ಕುಂದಾಪುರ(ಆ,29): ಸಂಕದ ಹೊಳೆ ಯುವಕ ಸಂಘದ ಸಭಾಂಗಣದಲ್ಲಿ ವರ ಮಹಾಲಕ್ಷ್ಮೀ ಪೂಜೆಯನ್ನು ಆಗಸ್ಟ್ 29 ರಂದು ಆಯೋಜಿಸಲಾಯಿತು. ಆಪ್ರಯುಕ್ತ ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ತೀರ್ಥಹಳ್ಳಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮಂಜುನಾಥ್ ಮೃಗವಧೆ ಯವರು ಆಗಮಿಸಿ ಧಾರ್ಮಿಕತೆಯ ಬಗ್ಗೆ ಮಾಹಿತಿ ನೀಡಿದರು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನವಶಕ್ತಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ವನಜಾಕ್ಷಿಯವರು ಧಾರ್ಮಿಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆರಟೂರು ಗ್ರಾಮ ಪಂಚಾಯತ್ ಅಧ್ಯಕ್ಷೆ […]
Year: 2023
ಗಂಗೊಳ್ಳಿ :ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜಿನ ವಿದ್ಯಾರ್ಥಿ ಅಬ್ದುಲ್ ರಾಜಿಕ್ ರಾಜ್ಯಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಆ,31): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಬ್ದುಲ್ ರಾಜಿಕ್ ಎಪ್ಪತ್ತು ಕೆ.ಜಿ ಕೆಳಗಿನ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಿಂದ ಆಯ್ಕೆ ಆಗಿರುತ್ತಾರೆ . ಸರಸ್ವತಿ […]
ಉಡುಪಿ ಜಿಲ್ಲಾ ಕರಾಟೆ ಚಾಂಪಿಯನ್ ಶಿಪ್ :ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆ ಉತ್ತಮ ಸಾಧನೆ
ಕುಂದಾಪುರ (ಆ,30): ಉಡುಪಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಇವರು ಆಯೋಜಿಸಿದ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ (AKSKA) ಮತ್ತು ಕರಾಟೆ ಇಂಡಿಯಾ ಆರ್ಗನೈಸೇಷನ್(KIO) ಇವರ ಸಂಯೋಜನೆಯಲ್ಲಿ ಆಗಸ್ಟ್ 27ರಂದು ಪರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕರಾಟೆ ಪಟುಗಳು 11 ಚಿನ್ನದ ಪದಕ, 9 ಬೆಳ್ಳಿಯ ಪದಕ ಮತ್ತು 4 ಕಂಚಿನ ಪದಕವನ್ನು ಗೆಲ್ಲುವ ಮುಖಾಂತರ ಸಂಸ್ಥೆಗೆ ಬಹುದೊಡ್ಡ ಕೊಡುಗೆಯನ್ನು […]
ಕೋಟೇಶ್ವರದ ಉದ್ಯಮಿ ಪ್ರಕಾಶ್ ಮೊಗವೀರ ರವರಿಗೆ ಸೇವಾ ಸಮ್ಮಾನ್ ಪ್ರಶಸ್ತಿ ಪುರಸ್ಕಾರ
ಕುಂದಾಪುರ(ಆ,26): ಮಹಾರಾಷ್ಟ್ರದ ಸಾಂಗ್ಲಿ ಫಾಟಾ ಶಿರೋಲಿ ಕೊಲ್ಲಾಪುರ ದಲ್ಲಿರುವ PM’s Kitchen Udupi ಹೋಟೆಲ್ಸ್ ನ ಮಾಲಕರಾದ ಪ್ರಕಾಶ್ ಮೊಗವೀರ ಕೋಟೇಶ್ವರ (ಮೇಪು) ರವರಿಗೆ ಮಹಾರಾಷ್ಟ್ರ ಸೈನಿಕ ಪಡೆ, ಮಹಾರಾಷ್ಟ್ರ ರಾಜ್ಯ ಪಾರುಗಾಣಿಕಾ ತಿಮಚಯಾವತಿ (ಕಾರ್ಯಾಚರಣೆಯ ಪಡೆ ಮಹಾರಾಷ್ಟ್ರ) ವತಿಯಿಂದ ಸೇವಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಪ್ರಶಸ್ತಿಯನ್ನ ಕೊಲ್ಲಾಪುರದ ಪೊಲೀಸ್ ಅಧೀಕ್ಷಕಿ ಜಯಶ್ರೀ ದೇಸಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧಿಕಾರಿ ವರ್ಗದವರು ಮತ್ತು ಕರಾವಳಿ […]
ಗೀತಗಾಯನ ಸ್ಪರ್ಧೆ : ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,26): ಇಲ್ಲಿನ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಆಶ್ರಯದಲ್ಲಿ ಕುಂದಾಪುರದ ವ್ಯಾಸರಾಯ ಸಭಾ ಭವನದಲ್ಲಿ ಹಮ್ಮಿಕೊಂಡ ಗೀತಗಾಯನ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ಸಂಸ್ಥೆಯ ಬುಲ್ ಬುಲ್ ತಂಡದ ವಿದ್ಯಾರ್ಥಿಗಳಾದ ರಿನೊಲಾ, ಸಂಹಿತಾ, ಪ್ರಕೃತಿ, ಸಿಂಚನಾ ಮತ್ತು ಗೋಪಿಕಾ, ಸ್ಕೌಟ್ ತಂಡದ ವಿದ್ಯಾರ್ಥಿಗಳಾದ ಕೌಸ್ತುಭ, ಶ್ರವಣ್, ಕೌಶಿಕ್, ಅರುಶ್, ಸಾತ್ವಿಕ್, ನಿರಂಜನ್ ಉಡುಪ, ತ್ರಿಶೂಲ್ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು:ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ – 2023 ಉದ್ಘಾಟನೆ
ಕುಂದಾಪುರ (ಆ, 22): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ’ವನ್ನು ಆಯೋಜಿಸಲಾಯಿತು. ಕಾರ್ಕಳದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ಕೆ. ರಾಜೇಂದ್ರ ಭಟ್ ಉದ್ಘಾಟಿಸಿ ವಿದ್ಯಾರ್ಥಿ ಬದುಕು ಹಸನಾಗಬೇಕಾದರೆ ನಿರ್ದಿಷ್ಟ ಗುರಿ, ಶ್ರದ್ಧೆ, ಸತತ ಪ್ರಯತ್ನ ಅಗತ್ಯ, ಆ ಮೂಲಕ ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ(ಆ,26): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು ಎಂಟು ವರ್ಷಗಳಿಂದ ಆಂಗ್ಲಭಾಷಾ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ್ದ ಶ್ರೀಮತಿ ಮೇರಿ ಅಶ್ವಿನಿ ವಿ ಅವರ ಸ್ವಂತ ಊರು ಮೈಸೂರಿಗೆ ವರ್ಗಾವಣೆ ಹೊಂದಿದ್ದು, ಆ ಪ್ರಯುಕ್ತ ಅವರಿಗೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ ಜಿ ಅಧ್ಯಕ್ಷತೆ ವಹಿಸಿ ಶ್ರೀಮತಿ ಮೇರಿ ಅಶ್ವಿನಿ ವಿ ರವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ […]
ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ.ಶಾಲೆ ಖಾರ್ವಿಕೇರಿ ಗಂಗೊಳ್ಳಿ: ಬಿಳ್ಕೋಡುಗೆ ಸಮಾರಂಭ
ಗಂಗೊಳ್ಳಿ( ಆ,26): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ. ಶಾಲೆ ಖಾರ್ವಿಕೇರಿ ಯಲ್ಲಿ 7 ವರ್ಷಗಳ ಕಾಲ ತಮ್ಮ ಸೇವೆಯನ್ನು ಸಲ್ಲಿಸಿ ಇತ್ತೀಚಿಗಷ್ಟೆ ಸ.ಹಿ.ಪ್ರಾ.ಶಾಲೆ ಕುಂಭಾಶಿಗೆ ವರ್ಗಾವಣೆಗೊಂಡ ಶಿಕ್ಷಕಿ ಶ್ರೀಮತಿ ಸರಿತಾ ಕೆ.ಎಸ್. ರವರಿಗೆ ಬಿಳ್ಕೋಡುಗೆ ಸಮಾರಂಭ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಖಾರ್ವಿ, ಶ್ರೀಮತಿ ಸರಿತಾ, ಶಿಕ್ಷಣ ಸಂಯೋಜಕರಾದ ಶೇಖರ್ ಯು. […]
ಕ್ರಿಯೇಟಿವ್ ಪಿ.ಯು ಕಾಲೇಜು ಕಾರ್ಕಳ : ಕೆಸರ್ಡೊಂಜಿ ದಿನ-ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ
ಕಾರ್ಕಳ(ಆ,26): ಇಲ್ಲಿನ ಹಿರ್ಗಾನ ಗ್ರಾಮದಲ್ಲಿರುವ ಬೆಂಗಾಲ್ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ಇತ್ತೀಚೆಗೆ ನಡೆಯಿತು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿಯವರು ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ ಆದರೆ ಹೊಟ್ಟೆ […]
ಕನ್ನಡ ಭಾಷಣ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಕುಂದಾಪುರ (ಆ,26): ಬಿ. ಎಮ್ . ಆರ್ ಬಿಲ್ಡ್ ರ್ಸ್ & ಡೆವೆಲೋಪೆರ್ಸ್ ಮಂಗಳೂರು ಇವರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ನನ್ನ ಕಲ್ಪನೆಯ ಭಾರತ” ಈ ವಿಷಯದ ಕುರಿತಾಗಿ ಆಯೋಜಿಸಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶ್ರುತಿಕಾ ಉಭಯ ಜಿಲ್ಲೆಗೆ ದ್ವಿತೀಯ*ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ […]