ಕುಂದಾಪುರ (ಸೆ .19): ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಡೇರಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾಗಿ ವಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಆಯೋಜಿಸಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 10ನೇ ತರಗತಿಯ ಗಾರ್ಗಿ ದೇವಿ ಭರತನಾಟ್ಯದಲ್ಲಿ, ಅದಿತಿ […]
Day: September 23, 2024
ಹಾರ್ಡ್ ಬಾಲ್ ಕ್ರಿಕೆಟ್ : ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಸೆ .19) : ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾಗಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಆಯೋಜಿಸಿದ 17ರ […]
ಧೈರ್ಯ, ಶಿಸ್ತು, ಶೌರ್ಯದಲ್ಲಿ ಭಾರತದ ಸೈನ್ಯಕ್ಕೆ ಪ್ರಪಂಚದ ಯಾವುದೇ ಸೈನ್ಯ ಸರಿಸಾಟಿಯಲ್ಲ-ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ
ಕುಂದಾಪುರ (ಸೆ . 23) : ಸಂಸ್ಥೆಯಲ್ಲಿ ಕಳೆದ ತನ್ನ ಪ್ರಾಥಮಿಕ ಶಿಕ್ಷಣದ ಕ್ಷಣಗಳನ್ನು ಮೆಲುಕು ಹಾಕುತ್ತಾ, ನನ್ನ ಹಿಂದಿನ ಈ ಸಾಧನೆಗೆ ಅಂದಿನ ನನ್ನ ಪ್ರಾಥಮಿಕ ಶಿಕ್ಷಕರು ನೀಡಿದ ಶಿಸ್ತು, ಸಂಯಮ, ಪ್ರೇರಣೆಯೇ ಕಾರಣ. ಧೈರ್ಯ, ಶಿಸ್ತು, ಶೌರ್ಯದಲ್ಲಿ ಭಾರತದ ಸೈನ್ಯಕ್ಕೆ ಪ್ರಪಂಚದ ಯಾವುದೇ ಸೈನ್ಯ ಸರಿಸಾಟಿಯಲ್ಲ ಎಂದು ಇತ್ತೀಚಿಗಷ್ಟೇ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸ್ಥಾನ ಪಡೆದಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ […]
ಬಗ್ವಾಡಿ ಕ್ಷೇತ್ರದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ
ಹೆಮ್ಮಾಡಿ ( ಸೆ,23): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ. ಬಿ ಸಿ ಟ್ರಸ್ಟ್ ಕುಂದಾಪುರ ತಾಲೂಕು, ತಾಲೂಕು ಜನ ಜಾಗ್ರತಿ ವೇದಿಕೆ ಕುಂದಾಪುರ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಇದರ ಸಹಾಭಾಗಿತ್ವದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಸೆಪ್ಟೆಂಬರ್ 22 ರಂದು ಬಗ್ವಾಡಿ ಶ್ರೀ ಮಹಿಷಾಸುರಮರ್ದನಿ ದೇವಸ್ಥಾನದಲ್ಲಿ ನೆಡಯಿತು. ಪ್ರಥಮದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಗ್ರಾಮ ಸುಭಿಕ್ಷೆ ಬಗ್ಗೆ ಪ್ರಾರ್ಥನೆ ಮಾಡಲಾಯಿತು. ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಭಜನಾ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಏಡ್ಸ್ ಅರಿವು ಆಂದೋಲನ – ಯಕ್ಷಗಾನ ಪ್ರದರ್ಶನ
ಹೆಮ್ಮಾಡಿCಸೆ.23): ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಎಚ್.ಐ.ವಿ.ಏಡ್ಸ್ ಅರಿವು ಆಂದೋಲನ ಕಾರ್ಯಕ್ರಮದ ಕುರಿತು ಯಕ್ಷಗಾನ ಪ್ರದರ್ಶನ ನಡೆಯಿತು. ಉತ್ತರ ಕನ್ನಡ ಸಿದ್ದಾಪುರದ ಯಕ್ಷಗಾನ ತಂಡದವರಯ ಯಕ್ಷಗಾನ ಪ್ರದರ್ಶನದ ಮೂಲಕ ಏಡ್ಸ್ ಕುರಿತಾಗಿ ಜಾಗ್ರತಿ ಸಂದೇಶವನ್ನು ಸಾರಿದರು.ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು,ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು,ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದರು.