ಹೈಕಾಡಿ( ಜು,13): ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಹೈಕಾಡಿ ,ಉಡುಪಿ ಜಿಲ್ಲೆ ಸಂಸ್ಥೆಯು ತರಬೇತಿ ಮತ್ತು ವೈದ್ಯಕೀಯ ನೆರವಿಗಾಗಿ ಹಮ್ಮಿಕೊಂಡ 50ರೂ ಬೆಲೆಯ ಅದೃಷ್ಟ ಚೀಟಿ ಡ್ರಾ ದಿನಾಂಕ:16-07-2023ನೇ ಭಾನುವಾರ ಸಂಜೆ 5ಗಂಟೆಗೆ ನಡೆಯಬೇಕಾಗಿದ್ದು ಕಾರಣಾಂತರಗಳಿಂದ ದಿನಾಂಕ: 16-09-2023ನೇ ಶನಿವಾರ ಸಂಜೆ 5ಗಂಟೆಗೆ ಮುಂದೂಡಲಾಗಿದೆ. ಈಗಾಗಲೇ 15ಸಾವಿರ ಮೊತ್ತವನ್ನು ವೈದ್ಯಕೀಯ ನೆರವಿಗೆ ನೀಡಲಾಗಿದ್ದು ಇನ್ನು ಮುಂದೆಯು ನೆರವು ನೀಡಬೇಕಾಗಿದ್ದು ಅದೃಷ್ಟ ಚೀಟಿಯ ಡ್ರಾ ದಿನಾಂಕ ಮುಂದೂಡಲಾಗಿದೆ. ಮಾಹಿತಿಗಾಗಿ 9743682692 […]
Year: 2023
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಯುವ ಸಾಧಕರಿಗೆ ಸನ್ಮಾನ- ಮಾಹಿತಿ ಆಹ್ವಾನ
ಕುಂದಾಪುರ(ಜು,12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕರನ್ನು ಗುರುತಿಸಿ, ಅಭಿನಂದಿಸುವ ಯೋಜನೆಯನ್ನು ರೂಪಿಸಲಾಗಿದೆ. ಕೆಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳು, ಐಎಎಸ್/ಕೆಎಎಸ್ ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆಗೈದ ಅಭ್ಯರ್ಥಿಗಳು, ಸಾಹಿತ್ಯ, ಲಲಿತಕಲೆ, ಕ್ರೀಡೆ, ಪರಿಸರ ಮೊದಲಾದ ರಂಗಗಳಲ್ಲಿ ರಾಜ್ಯ, ರಾಷ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಅಥವಾ ಬಹುಮಾನ ಪಡೆದ ಯುವ ಸಾಧಕರು-ಮೊದಲಾದವರ ನ್ನು […]
ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ
ಕುಂದಾಪುರ (ಜುಲೈ 12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅಗಸ್ಟ್ 20ರ ಭಾನುವಾರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆಯ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ ಆಗಿದ್ದಾರೆಂದು ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇವರು ಕುಂದಾಪುರದ […]
ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿ: ವಾರ್ಷಿಕ ಮಹಾಸಭೆ
ಗಂಗೊಳ್ಳಿ(ಜು12) : ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿಯವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಎರಡನೇ ವರ್ಷದ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಕುಂದಾಪುರ (ಜು,10): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2023-24ನೇ ಶೈಕ್ಷಣಿಕ ವರ್ಷದವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಯು 2023ರಲ್ಲಿ ನಡೆದ ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಾಸರಿ 80% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ ಪ್ರಸ್ತುತ ಪ್ರಥಮ ವರ್ಷದ ಪದವಿಪೂರ್ವ, ಪದವಿ ತರಗತಿಯಲ್ಲಿ ಅಥವಾ ಯಾವುದೇ ವೃತ್ತಿಪರ ಶಿಕ್ಷಣ/ತರಬೇತಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಬೀಳ್ಕೊಡುಗೆ ಸಮಾರಂಭ
ಕುಂದಾಪುರ (ಜುಲೈ 10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಜು. 10ರಂದು ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಶಿಸ್ತು ಮತ್ತು ಪ್ರಾಮಾಣಿಕತೆ ಭವಿಷ್ಯದ ಜೀವನಕ್ಕೆ ದಾರಿ ದೀಪವಾಗಲಿ, ಕಾಲೇಜಿನಲ್ಲಿ ಪಡೆದ ಸಂಸ್ಕಾರ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದರು. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಸಿ.ಎ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ (ಜುಲೈ 10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿ.ಎ. ಫೌಂಡೇಶನ್ ಹಾಗೂ ಇಂಟರ್ ಮೀಡಿಯೇಟ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಜುಲೈ 10ರಂದು ಸನ್ಮಾನಿಸಲಾಯಿತು.ಮೇ 2023ರಲ್ಲಿ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯ ಗ್ರೂಪ್ ಎರಡರಲ್ಲಿ ತೇರ್ಗಡೆ ಹೊಂದಿದ ಶ್ರಾವ್ಯ, ರೋಹನ್, ಚೇತನಾ, ಮಂದಾರ ಮತ್ತು ಗ್ರೂಪ್ ಒಂದರಲ್ಲಿ ತೇರ್ಗಡೆ ಹೊಂದಿದ ನಾದಶ್ರೀ, ರಂಜನ್, ಶಾಂಭವಿ, ಅನುಷಾ ಹಾಗೂ ಡಿಸೆಂಬರ್ 2022ರಲ್ಲಿ ನಡೆದ ಸಿ.ಎ. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಮೆಗಾ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವ್
ಕುಂದಾಪುರ (ಜುಲೈ 06): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ್ದ ಮೆಗಾ ಪ್ಲೇಸ್ಮೆಂಟ್ ಡೈವ್ ಯಶಸ್ವಿಯಾಗಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಅಂತಿಮ ಪದವಿ ತರಗತಿಯ ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೆ ಉದ್ಯೋಗವಕಾಶಗಳನ್ನು ಒದಗಿಸುವ ಗುರಿ ನಮ್ಮ ಸಂಸ್ಥೆಯದ್ದಾಗಿದ್ದು ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಟೈಮ್ ಫಾರ್ ನೇಚರ್ – ರಸಪ್ರಶ್ನೆ ಸ್ಪರ್ಧೆ
ಕುಂದಾಪುರ (ಜುಲೈ 04): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ‘ಟೈಮ್ ಫಾರ್ ನೇಚರ್’ ಎನ್ನುವ ಶೀರ್ಷಿಕೆಯಡಿಯಲ್ಲಿ ಅಂತರ್ ತರಗತಿ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಜುಲೈ 04 ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯ ಬಗ್ಗೆ ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯಲ್ಲಿ […]
ಮೂಡ್ಲಕಟ್ಟೆ ಎಂ ಐ ಟಿ: ವನಮಹೋತ್ಸವ ಕಾರ್ಯಕ್ರಮ
ಕುಂದಾಪುರ(ಜು.09): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ತೆಗೆದುಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಅಬ್ದುಲ್ ಕರೀಮ್ ಅವರು ಮಾತನಾಡಿ ಉತ್ತಮವಾದ ಆರೋಗ್ಯಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ ಎಂದು ಹೇಳಿ , ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ತದನಂತರ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವನಮಹೋತ್ಸ ಆಚರಣೆಗೆ ಚಾಲನೆ ನೀಡಿದರು. 2000ಕ್ಕೂ […]










