ಕುಂದಾಪುರ (ಸೆ. 25) : ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ| ಪ್ರೇಮಾನಂದ ಅವರು ಮಾತನಾಡಿ, ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ […]
Day: September 30, 2024
ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ
ಗಣಿತ ನಗರ ( ಸೆ .29): ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ ಗುಣಶ್ರೀ ಆರ್, ಮನಸ್ವಿ.ಎಚ್.ಟಿ, ಪ್ರಥಮ ವಿಜ್ಞಾನ ವಿಭಾಗದ ಪೂರ್ಣಶ್ರೀ.ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ದಿಗಂತ್.ಎಚ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ […]
ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಗಾರ
ಕುಂದಾಪುರ( ಸೆ,29): ಮೂಡ್ಲಕಟ್ಟೆ ಐ ಎಮ್ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು . ಈ ತರಬೇತಿ ಕಾರ್ಯಗಾರವನ್ನು ಎಕಾಮ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ (ಯುಎಸ್), ಬೆಂಗಳೂರಿನ ಡೆಪ್ಯುಟಿ ಟೀಮ್ ಲೀಡ್ ರಾದ ಶ್ರೀ ದೇವರಾಜ ರವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಎದುರಿಸುವ ಬಗೆ, ವಿವಿಧ ಹಂತ, ಮತ್ತು ಪೂರ್ವ ತಯಾರಿಯ ಕುರಿತು […]
ಹೆಮ್ಮಾಡಿ: ಜನತಾ ಪಿ .ಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ
ಹೆಮ್ಮಾಡಿ(ಸೆ.29): ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ ಜನತಾ ಕ್ರೀಡಾಂಗಣ ಹೆಮ್ಮಾಡಿಯಲ್ಲಿ ನಡೆಯಿತು.ಅಂತಾರಾಷ್ಟ್ರೀಯ ಕಿವುಡರ ಟಿ-20 ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಭಾರತ ತಂಡದ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಹುಂಚನಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ […]
ಹೆಮ್ಮಾಡಿ: ಜನತಾ ಪಿ. ಯು ಕಾಲೇಜಿನ ಶ್ರುತಿಕಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ:( ಸೆ.29): ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.