ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ 1 & 2ರ ಆಶ್ರಯದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳು ಎಂಬ ವಿಷಯದ ಕುರಿತ ಅರಿವು ಮೂಡಿಸುವ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಾದಕ ಸೇವನೆಯ ವಿವಿಧ ಮಜಲುಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಲಹೆಗಾರರಾದ ಮಂಜುಳಾ ಶೆಟ್ಟಿ ಉಪನ್ಯಾಸ […]
Day: September 12, 2024
ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪಿಜಿಸಿಇಟಿ ಕುರಿತು ಮಾಹಿತಿ ಕಾರ್ಯಾಗಾರ
ಕುಂದಾಪುರ (ಸೆ.10): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೆಪ್ಟೆಂಬರ್ 10ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವಿಸ್ಡಮ್ ಇನ್ಸ್ಟಿಟ್ಯೂಷನ್ಸ್ ನೆಟ್ವರ್ಕ್ ಸಂಸ್ಥೆಯ ಸಿ.ಇ.ಓ. ಶ್ರೀ ಅಭಿಲಾಷ್ ಕ್ಷತ್ರಿಯ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪತಿ
ಕುಂದಾಪುರ (ಸೆ,06): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 06ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜು : ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2024-25ನೇ ಶೈಕ್ಷಣಿಕ ಸಾಲಿನ ಹದಿನಾರು ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಸೆಪ್ಟೆಂಬರ್ 11ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ತ್ರಾಸಿ ಶ್ರೀ ದುರ್ಗಾ ಕ್ಲಿನಿಕ್ನ ಡಾ| ಆತ್ರಾಡಿ ಹರಿಪ್ರಸಾದ್ ಶೆಟ್ಟಿಯವರು ಉದ್ಘಾಟಿಸಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು […]










