ಕುಂದಾಪುರ(ಜ.15): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕ ಶ್ರೀ ಭುಜಂಗ ಶೆಟ್ಟಿ ಯವರು ಸ್ವಾಮಿ ವಿವೇಕಾನಂದರ ಕುರಿತಾಗಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ರೂಡಿಸಿಕೊಳ್ಳಬೇಕು, ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುವ ಯುವ ಸಮೂಹದ ಸೃಷ್ಟಿಯಾಗಬೇಕು ಎಂದು […]
Day: January 15, 2024
ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ್ ತೇರ್ಗಡೆ
ಕುಂದಾಪುರ (ಜ,15) : ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ ತೇರ್ಗಡೆ ಹೊಂದಿದ್ದಾರೆ. ನೇರಳಕಟ್ಟೆಯ ನಿವಾಸಿ ಶ್ರೀಮತಿ ಸಾಧು ಹಾಗೂ ಶ್ರೀ ಶಂಕರ ಪೂಜಾರಿಯವರ ಪುತ್ರನಾದ ಇತ ತನ್ನ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ.ಶಾಲೆ, ಕರ್ಕುಂಜೆಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳದ ಫ್ರೌಡ ಶಾಲೆ, ಮಾವಿನಕಟ್ಟೆಯಲ್ಲಿ , ಪದವಿ ಪೂರ್ವ […]
ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರ ಚೇತನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
ಕಾರ್ಕಳ( ಜ,15): ಸ್ವಾಮಿ ವಿವೇಕಾನಂದರ ಚಿಂತನೆಗಳು ಭಾರತ ಮಾತ್ರವಲ್ಲ ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ. ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾತ್ಮ ಸ್ವಾಮಿ ವಿವೇಕಾನಂದರು. ಎಲ್ಲರಿಗೂ ಸ್ಪೂರ್ತಿಯ ಚಿಲುಮೆ ಎಂದು ಗಣಿತ ಉಪನ್ಯಾಸಕ ಶ್ರೀ ಪ್ರದೀಪ್ ಅಂಚನ್ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ʼಯುವ ಸಪ್ತಾಹʼದ ಅಂಗವಾಗಿ […]