ಹೆಮ್ಮಾಡಿ(ಸೆ.17): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Day: September 17, 2024
ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ […]
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ದಿವಸ್ ಆಚರಣೆ
ಕುಂದಾಪುರ, (ಸೆ. 14): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹಿಂದಿ ಭಾಷೆ ಭಾರತೀಯ ಸಂಸ್ಕೃತಿಯ ಕೊಂಡಿಯಾಗಿದೆ. ಹೀಗಾಗಿ ಭಾಷೆ, ಸಂಸ್ಕೃತಿ- ಸಂಸ್ಕಾರವನ್ನು ಗೌರವಿಸಿ, ಅನುಸರಿಸಿ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀ ಸಂತೋಷ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ‘ಹಿಂದಿ ದಿವಸ್’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ
ಕುಂದಾಪುರ (ಸೆ.17): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಎಚ್ ಎಮ್ ಎಮ್ & ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗ :ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ (ಸೆ.17): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 14.09.2024 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಾತಾ ಹಾಸ್ಪಿಟಲ್ ನ ಸೈಕಲಾಜಿಸ್ಟ್ ಆಗಿರುವ ಶ್ರೀಮತಿ ಜಾಹ್ನವಿ ಪ್ರಕಾಶ್ ರವರು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಅವರ ವರ್ತನೆ, ಸಮಸ್ಯೆಗಳು ಹಾಗೂ ಪರಿಹಾರ […]










