ಕುಂದಾಪುರ (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತುವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಬಹಳ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯೋತ್ಸವವನ್ನುಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ತಾಯಿಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸಂಜಿತ್ ಹೆಗ್ಡೆ ದಿನದಮಹತ್ವವನ್ನು ತಿಳಿಸಿದರು. ಶಿಕ್ಷಕ ರವಿಚಂದ್ರರವರ ಕನ್ನಡ ಹಿರಿಮೆಯನ್ನು ಬಿತ್ತರಿಸುವ […]
Day: November 3, 2023
ಗಂಗೊಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ
ಗಂಗೊಳ್ಳಿ( ನ.02): ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, […]
ಡಾ|ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ (ನ.01): ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಿರಿದಾದುದ್ದು. ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕಾಲಘಟ್ಟದ ಸಾಹಿತ್ಯದ ಸೃಜನಶೀಲ ಓದು ಕರ್ನಾಟಕದ ಭವ್ಯತೆಯನ್ನು ಪರಿಚಯಿಸುತ್ತದೆ ಎಂದು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇದರ ಅಧ್ಯಕ್ಷರಾದ ಡಾ| ಸದಾನಂದ ಬೈಂದೂರು ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ‘ದಾಂಡಿಯಾ’ ಸಂಭ್ರಮ
ಕುoದಾಪುರ (ನ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಕಲಾ ಸಂಘ ಮತ್ತು ಯೋಗ ಶಿಕ್ಷಣದ ಆಶ್ರಯದಲ್ಲಿ ನವರಾತ್ರಿಯ ವಿಶೇಷ ಆಚರಣೆಯಾದ ‘ದಾಂಡಿಯಾ’ವನ್ನು ಆಯೋಜಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ದಾಂಡಿಯಾ ನೃತ್ಯ ಪ್ರಸ್ತುತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಲಲಿತಕಲಾ ಸಂಘದ ಸಂಯೋಜಕರಾದ ಶ್ರೀಮತಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: “ಸಂಗಮ” – ಸಿಬ್ಬಂದಿ ಕ್ರೀಡಾಕೂಟ
ಕುಂದಾಪುರ (ನ.01): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಸಂಘ ಆಯೋಜಿಸಿದ ಸಿಬ್ಬಂದಿಗಳ ಕ್ರೀಡಾಕೂಟ ‘ಸಂಗಮ – 2023’ಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಚಾಲನೆ ನೀಡಿ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಿಬ್ಬಂದಿ ಸಂಘದ ಕಾರ್ಯದರ್ಶಿ ಶ್ರೀ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಪುರುಷರಿಗೆ ವಾಲಿಬಾಲ್, ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಗುಂಡು ಎಸೆತ […]
ಕುಂದಾಪುರ ತಾಲೂಕು ಯುವ ಬಂಟರ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ( ನ.03): ಕುಂದಾಪುರ ತಾಲೂಕು ಯುವ ಬಂಟರ ಸಂಘವು ಪ್ರಸ್ತುತ ವರ್ಷದಲ್ಲಿ ದಶಮ ಸಂಭ್ರಮವನ್ನು ಆಚರಿಸುತ್ತಿದ್ದು 2023ನೇ ವರ್ಷದ ಉಡುಪಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದಿದೆ. ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ನವಂಬರ್ 1 ರಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಶ್ರೀಮತಿ ಲಕ್ಷ್ಮೀ […]
ಈಜು ಸ್ಪರ್ಧೆಯಲ್ಲಿ ಸತತ ಐದನೆಯ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ನಾಗರಾಜ ಖಾರ್ವಿ
ಕುಂದಾಪುರ( ನ.03) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ 200 ಮೀ. ಬ್ರೆಸ್ಟ್ ಸ್ಟ್ರೋಕ್-ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್-ಬೆಳ್ಳಿ ಪದಕ, 50 ಮೀ. ಬ್ರೆಸ್ಟ್ ಸ್ಟ್ರೋಕ್- ಬೆಳ್ಳಿ ಪದಕ, 4X100 […]