ಗಂಗೊಳ್ಳಿ(ಸೆ,14): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನಿಧಿ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಕಬಡ್ಡಿ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಉಮೇಶ್ ಕರಣಿಕ್ ಮತ್ತು ಸುಮನ ದಂಪತಿಯ ಪುತ್ರಿ .
Day: September 14, 2023
ಶ್ರೇಯಾ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ( ಸೆ,14): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಮೇಸ್ತ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ತ್ರೋಬಾಲ್ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ನಾಗರಾಜ ಮೇಸ್ತ ಮತ್ತು ನಯನ ದಂಪತಿಯ ಪುತ್ರಿ.
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.14): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಬಿಸಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 11ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ವಿಭಾಗದ ಪ್ರಾಧ್ಯಾಪಕರು […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಎನ್.ಎಸ್.ಎಸ್. ಘಟಕ : ಸ್ವಚ್ಛ ಸಂಗಮ್ -ಸ್ವಚ್ಛತಾ ಕಾರ್ಯ
ಕುಂದಾಪುರ (ಸೆ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಯೋಜನೆಯಡಿಯಲ್ಲಿ ಸ್ವಚ್ಛ ಸಂಗಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜು ಸಮೀಪದ ಆನಗಳ್ಳಿ – ರಸ್ತೆ ದುರಸ್ತೆ, ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ […]
ಸಂವಿಧಾನ ಓದು – ಒಂದು ಚಿಂತನೆ
ಪ್ರಜಾಪ್ರಭುತ್ವವನ್ನು ಬಲಪಡಿಸಿ ಅದರ ಮೌಲ್ಯ ಮತ್ತು ತತ್ವಗಳನ್ನು ಎತ್ತಿಹಿಡಿಯಲು ವಿಶ್ವಸಂಸ್ಥೆಯ ಸಾಮಾನ್ಯಸಭೆಯು 2007 ರಲ್ಲಿ ಸೆಪ್ಟಂಬರ್ 15 ಅನ್ನು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಎಂದು ಅಂಗೀಕರಿಸಿದೆ. ಹಾಗಾಗಿ ನಮ್ಮ ಕರ್ನಾಟಕ ಸರ್ಕಾರವು ವಿಧಾನಸೌಧದಲ್ಲಿ ಸೆಪ್ಟಂಬರ್ 15 ರಂದು 10 ಲಕ್ಷ ಮಕ್ಕಳೊಂದಿಗೆ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದೆ. 2023 ರ ಜೂನ್ 30 ರಂದು ಕರ್ನಾಟಕ ಸರ್ಕಾರವು ಶಾಲಾ-ಕಾಲೇಜು ಅಸೆಂಬ್ಲಿಗಳಲ್ಲಿ ಈ ಸಂವಿಧಾನ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಕುಂದಾಪುರ: ಹೂಡಿಕೆದಾರರ ಅರಿವು ಕಾರ್ಯಾಗಾರ
ಕುಂದಾಪುರ, (ಸೆ. 13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ದ್ವಿತೀಯ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಹೂಡಿಕೆದಾರರ ಅರಿವು ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಜ್ಞಾನಾರ್ಜನೆಗೆ ಬಳಸಿಕೊಂಡ ಬಂಡವಾಳ ಭವಿಷ್ಯದ ದಾರಿದೀಪ ಎಂದು ವಿದ್ಯಾರ್ಥಿಗಳಿಗೆ ಹೂಡಿಕೆ ಬಗ್ಗೆ ಅರಿವು ಮೂಡಿಸಿದರು. […]
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಕುಂದಾಪುರ(ಸೆ.14): ತಮ್ಮ ಒಳಗಡೆ ಎಷ್ಟೇ ನೋವುಗಳಿದ್ದರೂ ಅದನ್ನು ತೋರಿಸಿಕೊಳ್ಳದೆ ಸದಾ ಜನರಲ್ಲಿ ನಗು ತುಂಬುವ ಛಾಯಾಚಿತ್ರಗ್ರಾಹಕರು ನಿಜವಾದ ಬದುಕಿನ ಸಾರ್ಥಕತೆಯ ಸಂದೇಶವನ್ನು ಜಗತ್ತಿಗೆ ತಿಳಿಸುವಂಥವರು. ಈ ಸ್ಪರ್ಧಾತ್ಮಕ ಯುಗದಲ್ಲಿಯೂ ಪರಿಣತಿ ಮತ್ತು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಗ್ರಾಹಕರ ಮನ ಗೆಲ್ಲುವ ಮೂಲಕ ಅಡೆತಡೆಗಳನ್ನು ಮೀರಿ ಬೆಳೆದು ನಿಲ್ಲುವ ಸಾಮರ್ಥ್ಯವನ್ನು ತೋರಿರುವ ಛಾಯಾಗ್ರಾಹಕರ ನಡೆ ಅಭಿನಂದನೀಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ […]