ಕುಂದಾಪುರ(ಆ,03): ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು ನೀಡಲು ಮುಂದಾಗಬೇಕು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. […]
Day: August 3, 2024
ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ ಪ್ರತೀಕ :ಶ್ರೀ ಮಾರುತಿ
ಕುಂದಾಪುರ (ಆ ,03): ವಿದ್ಯಾರ್ಥಿಗಳಿಗೆ ಗಣಿತ ಮತ್ತು ಸಂಖ್ಯಾಶಾಸ್ತ್ರ ವಿಷಯಗಳ ಅವಶ್ಯಕತೆ ತುಂಬಾ ಇದೆ. ಆದರೆ ಇವೆಲ್ಲಾ ಕಬ್ಬಿಣದ ಕಡಲೆಯಂತೆ ತಪ್ಪು ಗ್ರಹಿಕೆ ಅವರಲ್ಲಿದೆ. ಭವಿಷ್ಯದ ಪೀಳಿಗೆಗೆ ಎಲ್ಲಾ ಸಂದರ್ಭಗಳಲ್ಲಿಯೂ, ಅನೇಕ ವ್ಯವಹಾರಗಳಲ್ಲಿ ಮತ್ತು ಸಂವಹನಗಳಲ್ಲಿ ಸಂಖ್ಯಾಶಾಸ್ತ್ರ ಅವಶ್ಯಕವಾಗಿದೆ. ನಮ್ಮ ರಾಜ್ಯದ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ಸಂಯೋಜನೆ ತುಂಬಾ ಅವಶ್ಯಕತೆಯಿದೆ, ಇಡೀ ಜಗತ್ತಿನ ಆರ್ಥಿಕ ಬಲವರ್ಧನೆಯ ಅಧ್ಯಯನ ಕೂಡಾ ಇದರಿಂದಲೇ ಸಾಧ್ಯ, ಹಾಗಾಗಿ ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ […]
ಸಿ ಎ ಫೌಂಡೇಶನ್ ಫಲಿತಾಂಶ: ವ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಆ,03): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.