ಕುಂದಾಪುರ (ಜೂನ್ 04): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಇಂಗ್ಲೀಷ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಮೂಡಬಿದ್ರೆಯ ಭಾಷಾ ವಿಭಾಗದ ಮುಖ್ಯಸ್ಥರಾದ ಶ್ರೀ ವಿಕ್ರಂ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ನಾಯಕತ್ವ ಎಂದರೇನು? ಅದನ್ನು ತಮ್ಮೊಳೊಗೆ ರೂಡಿಸಿಕೊಳ್ಳುವ ಬಗೆ ಹೇಗೆ ಮತ್ತು ವಿದ್ಯಾರ್ಥಿ ಜೀವನದಿಂದ […]
Month: June 2024
ನೀಟ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ(ಜು,05):ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ […]
ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ(ಜು,03): ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ […]
ಬಿ. ಬಿ. ಹೆಗ್ಡೆ ಕಾಲೇಜಿನ ಪ್ರತೀಕ್ಷಾಶೆಟ್ಟಿ 9ನೇ ರ್ಯಾಂಕ್
ಕುಂದಾಪುರ (ಮೇ 29): ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ, D/o. ನಾರಾಯಣ ಶೆಟ್ಟಿ, ಉಳ್ಳೂರು-74, ಕುಂದಾಪುರ ಇವರು 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಗ್ರಹ ಚೇತನ ಯೋಜನೆಯಡಿ ಆರ್ಥಿಕ ನೆರವು
ಕುಂದಾಪುರ(ಮೇ 28): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗ್ರಹ ಚೇತನ ಯೋಜನೆಯಡಿ ಆಯ್ಕೆಯಾದ ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಶ್ರೀಮತಿ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ ಶ್ರೀ ಎಚ್. ಚಂದ್ರ ಶೆಟ್ಟಿ ಹೋಟೆಲ್ ಉದ್ಯಮಿ ಹೈದ್ರಾಬಾದ್ ಇವರ ಶಿಫಾರಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ ಶ್ರೀಮತಿ ಕುಸುಮ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ […]










