ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಂ ಹಾಗೂ ವಿಕೆಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 25.09.2024 ರಂದು ಪ್ರಿಸ್ಕೂಲ್ ವಿದ್ಯಾರ್ಥಿಗಳಿಗೆ ಸುಂದರ ಕೈಬರಹ ಎನ್ನುವ ವಿಷಯದ ಕುರಿತು ಕಾರ್ಯಾಗಾರ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕಿ ಹಾಗೂ ಕೈಬರಹ ಪರಿಣಿತರಾಗಿರುವ ಶ್ರೀಮತಿ ಕವಿತಾ ಪಿ ಅವರು ಶಾಲಾ ಪೂರ್ವ ಮಕ್ಕಳ ಭಾವನಾತ್ಮಕ ಕೈಬರಹದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. […]
Day: September 25, 2024
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಸೆ.24): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-2025ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ಬೈಂದೂರು ತಾಲೂಕು ಮಾಜಿ ಕೋಶಾಧಿಕಾರಿ ಶ್ರೀ ಪಿ. ನರಸಿಂಹ ಮೂರ್ತಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಫಲದ ಅಪೇಕ್ಷೆ ಇಲ್ಲದೇ ಸೇವೆ ಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಪಕಾರಕ್ಕೆ ಸ್ಪಂದಿಸಬೇಕು […]
ಬಗ್ವಾಡಿ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ವನ ಮಹೋತ್ಸವ
ಹೆಮ್ಮಾಡಿ (ಸೆ. 25) ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ಮಾಣೂರು, ಪಡುಕೆರೆ ವತಿಯಿಂದ ಶ್ರೀ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಆನಂದದ ಸೃಷ್ಟಿ ಪರಿಕಲ್ಪನೆಯ ಅತ್ಯಮೂಲ್ಯವಾದ ಗಿಡಗಳನ್ನು ದೇಗುಲದ ಪ್ರಾಂಗಣದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಕುಂದಾಪುರ ಇದರ ಶಾಖಾಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಕೋಶಾಧಿಕಾರಿ ಸತೀಶ್ ನಾಯ್ಕ್ […]
ಜಿಲ್ಲಾ ದಸರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಟ್ರಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾ ಪಟುಗಳಿಂದ ಸಾಧನೆ
ಉಡುಪಿ (ಸೆ. 25): ಜಿಲ್ಲಾಡಳಿತ & ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 25 ರಂದು ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಯಲ್ಲಿ ಹಮ್ಮಿಕೊಂಡ ಜಿಲ್ಲಾ ದಸರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರಸಿದ್ಧ ಕ್ರೀಡಾ ಸಂಸ್ಥೆಯಾದ ಟ್ರಾಕ್ & ಫೀಲ್ಡ್ ಕ್ರೀಡಾ ಸಂಸ್ಥೆ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ಕ್ರೀಡಾಪಟು ನವ್ಯಾ ಆಚಾರ್ 1500 […]
ಬಿ. ಬಿ. ಹೆಗ್ಡೆ ಕಾಲೇಜು: ಎನ್.ಸಿ.ಸಿ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಸೆ.21): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ವಾರ್ಷಿಕ ಚಟುವಟಿಕೆಯನ್ನು ಕುಂದಾಪುರದ ವಿ.ಕೆ.ಆರ್. ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಉದ್ಘಾಟಿಸಿ, ಎನ್.ಸಿ.ಸಿ. ಘಟಕದ ಪ್ರಾಮುಖ್ಯತೆಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎನ್.ಸಿ.ಸಿ. ಸೀನಿಯರ್ ಕ್ಯಾಡೆಟ್ಗಳಿಗೆ ರ್ಯಾಂಕ್ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಎನ್.ಸಿ.ಸಿ.ಯ ಕಾರ್ಯವೈಖರಿಯನ್ನು ಮತ್ತು […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.25): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 23 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಕ್ರಮವಾಗಿ-ವಿಘ್ನೇಶ್,ರತನ್,ರಿತೇಶ್, ನವಾಜ್,ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಮಾರಿ ಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ […]
ಜನತಾ ಪಿ ಯು ಕಾಲೇಜಿನ ರಿಮೇಶ್ ರಾಜ್ಯ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಕ್ಕೆ ಆಯ್ಕೆ
ಹೆಮ್ಮಾಡಿ(ಸೆ.25): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










