ಬಿದ್ಕಲ್ ಕಟ್ಟೆ(ಆ,31): ಇಲ್ಲಿನ ಸರ್ಕಾರಿ ಪಿ ಯು ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ,ವಾಣಿಜ್ಯಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆಯನ್ನು ಸಂಸ್ಥೆಯ ಪ್ರಾಂಶುಪಾಲ ರಾದ ಶ್ರೀ ವಿಘ್ನೇಶ್ವರ ಭಟ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಮುಂಬರುವ ಮದ್ಯವಾರ್ಷಿಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂದು ಮಾರ್ಗದರ್ಶನ ಮಾಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಶೇಕಡಾ 100%ರಷ್ಟು […]
Day: August 31, 2023
ಸಂಕದಹೊಳೆ ನವಶಕ್ತಿ ಜ್ಞಾನ ವಿಕಾಸ ಕೇಂದ್ರ: ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ
ಕುಂದಾಪುರ(ಆ,29): ಸಂಕದ ಹೊಳೆ ಯುವಕ ಸಂಘದ ಸಭಾಂಗಣದಲ್ಲಿ ವರ ಮಹಾಲಕ್ಷ್ಮೀ ಪೂಜೆಯನ್ನು ಆಗಸ್ಟ್ 29 ರಂದು ಆಯೋಜಿಸಲಾಯಿತು. ಆಪ್ರಯುಕ್ತ ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ತೀರ್ಥಹಳ್ಳಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮಂಜುನಾಥ್ ಮೃಗವಧೆ ಯವರು ಆಗಮಿಸಿ ಧಾರ್ಮಿಕತೆಯ ಬಗ್ಗೆ ಮಾಹಿತಿ ನೀಡಿದರು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನವಶಕ್ತಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ವನಜಾಕ್ಷಿಯವರು ಧಾರ್ಮಿಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆರಟೂರು ಗ್ರಾಮ ಪಂಚಾಯತ್ ಅಧ್ಯಕ್ಷೆ […]
ಗಂಗೊಳ್ಳಿ :ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜಿನ ವಿದ್ಯಾರ್ಥಿ ಅಬ್ದುಲ್ ರಾಜಿಕ್ ರಾಜ್ಯಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಆ,31): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಬ್ದುಲ್ ರಾಜಿಕ್ ಎಪ್ಪತ್ತು ಕೆ.ಜಿ ಕೆಳಗಿನ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಿಂದ ಆಯ್ಕೆ ಆಗಿರುತ್ತಾರೆ . ಸರಸ್ವತಿ […]