ಕುಂದಾಪುರ(ಆ,11): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜೆ.ಸಿ.ಐ ಕುಂದಾಪುರ ಸಿ ಟಿ ಯ ವತಿಯಿಂದ ‘ ನ್ಯಾಷನಲ್ ಲೆವೆಲ್ ಟ್ಯಾಲೆಂಟ್ ಸರ್ಚ್ ‘ ಯೋಜನೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪರೀಕ್ಷಾ ಕಾರ್ಯಕ್ರಮ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿ, ಜೆಸಿ.ಐ ಕುಂದಾಪುರ ಸಿಟಿ ಯ ಅಧ್ಯಕ್ಷರಾದ ಜೆಸಿ ಡಾ. ಸೋನಿ ಡಿಕೊಸ್ಟಾ, ಸ್ಥಾಪಕ ಅಧ್ಯಕ್ಷರಾದ ಜೆಸಿ ಹುಸೇನ್ ಹೈಕಾಡಿ, ಜೆಸಿ […]
Year: 2023
ಆ.20 ರಂದು ಯುವ ಲೇಖಕ ಶ್ರೀರಾಜ್ ವಕ್ವಾಡಿಯವರ ಅತ್ತ ನಕ್ಷತ್ರ ನೀಳ್ಗತೆ ಪುಸ್ತಕ ಬಿಡುಗಡೆ
ಕುಂದಾಪುರ(ಆ,11): : ಜನಪ್ರತಿನಿಧಿ ಪ್ರಕಾಶನ ಪ್ರಕಟಿಸುವ ಕವಿ, ಲೇಖಕ ಕಾವ್ಯ ಬೈರಾಗಿ (ಶ್ರೀರಾಜ್ ವಕ್ವಾಡಿ) ಅವರ ಐದನೇ ಕೃತಿ ʼಅತ್ತ ನಕ್ಷತ್ರʼ ನೀಳ್ಗತೆ ಪುಸ್ತಕ ಬಿಡುಗಡೆ ಸಮಾರಂಭ ಆಗಸ್ಟ್ 20, ಆದಿತ್ಯವಾರ ಮಧ್ಯಾಹ್ನ 02:30ಕ್ಕೆ ಜನಪ್ರತಿನಿಧಿ ಕುಂದಾಪುರದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆ ಮಾಡಲಿದ್ದಾರೆ. ಕವಿ, ಸಾಹಿತಿ ರಾಜ್ ಆಚಾರ್ಯ ಪುಣೆ, ಪ್ರಕಾಶಕರಾದ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿ(ಆ,11):ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಹೆಚ್ಚು ಕ್ರಿಯಾಶೀಲವಾಗಿಡುವಲ್ಲಿ ಸಹಕಾರ ನೀಡುತ್ತವೆ. ಉತ್ತಮ ಬದುಕಿಗೆ ಬೇಕಾದ ಆತ್ಮವಿಶ್ವಾಸವನ್ನು ನೀಡುತ್ತವೆ ಎಂದು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಎಂ ನಾಗೇಂದ್ರ ಪೈ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ವೈಶಾಲಿ ಜಿ […]
ಕುಂದಾಪುರ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಚ್.ಎಮ್.ಎಮ್ ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ(ಆ,11): ಶ್ರೀ ಬಿ. ಎಮ್ ಸುಕುಮಾರ ಶೆಟ್ಟಿ ಯವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ, ಉಡುಪಿ ಇವರ ವತಿಯಿಂದ ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 08 ರಂದು ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಕುಂದಾಪುರ (ಆ, 08): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಪ್ರಾಧ್ಯಾಪಕರನ್ನು ಶ್ಲಾಘಿಸಿದರು. ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೊಡುಗೆ ಸ್ವೀಕರಿಸಿದ ವಾಣಿಜ್ಯ ಪ್ರಾಧ್ಯಾಪಕಿಯರಾದ ಸುಶ್ಮಿತಾ ಸಾಲಿಗ್ರಾಮ, ಶ್ರೀಮತಿ ಅರ್ಪಣಾ ಶೆಟ್ಟಿ, ಗಣಿತಶಾಸ್ತ್ರ ಪ್ರಾಧ್ಯಾಪಕಿ […]
ಕಾರ್ಕಳ:ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಕಂಪೆನಿ ಸೆಕ್ರಟರಿ( ಸಿ.ಎಸ್) ಪರೀಕ್ಷೆಯಲ್ಲಿ ಉತ್ತಮ ಸಾಧನೆ
ಕಾರ್ಕಳ(ಆ.11): ಕಂಪೆನಿ ಸೆಕ್ರೆಟರಿ ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಅನುಭವಿ ಉಪನ್ಯಾಸಕರ ತಂಡದೊಂದಿಗೆ ಕಾರ್ಯ ಪ್ರವೃತ್ತವಾಗಿರುವ ಸಂಸ್ಥೆ ತನ್ನ ಮೊದಲ ದಿನಗಳಿಂದಲೂ ವಾಣಿಜ್ಯ ವಿಭಾಗದಲ್ಲಿ ಸಿ.ಎ, ಸಿ.ಎಸ್ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳಿಗೆ ವಿಶೇಷ ತರಗತಿ […]
ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ- ವನ-ಮಹೋತ್ಸವ-ಗಿಡ ವಿತರಣೆ
ಹೆಮ್ಮಾಡಿ(ಆ,10): ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಸಹಬಾಗಿತ್ವದಲ್ಲಿ,ಮೊಗವೀರ ಮಹಾಜನ ಸೇವಾ ಸಂಘ(ರಿ.),ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇವರ ಸಹಕಾರದೊಂದಿಗೆ ವನ-ಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಅಗಸ್ಟ್ 06 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಜರುಗಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ ಕಾರ್ಯಕ್ರಮದ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಬಿ ಬಿ ಎ ವಿಭಾಗದಿಂದ ಬ್ರಹ್ಮಾವರದ ಅಪ್ಪ ಅಮ್ಮ ಅನಾಥಾಲಯಕ್ಕೆ ಭೇಟಿ
ಕುಂದಾಪುರ (ಆ.10): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ವ್ಯಾಪಾರ ಆಡಳಿತ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ ಅಮ್ಮ ಅನಾಥಾಲಯಕ್ಕೆ ಆಗಸ್ಟ್ 08 ರಂದು ಭೇಟಿ ನೀಡಲಾಯಿತು. ವಿಭಾಗದ ವತಿಯಿಂದ ಸೀಲಿಂಗ್ ಫ್ಯಾನ್ ಹಾಗೂ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು .ಹಾಗೆಯೇ ಪ್ರಥಮ ಮತ್ತು ದ್ವೀತಿಯ ಬಿ.ಬಿ.ಎ ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೊರಂಜನೆ ಕಾರ್ಯಕ್ರಮನ್ನು ಪ್ರದರ್ಶಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ.10) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರು ನಡೆಸಿದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿ.ಕೆ.ಆರ್. ಪ್ರೌಢಶಾಲೆಯ ತರಗತಿಯ 10ನೇ ತರಗತಿಯ ವಿದ್ಯಾರ್ಥಿ ಶ್ರೀಧನ್ […]
ಕುಂದಾಪುರ: ಆರ್. ಎನ್. ಶೆಟ್ಟಿ ಪಿ ಯು ಕಾಲೇಜಿನಲ್ಲಿ ಹರ್ ಘರ್ ಧ್ಯಾನ್ ಕಾರ್ಯಕ್ರಮ
ಕುಂದಾಪುರ( ಆ,10): ಯುವಜನರನ್ನು ಮಾನಸಿಕ ಆರೋಗ್ಯ ಶಿಕ್ಷಣದಲ್ಲಿ ತೊಡಗಿಸಿಕೊಳ್ಳಲು ಮತ್ತು ಧ್ಯಾನವನ್ನು ನಿಯಮಿತ ಅಭ್ಯಾಸವಾಗಿ ತೆಗೆದುಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ‘ ಹರ್ ಘರ್ ಧ್ಯಾನ್ ‘ ಕಾರ್ಯಕ್ರಮವನ್ನು ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಯಿತು. ಆರ್ಟ್ ಆಪ್ ಲಿವಿಂಗ್ ನ ಉಡುಪಿ ಘಟಕದ ಸದಸ್ಯರಾದ ಶ್ರೀಮತಿ ಶೈಲಜಾ ಇವರು ಸುಧಾರಿತ ಆರೋಗ್ಯ ಮತ್ತು ಕ್ಷೇಮಕ್ಕಾಗಿ ಧಾನ್ಯ- ಸಂಬಂಧಿ […]