ಕುಂದಾಪುರ(ಸೆ,17): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 1864 ವಿದ್ಯಾರ್ಥಿಗಳು ಮತ್ತು ಉಪಪ್ರಾಂಶುಪಾಲರಾದ ಶ್ರೀ ಕಿರಣ ಹೆಗ್ಡೆ, ಉಪನ್ಯಾಸಕರು, ಅಧ್ಯಾಪಕರು ಭಾಗವಹಿಸಿದರು. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಉಪನ್ಯಾಸಕರಾದ ಶ್ರೀ ಉದಯ ಕುಮಾರ ಶೆಟ್ಟಿ ಬೋಧಿಸಿದರು.
Day: September 17, 2023
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ
ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು. ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ […]
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ಪೀಠಿಕೆ ಓದು
ಗಂಗೊಳ್ಳಿ(ಸೆ.15): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ನಿಶಾ ಬಿ ಪೂಜಾರಿ ಪೀಠಿಕೆಯನ್ನು ವಾಚಿಸಿದರು. ಪ್ರಾಂಶುಪಾಲರು ಮುಖ್ಯೋಪಾ ದ್ಯಾಯರು ಉಪನ್ಯಾಸಕರು ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಕುಂದಾಪುರ ತಾಲೂಕು ಯುವ ಬಂಟರ ಸಂಘ:ಇಂಜಿನಿಯರ್ಸ್ ಡೇ ಆಚರಣೆ
ಕುಂದಾಪುರ(ಸೆ,15): ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಮೆಸ್ಕಾಂ ಇಂಜಿನಿಯರ್ ಶ್ರೀ ಭರತ್ ರಾಜ್ ಶೆಟ್ಟಿ ಜಾಂಬೂರು ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಚರಿಸಿದರು. ಸನ್ಮಾನ ಸ್ವೀಕರಿಸಿದ ಭರತ್ ರಾಜ್ ಶೆಟ್ಟಿ ರಾಷ್ಟ್ರೀಯ ಅಭಿಯಂತರರ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ಮಾತನಾಡಿ, ಇಂದು […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಂವಿಧಾನದ ಪ್ರಸ್ತಾವನೆ ಓದು ಕಾರ್ಯಕ್ರಮ
ಕುಂದಾಪುರ(ಸೆ.15): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಭಾರತ ಸಂವಿಧಾನದ ಪ್ರಸ್ತಾವನೆಯ ಓದು ಕಾರ್ಯಕ್ರಮವನ್ನು ಡಾ|ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್ 15ರಂದು ಆಚರಿಸಲಾಯಿತು. ಕಾಲೇಜಿನ ಸರ್ವಬೋಧಕ -ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದುವುದರ ಮುಖಾಂತರ ಪ್ರತಿಜ್ಞೆಗೈದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಕೆ. ಚೇತನ್ ಶೆಟ್ಟಿ ಉಪಸ್ಥಿತರಿದ್ದರು.