ಗಂಗೊಳ್ಳಿ ( ಮಾ.21): ಖ್ಯಾತ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿಯವರ 31 ವರ್ಷದ ಕಲಾ ಸೇವೆಯನ್ನು ಪರಿಗಣಿಸಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಜಿಲ್ಲೆ ಇವರು ಕೊಡಮಾಡುವ “ಸುವರ್ಣ ಕರ್ನಾಟಕ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ ತಿಂಗಳಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಾಲಿಗ್ರಾಮ […]
Day: March 21, 2024
ಬಿ . ಬಿ. ಹೆಗ್ಡೆ ಕಾಲೇಜು:“ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಸಮಾರೋಪ
ಕುಂದಾಪುರ (ಮಾ.16): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್ ಅಂತರ್-ತರಗತಿ ಸ್ಪರ್ಧೆಯು ಮಾರ್ಚ್ 16ರಂದು ಕಾಲೇಜಿನ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ […]
ಕುಂದಾಪುರ : ಶಿಕ್ಷಕ ದಂಪತಿಯ ಈಜು ಸಾಧನೆ
ಕುಂದಾಪುರ ( ಮಾ.21): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಸ್ಪರ್ಧೆಯಲ್ಲಿ, ಮುಲ್ಲಕಾಡು ಸರ್ಕಾರಿ ಶಾಲೆಯ ಶಿಕ್ಷಕ ದಂಪತಿ ವಿಶೇಷ ಸಾಧನೆ ಮಾಡಿದ್ದಾರೆ. ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ದಾಖಲೆಯ ಈಜುಪಟು, ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ […]