ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರು 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರದ ವತಿಯಿಂದ ಆಯೋಜಿಸಲ್ಪಟ್ಟ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಡ್ರಾಯಿಂಗ್ ಶಿಕ್ಷಕ ರಮೇಶ್ ಹಾಂಡಾ ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನವನ್ನು ಮತ್ತು ಸಂಗೀತ […]
Year: 2023
ಎಚ್.ಎಮ್. ಎಮ್, ವಿ. ಕೆ. ಆರ್ ನ ಶಿಕ್ಷಕ ರಮೇಶ್ ಹಾಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ ( ಡಿ. 7) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡರವರು, 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ […]
ಕರಾಟೆಯಲ್ಲಿ ಹೆಚ್ ಎಮ್ ಎಮ್, ವಿ ಕೆ ಆರ್ ನ ವಿದ್ಯಾರ್ಥಿಗಳ ಉತ್ಕೃಷ್ಟ ಸಾಧನೆ
ಕುಂದಾಪುರ (ಡಿ.8) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿ ಕೆ ಬುಡೋಕಾನ್ ಸೆಲ್ಫ್ ಡಿಫೆನ್ಸ್ ಆಂಡ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಮಂದರ್ತಿಯಲ್ಲಿ ಆಯೋಜಿಸಲ್ಪಟ್ಟ ನ್ಯಾಶನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ಮಂದರ್ತಿ ಟ್ರೋಫಿ 2023ರಲ್ಲಿ ಸ್ಪರ್ಧಿಸಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಪ್ರತೀಕ್, ರಿಮಿತಾ, ಅಥರ್ವ ಖಾರ್ವಿ ಕುಮಿಟೆ […]
ಡಾ.ಬಿ.ಬಿ ಹೆಗ್ಡೆ ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ ( ಡಿ.11): ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2023 -2024 ನೇ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಆನಂದ ಅಡಿಗ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು , ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಅನ್ ಬಾಕ್ಸಿoಗ್ ಸಿ ಇ ಒ
ಕುಂದಾಪುರ (ನ.16) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ಅನ್ಬಾಕ್ಸಿಂಗ್ ಸಿ ಇ ಒ ಕಾರ್ಯಕ್ರಮ ನಡೆಯಿತು . ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಯಶಸ್ವಿ ವ್ಯಕ್ತಿಗಳು ಅಥವಾ ಉದ್ಯಮಿಗಳು ಆಗುವ ಕನಸನ್ನು ಕಾಣಬೇಕು.ಕನಸು ಕಂಡಾಗ ಮಾತ್ರ ಏನಾದರೂ […]
ಬಂಟರ ಯಕ್ಷ ಸಂಭ್ರಮ :ಸಂಚಾಲಕರಾಗಿ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆ
ಕುಂದಾಪುರ.(ಡಿ, 7): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಪ್ರಯುಕ್ತ ಡಿಸೆಂಬರ್ 30ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ಬಂಟರ ಯಕ್ಷ ಸಂಭ್ರಮ ಕಾರ್ಯಕ್ರಮದ ಸಂಚಾಲಕರಾಗಿ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆಯಾಗಿರುತ್ತಾರೆ. ತಮ್ಮ ವಿದ್ಯಾರ್ಥಿ ಜೀವನದ ಬದುಕಿನಲ್ಲಿ ಅಪಾರವಾದ ಯಕ್ಷಗಾನ ಆಸಕ್ತಿ ಹೊಂದಿದ ಇವರು ಶಾಲಾ ಕಾಲೇಜುಗಳಲ್ಲಿ, ಅನೇಕ […]
ಡಿ. 13 ರಂದು ಇಡೂರು ಕುಂಜ್ಞಾಡಿಯ ಕಂಬಳ
ಕುಂದಾಪುರ( ಡಿ,07): ತಾಲೂಕಿನ ಪ್ರಸಿದ್ಧ ಸಾಂಪ್ರದಾಯಿಕ ಕಂಬಳವಾದ ಇಡೂರು ಕುಂಜ್ಞಾಡಿಯ ಕಂಬಳವು ಡಿಸೆಂಬರ್ 13 ರ ಬುಧವಾರದಂದು ಮಧ್ಯಾಹ್ನ 12 ಗಂಟೆಗೆ ಮಾರಣಕಟ್ಟೆ ಸಮೀಪದ ಶ್ರೀ ಕ್ಷೇತ್ರ ಕುಂಜ್ಞಾಡಿ ಹಾಯ್ಗುಳಿ ದೇವಸ್ಥಾನದ ಕಂಬಳ ಗದ್ದೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹಾಗೂ ಕಂಬಳ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಂಬಳ ಗದ್ದೆ ಕುಟುಂಬದವರು, ಸಂಘಟಕರು,ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ವರದಿ : ರಾಘವೇಂದ್ರ ಹರ್ಮಣ್
ಹೆಮ್ಮಾಡಿ : ಜಿ.ಶಂಕರ್ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ
ಹೆಮ್ಮಾಡಿ ( ಡಿ,06): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 05 ರಿಂದ ಡಿಸೆಂಬರ್ 25 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ […]
ಕುಂದಾಪುರ:ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ಗಳ ಸಾಧನೆ
ಕುಂದಾಪುರ (ಡಿ.06): ಶ್ರೀ ಸಿದ್ಧಿ ವಿನಾಯಕ ಶಾಲೆಯಲ್ಲಿ ಹಟ್ಟಿಅಂಗಡಿಯಲ್ಲಿ ನಡೆದ AICS CBSE ಜಿಲ್ಲಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್- 2023 ರಲ್ಲಿ ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ಗಳು 5 ಪದಕಗಳನ್ನು ಪಡೆದು ಸಾಧನೆಗೈದಿದ್ದಾರೆ. 17 ವರ್ಷದೊಳಗಿನ ಬಾಲಕಿಯರ ಗುಂಡು ಎಸೆತದಲ್ಲಿ ಹಾಗೂ ನೆಹಾಲ್ ಆರ್ ಹೆಗ್ಡೆ (ಗುರುಕುಲ ಪಬ್ಲಿಕ್ ಸ್ಕೂಲ್) ಚಿನ್ನದ ಪದಕ ಹಾಗೂ ಡಿಸ್ಕಸ್ ಥ್ರೋ ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ 100 ಮೀ ಓಟದಲ್ಲಿ ರಾನ್ಸ್ಲಿ […]
ಕುಂದಾಪುರ: ಗಮಕ ವಾಚನ ವ್ಯಾಖ್ಯಾನ
ಕುಂದಾಪುರ( ಡಿ,4): ಪುರಾಣ ಹಾಗೂ ಆಧುನಿಕ ಕಾವ್ಯಗಳ ಸುಲಭ ಅರ್ಥೈಸುವಿಕೆಗೆ ಗಮಕ ಕಲೆ ಪೂರಕವಾದುದು. ಕಾವ್ಯಗಳಲ್ಲಿನ ಸಾಂದರ್ಭಿಕವಾದ ಸಾಹಿತ್ಯ ಶ್ರೀಮಂತಿಕೆಗೆ ರಸಬದ್ಧವಾದ ರಾಗಗಳ ಸಂಯೋಜನೆಯಿಂದ ಶೋತೃಗಳಿಗೆ ಹೃದ್ಯವಾಗುತ್ತದೆ. ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು ಯುವ ಮನಸುಗಳನ್ನು ಅರಳಿಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ ಎ ಎಸ್ ಎನ್ ಹೆಬ್ಬಾರ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ‘ನುಡಿ’ ಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ […]