ಉಡುಪಿ (ಸೆ,28): 2006 ರ ಏಪ್ರಿಲ್ 01 ರ ಪೂರ್ವದಲ್ಲಿ ಹಾಗೂ ನಂತರ ಸೇವೆಗೆ ಸೇರಿ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನೂತನ ಪಿಂಚಣಿ ಯೋಜನೆ ಅಥವಾ ನಿಶ್ಚಿತ ಪಿಂಚಣಿ ಯೋಜನೆ ಎನ್ನುವ ಯಾವುದೇ ಸೌಲಭ್ಯ ಇರುವುದಿಲ್ಲ. ಈ ವ್ಯವಸ್ಥೆಯಿಂದ ಈಗಾಗಲೇ 25 ರಿಂದ 30 ವರ್ಷಗಳವರೆಗೆ ಸೇವೆ ಸಲ್ಲಿಸಿದ ನೌಕರರು ವಯೋನಿವೃತ್ತಿ ಸಮಯದಲ್ಲಿ ಬರಿಗೈಯಲ್ಲಿ ಮನೆಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿವೃತ್ತಿ ಹೊಂದಿದ ಅನೇಕ ನೌಕರರು ಮಾನಸಿಕ ತೊಂದರೆಗೆ ಒಳಗಾಗಿ […]
Day: September 28, 2023
ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ರಾಯಬಾರಿಗಳಾಗಬೇಕು: ಕೆ.ಸಿ. ರಾಜೇಶ್
ಕುಂದಾಪುರ (ಸೆ.23): ವಿದ್ಯಾರ್ಥಿಗಳು ಜೀವನ ಮೌಲ್ಯ, ಸಂಸ್ಕಾರ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಳ್ಳುವಂತಾಗಬೇಕು. ಇದರಿಂದ ಶಿಕ್ಷಣ ಸಂಸ್ಥೆಗಳು ಕಲಿಸಿದ ವಿದ್ಯೆಗೆ ಸಾರ್ಥಕತೆ ದೊರೆಯುತ್ತದೆ. ಆ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯೊoದರ ರಾಯಬಾರಿಗಳಾಗಬೇಕು ಎಂದು ಕಾಲೇಜು ಗವನಿಂಗ್ ಕೌನ್ಸಿಲ್ ಸದಸ್ಯ, ಪತ್ರಕರ್ತ ಶ್ರೀ ಕೆ.ಸಿ. ರಾಜೇಶ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಫ್ರೇಶ್ […]
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನಿಯಾಗಿ ಮೂಡಿಬಂದು ಅವಳಿ ಪ್ರಶಸ್ತಿಯನ್ನು ಗೆದ್ದುಕೊಂದಿದೆ. […]
ಡಾ| ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ : ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಕುಂದಾಪುರ (ಸೆ.24): ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸಲು ಎನ್.ಎಸ್.ಎಸ್. ಸಹಕಾರಿ. ವಿದ್ಯಾರ್ಥಿ ದೆಸೆಯಲ್ಲಿ ಸಕ್ರಿಯವಾಗಿ ಇಂತಹ ಸೇವಾ ಘಟಕಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಬದಲಾವಣೆ ಆಗುವುದರ ಜೊತೆಗೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಕಿರಣ್ ಹೇಳಿದರು. ಅವರ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ […]
ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ದ್ವಿತೀಯ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ವೀರೇಶ್, ಚರಣ್, ನಾಗರಾಜ್, ಆದಿತ್ಯ, ಶಮಿತ್, ಯುವರಾಜ್, ರಿತೇಶ್, ನವೀನ್ ಶರಣ್ ಮತ್ತು […]
ಎಂಐಟಿ ಕುಂದಾಪುರ: ವಿಶೇಷ ಸಂವಾದ ಕಾರ್ಯಕ್ರಮ
ಕುಂದಾಪುರ(ಸೆ,28): ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24 ರ ಅಂಗವಾಗಿ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ನ ಪ್ರಧಾನ ತಂತ್ರಜ್ಞಾನ ಮಾರ್ಗದರ್ಶಕ ಶ್ರೀ ಶ್ರೀಪಾದ ಹೆಬ್ಬಾರ್ ಅವರಿಂದ ಕಾರ್ಪೊರೇಟ್ ಜಗತ್ತಿನಲ್ಲಿ ತಂತ್ರಜ್ಞಾನವನ್ನು ನಿಯಂತ್ರಿಸುವುದು- ಪ್ರವೃತ್ತಿಗಳು, ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಯಿತು. ಕಾರ್ಪೊರೇಟ್ ದೈತ್ಯರ ಉದಾಹರಣೆಗಳನ್ನು ಉಲ್ಲೇಖಿಸಿ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ಶ್ರೀ ಶ್ರೀಪಾದ ಹೆಬ್ಬಾರ್ ಸಲಹೆ ನೀಡಿದರು. ವಿಷಯಗಳ ಮೂಲಭೂತ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಮೂಲ ಲೇಖಕರು […]
ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಹೆಮ್ಮಾಡಿ;(ಸೆ,28): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ರಾಜ್ಯ […]
ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿ .ಯು ಕಾಲೇಜಿನ ಕೇದಾರ್ ಮರವಂತೆ ದ್ವಿತೀಯ ಸ್ಥಾನ
ಹೆಮ್ಮಾಡಿ(ಸೆ,28): ಶ್ರೀ ಶಾರದಾ ಪದವಿಪೂರ್ವ ಕಾಲೇಜು ಬಸ್ರೂರು ಇವರು ಆಯೋಜಿಸಿದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜೆಸಿಐ ಕುಂದಾಪುರ: ವಿವಿಧ ಸಂಘ -ಸಂಸ್ಥೆಗಳ ಆಶ್ರಯದಲ್ಲಿ ಆರೋಗ್ಯ ಶಿಬಿರ
ಕುಂದಾಪುರ.(ಸೆ,26): ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಆರೋಗ್ಯ ಮತ್ತು ಯೋಗ ಕ್ಷೇಮ ಕೇಂದ್ರ ಒಡೆಯರ್ ಹೋಬಳಿ.ಜೆ ಸಿಐ ಕುಂದಾಪುರ,ವಿಘ್ನೇಶ್ವರ ಯುವಕ ಮಂಡಲ ಒಡೆಯರ್ ಹೋಬಳಿ, ಪ್ರಸಾದ್ ನೇತ್ರಾಲಯ ಉಡುಪಿ ಸಂಯುಕ್ತ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ಮಾಹಿತಿ, ಆಯುಷ್ಮಾನ್ ಭವ ಕಾರ್ಡ್ ಮಾಹಿತಿ ಹಾಗೂ ಬೃಹತ್ ನೇತ್ರ ತಪಾಸಣಾ ಶಿಬಿರ ಸೆಪ್ಟೆಂಬರ್ ,26 ಕುಂದಾಪುರದ ಆಶೀರ್ವಾದ ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು ಈ ಶಿಬಿರದಲ್ಲಿ ನೇತೃ ತಪಾಷಣೆ ಹಾಗೂ ಬಿಪಿ,ಶುಗರ್ ತಪಾಸಣೆ […]