ಕಾರ್ಕಳ(ಸೆ,6): ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ […]
Day: September 6, 2023
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ,06) : ಶ್ರೀ ಬಿ.ಎಂ.ಸುಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ಪುಷ್ಪಾರ್ಚನೆಗೈದು ಆರತಿ ಬೆಳಗಿ ವಂದಿಸಿದರು. ಮಕ್ಕಳ ನೃತ್ಯ ಮತ್ತು ಅಭಿನಯ ಕಾರ್ಯಕ್ರಮದ ಮೆರುಗನ್ನು ಇಮ್ಮಡಿಗೊಳಿಸಿತು. ನಂತರ ಬೋಧಕೇತರ ಸಿಬ್ಬಂದಿಗಳಿಂದ ಶಿಕ್ಷಕರಿಗಾಗಿ ಅನೇಕ ಕ್ರೀಡೆಗಳೂ ಕೂಡ ಏರ್ಪಟ್ಟವು. ಹಾಗೆಯೇ ಜಿಲ್ಲಾ ಮಟ್ಟದ ಗೀತಗಾಯನ […]
ಚೆಸ್ – ಎಚ್.ಎಮ್.ಎಮ್.ವಿ.ಕೆ.ಆರ್ ನ ಶ್ರೀನಿತ್ ಶೇಟ್ ಪ್ರಥಮ
ಕುಂದಾಪುರ (02.09.2023): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್, ಶ್ರೀ ನಾರಾಯಣ ಗುರು ಚೆಸ್ ಸ್ಕೂಲ್, ಉಡುಪಿ ಯಲ್ಲಿ ಆಯೋಜಿಸಲ್ಪಟ್ಟ ಏಳರ ವಯೋಮಿತಿಯ ರಾಪಿಡ್ ಚೆಸ್ ಟೂರ್ನಮೆಂಟ್ 2023 ರಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಿಜೇತನಾಗಿರುತ್ತಾನೆ. ಈತ ಕುಂದಾಪುರದ ಗ್ರಾಫಿಕ್ ಡಿಸೈನರ್ ಆಗಿರುವ ಶ್ರೀಕಾಂತ್ ಶೇಟ್ ಮತ್ತು ಸ್ವಪ್ನ ಪ್ರಿಯ ದಂಪತಿಯ ಪುತ್ರ. ವಿಜೇತ ಶ್ರೀನಿತ್ […]
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ,06): ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ .09 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ . ಈ ಕುರಿತು ಕಾರ್ಯಕ್ರಮದ ಸಂಯೋಜಕರಾದ ಶ್ರೀ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಯುವ ಬಂಟರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ
ಕುಂದಾಪುರ(ಸೆ, 5): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಎಚ್. ಲಕ್ಷ್ಮೀನಾರಾಯಣ ಶೆಟ್ಟಿಯವರನ್ನು ಕಾಳಾವರದ ಸ್ವಗ್ರಹದಲ್ಲಿ ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಶ್ರೀ ಹುಂತ್ರಿಕೆ ಸುಧಾಕರ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. ಬಿ .ಬಿ ಹೆಗ್ಡೆ ಕಾಲೇಜಿನ ಕನ್ನಡ […]