಿ ಪೋಷಕರೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ್ ಕುಮಾರ್ ರವರು, ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ| ಅಹಮದ್ ಖಲೀಲ್ ರವರು ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕಿ ಸುಮನರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಸಿಎ ಫೈನಲ್ ಪರೀಕ್ಷೆಯಲ್ಲಿ ಸಚಿನ್ ಮೊಗವೀರ ಕಾವ್ರಾಡಿ ತೇರ್ಗಡೆ
ಕುಂದಾಪುರ (ಜು,2): ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಇವರು ಮೇ 2023ರಲ್ಲಿ ನೆಡೆಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಸಚಿನ್ ಮೊಗವೀರ ಕಾವ್ರಾಡಿ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಇವರು ಕಾವ್ರಾಡಿಯ ಮುಂಬಾರುಗುಡ್ಡಿ ನಿವಾಸಿ ಸವಿತಾ ಸಂತೋಷ ಮೊಗವೀರ ರವರ ಪುತ್ರ.
ಎಚ್. ಎಮ್. ಎಮ್ & ವಿ.ಕೆ.ಆರ್.ಆಚಾರ್ಯ ಆಂಗ್ಲ ಮಾಧ್ಯಮ ಶಾಲೆ: ಶಾಲಾ ಮಂತ್ರಿಮಂಡಲ ಉದ್ಘಾಟನೆ
ಕುಂದಾಪುರ( ಜು,5): ಮನುಷ್ಯನ ದೇಹಕ್ಕೆ ಬೆನ್ನುಮೂಳೆ ಹೇಗೆ ಆಧಾರವೋ, ಅದೇ ರೀತಿ ಸದೃಢ ಸಮಾಜ ನಿರ್ಮಾಣಕ್ಕೆ ಉತ್ತಮ ನಾಯಕತ್ವ ಅವಶ್ಯಕ. ಇಂತಹ ನಾಯಕತ್ವ ಗುಣವನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ವಿರೋಧ ಪಕ್ಷದವರು ಆಡಳಿತ ಪಕ್ಷದ ಕಾರ್ಯಕ್ಕೆ ಸೂಕ್ತ ಬೆಂಬಲ ನೀಡಿದರೆ ಶಾಲಾ ಸಂಸoತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ನಾಡಾ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪರವರು ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ: ಜು.9 ರಂದು ಎರಡನೇ ಮಹಾಸಭೆ
ಗಂಗೊಳ್ಳಿ(ಜು,5) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿಯ ಎರಡನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 9 ರ ಭಾನುವಾರದಂದು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಡಾ. ಗೋವಿಂದ ಬಾಬು ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ […]
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,5): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2022-23ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ […]
ಐ ಎಂ ಜೆ ಐ ಎಸ್ ಸಿ ಕಾಲೇಜು ಮೂಡ್ಲಕಟ್ಟೆ – ಕಾಲೇಜು ವಾರ್ಷಿಕೋತ್ಸವ
ಕುಂದಾಪುರ (ಜು,4): ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರ ಇಲ್ಲಿ ವಾರ್ಷಿಕೋತ್ಸವ ಇತ್ತೀಚೆಗೆ ಗಿ ನೆರವೇರಿತು. ಕಲಿಕೆಯು ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಲ್ಲ, ಕಲಿತದ್ದು ಬದುಕಿನುದ್ದಕ್ಕೂ ಇರಬೇಕಾಗಿದೆ. ಆದ್ದರಿಂದ ಆಳವಾದ ಅಧ್ಯಯನ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಏನೇ ಗುರಿ ಕಂಡರೂ ಅದನ್ನು ಸಾಧಿಸುವ ಗರಿಷ್ಠ ಪ್ರಯತ್ನವನ್ನು ಮಾಡಬೇಕು” ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಶ್ರೀಮತಿ ರಶ್ಮಿ ಎಸ್ಆರ್ ಹೇಳಿದರು. ಮುಖ್ಯ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಕುಂದಗನ್ನಡ ನೆಲಪರ ಆಚರಣೆ ಮತ್ತು ಸಂಸ್ಕೃತಿ-ವಿಶೇಷ ಉಪನ್ಯಾಸ
ಕುಂದಾಪುರ (ಜುಲೈ 04): ಕುಂದಾಪುರ ಭಾಷಿಕ ಮತ್ತು ಸಾಂಸ್ಕೃತಿಕವಾಗಿ ಅನನ್ಯವಾದ ಪ್ರದೇಶ. ಕೃಷಿ ಪ್ರಧಾನವಾದ ಈ ಭಾಗದಲ್ಲಿ ಕೃಷಿಯೊಂದಿಗೆ ಅನೇಕ ನೆಲಪರವಾದ ಆಚರಣೆಗಳು ಹೆಣೆದುಕೊಂಡಿದೆ’. ಆಚರಣೆಗಳು ಮರೆಯಾದಂತೆ ಭಾಷೆ, ಸಂಸ್ಕೃತಿ ತಮ್ಮ ನೆಲೆಯನ್ನು ಕಳೆದುಕೊಳ್ಳುತ್ತದೆ. ಆ ನಿಟ್ಟಿನಲ್ಲಿ ನಮ್ಮ ಪ್ರಾದೇಶಿಕ ಆಚರಣೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವುದು ತುರ್ತು ಎಂದು ಸಿದ್ದಾಪುರದ ವೈದ್ಯರಾದ ಡಾ| ಜಗದೀಶ್ ಶೆಟ್ಟಿ ಹೇಳಿದರು. ಅವರು ದಿನಾಂಕ ಜು.04 ರಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಪ್ರಸೂತಿ ತಜ್ಞ ಡಾ. ರಂಜಿತ್ ಕುಮಾರ್ ಶೆಟ್ಟಿಗೆ ಸನ್ಮಾನ
ಕುಂದಾಪುರ( ಜು, 04): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದಲ್ಲಿ ಪ್ರಸಿದ್ಧ ಪ್ರಸೂತಿ ತಜ್ಞರಾಗಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ, ಸಮಾಜದಲ್ಲಿ ವಿಶೇಷ ಜನಮನ್ನಣೆ ಪಡೆದ ಹಿರಿಯ ಪ್ರಸೂತಿ ತಜ್ಞರಾದ, ಕುಂದಾಪುರದ ಪ್ರತಿಷ್ಠಿತ ವಿನಯ ನರ್ಸಿಂಗ್ ಹೋಮ್ ನ ಆಡಳಿತ ನಿರ್ದೇಶಕರೂ ಆದ ಡಾ. ರಂಜಿತ್ ಕುಮಾರ್ ಶೆಟ್ಟಿ ಯವರನ್ನು ಜು 01 ರ ಶನಿವಾರದಂದು ಅವರ ಕುಂದಾಪುರದ ಸ್ವಗ್ರಹದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಕುಂದಾಪುರ (ಜುಲೈ 03) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಇಬ್ಬರು ಉಪಾನ್ಯಾಸಕರನ್ನು ಶ್ಲಾಘಿಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೋಡುಗೆ ಸ್ವೀಕರಿಸಿದ ಗಣಿತ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಿರುಷಾ ಆನಂದ ಶೆಟ್ಟಿ ಮತ್ತು […]