ಕುಂದಾಪುರ (ಅ 02) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ ,02 ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ನಡೆದು ಬಂದ ಹಾದಿ, ಅವರ […]
Day: October 3, 2024
ಸಿ. ಬಿ. ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಪ್ರಕುಲ್ ಕುಂದರ್ ಹಾಗೂ ಆಶಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ, 03): ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದ ಸಿ ಬಿ ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಪ್ರಕುಲ್ ಕುಂದರ್ ಹಾಗೂ ಆಶಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 4×100 ಮೀಟರ್ ಬಾಲಕರ ರಿಲೇಯಲ್ಲಿ ಅದ್ಭುತ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಮುಖ್ಯಸ್ಥರು […]
ಸಾಲಿಗ್ರಾಮ ಮಕ್ಕಳ ಮೇಳಕ್ಕೆ ’50’ ರ ಸುವರ್ಣ ಪರ್ವ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದ್ವಯರಾದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಎಚ್. ಶ್ರೀಧರ ಹಂದೆಯವರ ಕನಸಿನ ಕೂಸು ಸಾಲಿಗ್ರಾಮ ಮಕ್ಕಳ ಮೇಳ. ಯಕ್ಷಗಾನದ ಇತಿಹಾಸದಲ್ಲಿ 1975 ರ ಅಕ್ಟೋಬರ್ 10 ನೇ ತಾರೀಖು ಮಕ್ಕಳ ಮೇಳ ಉದಯವಾದದ್ದು ಒಂದು ಮೈಲಿಗಲ್ಲು. ಯಕ್ಷಗಾನದ ಬಡಗುತಿಟ್ಟಿನ ಹಾರಾಡಿ, ಮಟಪಾಡಿ ತಿಟ್ಟುಗಳ ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯದ ಕುಣಿತ, ವೇಷಭೂಷಣಗಳ ಅನನ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ್ದು ದೇಶದ ಉದ್ದಗಲಕ್ಕೂ […]
ಕಾರ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ ( ಆ .03): ಶಾಲಾ ಶಿಕ್ಷಣ ಇಲಾಖೆ , ಕರ್ನಾಟಕ ಸರ್ಕಾರ ಮತ್ತು ಮರಿಯಾ ಗೊರಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಿರ್ಗಾನ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, 100ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಶ್ರವಣ್ 200 ಮೀ. […]
ಬಿ. ಬಿ. ಹೆಗ್ಡೆ ಕಾಲೇಜು: ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ್ -ರೇಂಜರ್ಸ್, ಯುವ ರೆಡ್ಕ್ರಾಸ್ ಘಟಕ ಹಾಗೂ ರೋಟರಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವ್ಯವಹಾರ ಆಡಳಿತ […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ಗಾಂಧಿ ಮತ್ತು ಶಾಸ್ತ್ರಿ ಜಯಂತಿ
ಮೂಡ್ಲಕಟ್ಟೆ( ಆ,03): ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಗಾಂಧೀ ಜೀ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್ ಅವರು ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳ ಜೀವನ, ತತ್ವ, ಆದರ್ಶಗಳು ಇಂದಿನ ಜನತೆಗೆ ಆದರ್ಶವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಅನನ್ಯವಾದುದು ಹಾಗೂ ಗಾಂಧೀಜಿಯವರ ತತ್ವ ಆದರ್ಶಗಳು ಅವರು ನಡೆದು ಬಂದ ಹಾದಿ, ಭಾರತೀಯರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಸಂಘಟಿಸಿದ […]
ವಕ್ವಾಡಿ ವಿಠಲ ಶೆಟ್ಟಿ ಇವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣ
ಉಡುಪಿ( ಆ,03) : ಸ್ವರಾಜ್ಯ 75 ತಂಡದ 32ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮವನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ವಿಠಲ ಶೆಟ್ಟಿ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಇ.ಸಿ.ಆರ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ , ಹಸ್ತ ಚಿತ್ರ ಫೌಂಡೇಶನ್ ರಿಂದ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ,ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಬ್ರಹ್ಮಾವರ […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ :ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ
ಕಿರಿಮoಜೇಶ್ವರ(ಆ,2): ಇಲ್ಲಿನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಾಂಧಿ ಹಾಗೂ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02 ರಂದು ಆಚರಿಸಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಲಾಯಿತು. ಶಿಕ್ಷಕರಾದ ದೀಪಿಕಾ ಹಾಗೂ ರಾಘವೇಂದ್ರ ಇವರು ಗಾಂಧೀಜಿ ಮತ್ತು ಶಾಸ್ತ್ರಿಯವರ ಜೀವನ ಸಾಧನೆಗಳನ್ನು ಸ್ಮರಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಭಟ್ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಆ ,03): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ ಸ್ಥಾನ ಪಡೆದು,ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಕ್ರೀಡೆಯಲ್ಲಿ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಕುಂದಾಪುರ (ಆ. 03): ಪದವಿ ಪೂರ್ವ ಶಿಕ್ಷಣ ಇಲಾಖೆಯವತಿಯಿಂದ ನಡೆದ ವಿವಿಧ ಕ್ರೀಡೆಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಬಡ್ಡಿ ಪಂದ್ಯಾದಲ್ಲಿ ಸುಜಯ್ ದೇವಾಡಿಗ, ಗಣೇಶ, ರೋಹನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾದರೆ, ಖೋ ಖೋ ಪಂದ್ಯದಿಂದ ಧನುಷ್ ಮತ್ತು ಸಾನಿಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ನಾಗಪ್ಪ ದಸರಾ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜು […]