ಹೆಮ್ಮಾಡಿ(ಆ ,10): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ತ್ರಿಷಾ ಸಮೂಹ ಶಿಕ್ಷಣ […]
Year: 2023
ಸಿ ಎ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ (ಆ,10): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ (CA) ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್ ಪೈ, ಹೆಗ್ಡೆ ಅನಿರುದ್ಧ್ ರಮೇಶ್, ಅಭಿಷೇಕ್ ಪಿ ಎಸ್, ವಿಂದ್ಯಾ ವಿನಯ್ ಹೆಗಡೆ, ಎಸ್ ಅನುರಾಜ್ ಇವರು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿ […]
ಕ್ರಿಯೇಟಿವ್ ಕಾಲೇಜಿನ ಜಾಗೃತಿ ಕೆ ಪಿ ಜಿಪ್ಮರ್ (JIPMER)ಗೆ ಉದ್ಭವ್ ಎಂ ಆರ್ AIIMS ಗೆ ಆಯ್ಕೆ
ಕಾರ್ಕಳ(ಆ,10): ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಪ್ರವೇಶ ಆರಂಭಗೊಂಡಿದ್ದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಾಗೃತಿ ಕೆ ಪಿ ದೇಶದ ಪ್ರತಿಷ್ಠಿತ ವೈದ್ಯಕೀಯ ವಿದ್ಯಾಲಯ ಪುದುಚೆರಿಯ ಜಿಪ್ಮರ್ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಇಪ್ಪತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆದ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ (JIPMER) ನಲ್ಲಿ ಪ್ರವೇಶ ಪಡೆಯುವುದು ಅಸಾಮಾನ್ಯ ಸಾಧನೆಯಾಗಿದೆ. ಕು. ಜಾಗೃತಿ ಕೆ ಪಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಕೈಗಾರಿಕಾ ಭೇಟಿ
ಕುಂದಾಪುರ (ಆ,10): ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ/Bridge Course ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ತಿಳಿಸುವ ನಿಟ್ಟಿನಲ್ಲಿ ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ […]
ಐಐಟಿ ವಿದ್ಯಾರ್ಥಿಯಾಗಿ ಪ್ರಣಮ್ಯ ಜಿ.ಎಚ್. ಆಯ್ಕೆ
ಕುಂದಾಪುರ (ಜು,29): ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಖರಗ್ಪುರ ಪಶ್ಚಿಮ ಬಂಗಾಳದ ವಿದ್ಯಾಸಂಸ್ಥೆಗೆ 2023-24 ನೇ ಸಾಲಿನ ಬಾಹ್ಯಾಕಾಶ ಸಂಶೋಧನಾ ಶಿಕ್ಷಣದ ವಿಭಾಗದ ಎಂಜಿನಿಯರಿಂಗ್ ಪದವಿ ಶಿಕ್ಷಣ ಪಡೆಯಲು ಉಡುಪಿ ಜಿಲ್ಲೆಯಿಂದ ಪ್ರಣಮ್ಯ ಜಿ.ಎಚ್. ಆಯ್ಕೆಯಾಗಿದ್ದಾರೆ. ಇವರು ತಮ್ಮ ಪದವಿ ಪೂರ್ವ ಶಿಕ್ಷಣವನ್ನು ಕುಂದಾಪುರ ವೆಂಕಟರಮಣ ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ 7 ನೆ ರ್ಯಾಂಕ್ ಪಡೆದಿದ್ದಾರೆ.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ
ಹೆಮ್ಮಾಡಿ(ಜು,29): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕುಂದಾಪುರದ ಮೊಗವೀರ ಭವನದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ ಡಾ|ಆದರ್ಶ ಹೆಬ್ಬಾರ್ ರವರು […]
ರಸಾಯನಶಾಸ್ತ್ರವು ಶಿಕ್ಷಕರಿಗೆ ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ – ಶ್ರೀ ಮಾರುತಿ
ಉಡುಪಿ(ಜು,29): ರಸಾಯನಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಮಾರುತಿ ಹೇಳಿದರು. ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ನಡೆದ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋರವರು ಮಾತುಗಳನಾಡುತ್ತಾ ಉತ್ತಮ ಬೋಧನೆಯಲ್ಲಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಕಾರ್ಗಿಲ್ ವಿಜಯ ದಿವಸ ಆಚರಣೆ
ಕುಂದಾಪುರ (ಜುಲೈ 26): ವೀರಯೋಧರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುದು ನಮ್ಮ ಆಧ್ಯ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಎನ್.ಸಿ.ಸಿ. ಘಟಕದ ಅಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ಅಪ್ರತಿಮ ಯಶಸ್ಸಿನ ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ […]
ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆ
ಕುಂದಾಪುರ (ಜು,28): 2022-24 ಸಾಲಿನ ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಭೋಧಕ & ಭೋಧಕೇತರ ಸಿಬ್ಬಂದಿಗಳು ಅಭಿನಂದನೆ ಕೋರಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಎನ್. ಎಸ್ . ಎಸ್ ಮಾಹಿತಿ ಕಾರ್ಯಕ್ರಮ
ಕುಂದಾಪುರ (ಜು,25): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ರೂಪರೇಷೆಗಳ ಪರಿಚಯ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾIಬಿ.ಬಿ.ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಯವರು ಎನ್.ಎಸ್.ಎಸ್ ಕಾರ್ಯ ಚಟುವಟಿಕೆಗಳ ರೂಪರೇಷೆಗಳ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ […]